ಮಾಸ್ಟರ್ ಬ್ಲಾಸ್ಟರ್ ದಾಖಲೆ ಮುರಿದ ಕೊಹ್ಲಿ
ಕ್ಯಾಪ್ಟನ್‌ ಕೊಹ್ಲಿ ಸದ್ಯ ಸಚಿನ್‌‌ ತೆಂಡೂಲ್ಕರ್‌ ಅವರ ದಾಖಲೆ ಅಳಿಸಿ ಹಾಕಿದ್ದು, ಟೆಸ್ಟ್‌ ತಂಡದ ನಾಯಕನಾಗಿ ಆಯ್ಕೆಯಾದ ಮೇಲೆ ಅತಿ ವೇಗವಾಗಿ 1000 ರನ್‌ ಗಳಿಸಿರುವ ದಾಖಲೆ ನಿರ್ಮಿಸಿದ್ದಾರೆ.

ಕರಾವಲಿ ಕರ್ನಾಟಕ ವರದಿ
ಗಾಲ್‌:
ಶ್ರೀಲಂಕಾ ವಿರುದ್ದ ನಡೆಯುತ್ತಿರುವ ಟೆಸ್ಟ್‌ನಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಶತಕ ಸಿಡಿಸಿದ್ದಾರೆ. ಇದು ಟೆಸ್ಟ್‌ ಕ್ರಿಕೆಟ್‌ನಲ್ಲಿ ಕೊಹ್ಲಿ ಅವರ 17ನೇ ಶತಕವಾಗಿದೆ. ಲಂಕಾ ವಿರುದ್ಧ ಟೆಸ್ಟ್‌ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ ಬೇಗನೆ ವಿಕೆಟ್‌ ಒಪ್ಪಿಸಿದ್ದ ಕೊಹ್ಲಿ ಎರಡನೇ ಇನ್ನಿಂಗ್ಸ್‌ನಲ್ಲಿ ಅಜೇಯ 103 ರನ್‌ಗಳನ್ನು ಗಳಿಸಿದ್ದಾರೆ.

ಶನಿವಾರ ನಾಲ್ಕನೇ ದಿನದಾಟ ಮುಂದುವರಿಸಿದ ಭಾರತ 53 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 240ರನ್‌ ಗಳಿಸಿ ಭಾರತ ಡಿಕ್ಲೇರ್‌ ಮಾಡಿಕೊಂಡಿದ್ದು, ಶ್ರೀಲಂಕಾದ ತಂಡಕ್ಕೆ 550 ರನ್‌ಗಳ ಟಾರ್ಗೆಟ್‌ ನೀಡಿದೆ.

ಶ್ರೀಲಂಕಾ ತಂಡವನ್ನು ಮೊದಲ ಇನಿಂಗ್ಸ್‌ನಲ್ಲಿ 291 ರನ್‌ಗಳಿಗೆ ಕಡಿವಾಣ ಹಾಕಿದ ಭಾರತೀಯ ಬೌಲರ್‌ಗಳು ತಂಡಕ್ಕೆ 309 ರನ್‌ಗಳ ಬೃಹತ್ ಮುನ್ನಡೆ ತಂದುಕೊಟ್ಟರು. ಎರಡನೇ ಇನಿಂಗ್ಸ್‌ನಲ್ಲಿ ಭಾರತ ದಿನದಾಟದ ಮುಕ್ತಾಯದ ವೇಳೆ ಮೂರು ವಿಕೆಟ್‌ಗಳಿಗೆ 189 ರನ್‌ ಗಳಿಸಿದ್ದು, ಈ ಮೂಲಕ ಒಟ್ಟಾರೆ 498 ರನ್‌ಗಳ ಮುನ್ನಡೆ ಸಾಧಿಸಿತ್ತು.

ಸದ್ಯ ಎರಡನೇ ಇನಿಂಗ್ಸ್‌ ಆರಂಭಿಸಿರುವ ಶ್ರೀಲಂಕಾ 7 ಓವರ್‌ಗಳಲ್ಲಿ 2 ವಿಕೆಟ್‌ ಕಳೆದುಕೊಂಡು 37 ರನ್‌ ಗಳಿಸಿದೆ. (ಉಪುಲ್‌ ತರಂಗ 10,  ಧನುಷ್ಕಾ ಗುಣತಿಲಕ 02, ದಿಮುತ್‌ ಕರುಣರತ್ನೆ ಬ್ಯಾಟಿಂಗ್‌ 19 ಕುಶಲ್‌ ಮೆಂಡಿಸ್‌ ಬ್ಯಾಟಿಂಗ್‌ 01)

ಮಾಸ್ಟರ್ ಬ್ಲಾಸ್ಟರ್ ದಾಖಲೆ ಮುರಿದ ಕೊಹ್ಲಿ
ಕೊಹ್ಲಿ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್‌ ಪಂದ್ಯದ 2ನೇ ಇನ್ನಿಂಗ್ಸ್‌ನಲ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ. ಕ್ಯಾಪ್ಟನ್‌ ಕೊಹ್ಲಿ ಸದ್ಯ ಸಚಿನ್‌‌ ತೆಂಡೂಲ್ಕರ್‌ ಅವರ ದಾಖಲೆ ಅಳಿಸಿ ಹಾಕಿದ್ದು, ಟೆಸ್ಟ್‌ ತಂಡದ ನಾಯಕನಾಗಿ ಆಯ್ಕೆಯಾದ ಮೇಲೆ ಅತಿ ವೇಗವಾಗಿ 1000 ರನ್‌ ಗಳಿಸಿರುವ ದಾಖಲೆ ನಿರ್ಮಿಸಿದ್ದಾರೆ.

ಕೊಹ್ಲಿ ಕೇವಲ 17 ಇನ್ನಿಂಗ್ಸ್‌‌ಗಳಲ್ಲಿ ಈ ದಾಖಲೆ ಮಾಡಿದ್ದು, ಈ ಹಿಂದೆ ಸಚಿನ್‌ ತೆಂಡೂಲ್ಕರ್‌ 19 ಇನ್ನಿಂಗ್ಸ್‌ಗಳಲ್ಲಿ ಈ ದಾಖಲೆ ನಿರ್ಮಿಸಿದ್ದರು.

Related Tags: India vs Sri Lanka, Virat Kohli 17th Test Century, Virat Kohli Breaks Sachin Tendulkar Record, Cricket Nes, Karavalikarnaraka News
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ