ಎರಡನೇ ಟೆಸ್ಟ್‌: 622 ರನ್‌ಗಳ ಬೃಹತ್‌ ಮೊತ್ತ ಕಲೆ ಹಾಕಿದ ಭಾರತ
ಸದ್ಯ ಮೊದಲ ಇನಿಂಗ್ಸ್‌ ಆರಂಭಿಸಿರುವ ಶ್ರೀಲಂಕಾ 3 ಓವರ್‌ಗಳಲ್ಲಿ 1 ವಿಕೆಟ್‌ ಕಳೆದುಕೊಂಡು 1 ರನ್‌ ಗಳಿಸಿ ಸಂಕಷ್ಟಕ್ಕೆ ಸಿಲುಕಿದೆ.

ಕರಾವಳಿ ಕರ್ನಾಟಕ ವರದಿ
ಕೊಲಂಬೊ:
ಭಾರತ – ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್‌ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಭಾರತ 622 ರನ್‌ಗಳ ಬೃಹತ್‌ ಮೊತ್ತ ಕಲೆ ಹಾಕಿದೆ.

ಇಲ್ಲಿನ ಎಸ್‌ಎಸ್‌‌ಸಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಟಾಸ್‌ ಗೆದ್ದ ಭಾರತ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿತ್ತು. ದಿನದಾಟದ ಅಂತ್ಯಕ್ಕೆ 90 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 344 ರನ್‌ ಗಳಿಸಿತ್ತು.

ಚೇತೇಶ್ವರ ಪೂಜಾರ ಮತ್ತು ಅಜಿಂಕ್ಯ ರಹಾನೆ ಅವರ ಭರ್ಜರಿ ಶತಕದ ನೆರವಿನಿಂದ ಟೀಂ ಇಂಡಿಯಾ ಬೃಹತ್ ಮೊತ್ತ ಕಲೆ ಹಾಕಲು ಸಾಧ್ಯವಾಯಿತು.

ಶುಕ್ರವಾರ ಎರಡನೇ ದಿನದಾಟ ಆರಂಭಿಸಿದ ಭಾರತ 158 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 622 ರನ್‌ ಗಳಿಸಿದೆ( ಶಿಖರ್‌ ಧವನ್‌ 35, ಕೆ.ಎಲ್‌.ರಾಹುಲ್‌ 57, ಚೇತೇಶ್ವರ್ ಪೂಜಾರ 133, ವಿರಾಟ್ ಕೊಹ್ಲಿ 13, ಅಜಿಂಕ್ಯ ರಹಾನೆ 132, ಆರ್‌. ಅಶ್ವಿನ್‌ 54, ವೃದ್ಧಿಮಾನ್‌ ಸಹಾ 67, ಹಾರ್ದಿಕ್‌ ಪಾಂಡ್ಯ 20, ಮೊಹಮ್ಮದ್‌ ಶಮಿ 19, ರವೀಂದ್ರ ಜಡೇಜ ಬ್ಯಾಟಿಂಗ್‌ 70, ಉಮೇಶ್‌ ಯಾದವ್‌ ಬ್ಯಾಟಿಂಗ್‌ 8)

ಶ್ರೀಲಂಕಾ ಪರ ಹೆರತ್ 4, ಪುಷ್ಪಕುಮಾರ 2 ಮತ್ತು ಕರುಣರತ್ನೆ ಹಾಗೂ ಪೆರೇರಾ ತಲಾ 1 ವಿಕೆಟ್ ಪಡೆದಿದ್ದಾರೆ.

ಸದ್ಯ ಮೊದಲ ಇನಿಂಗ್ಸ್‌ ಆರಂಭಿಸಿರುವ ಶ್ರೀಲಂಕಾ 3 ಓವರ್‌ಗಳಲ್ಲಿ 1 ವಿಕೆಟ್‌ ಕಳೆದುಕೊಂಡು 1 ರನ್‌ ಗಳಿಸಿ ಸಂಕಷ್ಟಕ್ಕೆ ಸಿಲುಕಿದೆ.

Related Tags: India vs Sri Lanka, 2nd Test, Colombo, Ashwin, Sports News, Cricket News, Kannada News, Karavalikarnataka News
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ