ಭೀಕರ ಅಪಘಾತ: ಗೃಹಪ್ರವೇಶಕ್ಕೆ ತೆರಳುತ್ತಿದ್ದವರ ದುರ್ಮರಣ

ಕರಾವಳಿ ಕರ್ನಾಟಕ ವರದಿ
ಕೊಪ್ಪಳ:
ಮಿನಿ ಬಸ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ನಗರದ ಜಿಲ್ಲಾ ಕ್ರೀಡಾಂಗಣದ ಬಳಿಯ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಭವಿಸಿದೆ.

ಮಿನಿ ಬಸ್‌ ಚಾಲಕ ಮಹಾಂತೇಶ್ (30) ಮತ್ತು ಕೊಪ್ಪಳ ನಿವಾಸಿ ಮೀನಾಕ್ಷಮ್ಮ (40) ಮೃತಪಟ್ಟವರು.

ಈ ದುರ್ಘಟನೆಯಲ್ಲಿ 21 ಮಂದಿ ಗಾಯಗೊಂಡಿದ್ದು, ಈ ಪೈಕಿ 9 ಜನರ ಕೈ, ಕಾಲು ಮೂಳೆಗೆ ಪೆಟ್ಟಾಗಿದೆ. ಇವರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಹಲವರನ್ನು ಹುಬ್ಬಳ್ಳಿಯ ಕಿಮ್ಸ್ ಹಾಗೂ ಎಸ್‌ಡಿಎಂ ಆಸ್ಪತ್ರೆಗೆ ಕಳುಹಿಸಲಾಗಿದೆ.

ನರಗುಂದದಲ್ಲಿ ಸಂಬಂಧಿಕರ ಮನೆಯ ಗೃಹಪ್ರವೇಶವೊಂದಕ್ಕೆ ಕೊಪ್ಪಳದ ಸುಮಾರು 25 ಮಂದಿ ಮಿನಿ ಬಸ್‌ನಲ್ಲಿ ತೆರಳುತ್ತಿದ್ದಾಗ ಅಪಘಾತ ನಡೆದಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಧಾವಿಸುತ್ತಿದ್ದ ಟಿಪ್ಪರ್ ಏಕಾಏಕಿಯಾಗಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕದ ಮೇಲೇರಿ ಪಕ್ಕದ ರಸ್ತೆಗೆ ನುಗ್ಗಿತ್ತು.

ಈ ವೇಳೆಯಲ್ಲಿ ಎದುರಿನಿಂದ ಬರುತ್ತಿದ್ದ ಮಿನಿ ಬಸ್‌ಗೆ ಟಿಪ್ಪರ್ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಮಿನಿ ಬಸ್ ಚಾಲಕ ಹಾಗೂ ಬಸ್ಸಿನಲ್ಲಿದ್ದ ಮೀನಾಕ್ಷಮ್ಮ ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ.

ಅಪಘಾತದ ಬಳಿಕ ಟಿಪ್ಪರ್‌ ಚಾಲಕ ಪರಾರಿಯಾಗಿದ್ದು, ಪೊಲೀಸರು ಆತನಿಗಾಗಿ ಬಲೆ ಬೀಸಿದ್ದಾರೆ.

Related Tags: Tipper Hits Mini Bus, Driver Mahanthesh Death, Meenakshamma Death, Koppal Accident, Kannada News, Karavalikarnataka News
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ