ಹೆಮ್ಮಾಡಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಹರೀಶ್ ಭಂಡಾರಿ ಆಯ್ಕೆ

ಕರಾವಳಿ ಕರ್ನಾಟಕ ವರದಿ
ಕುಂದಾಪುರ:
ಶತಮಾನೋತ್ಸವದ ಸಂಭ್ರಮದಲ್ಲಿರುವ ಜಿಲ್ಲಾ ಅತ್ಯುತ್ತಮ ಶಾಲೆ ಪ್ರಶಸ್ತಿ ಪಡೆದುಕೊಂಡಿದ್ದ ಹೆಮ್ಮಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ಹಳೆ ವಿದ್ಯಾರ್ಥಿ ಸಂಘವನ್ನು ಆದಿತ್ಯವಾರ ರಚಿಸಲಾಯಿತು.

ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರಾಗಿ ಧಾರ್ಮಿಕ ಮುಂದಾಳು ಅಶೋಕ್ ಭಟ್, ಅಧ್ಯಕ್ಷರಾಗಿ ಸಾಮಾಜಿಕ ಮುಂದಾಳು ಹರೀಶ್ ಭಂಡಾರಿ, ಉಪಾಧ್ಯಕ್ಷರಾಗಿ ಸುಮತಿ ಆಚಾರ್ಯ, ಕಾರ್ಯದರ್ಶಿಯಾಗಿ ಶ್ರೀಕಾಂತ ಹೆಮ್ಮಾಡಿ ಆಯ್ಕೆಯಾದರು. 

ಜೊತೆ ಕಾರ್ಯದರ್ಶಿಯಾಗಿ ರಾಘವೇಂದ್ರ ಕುಲಾಲ್ ಹಾಗೂ ಚಂದ್ರ ಭಟ್, ಖಜಾಂಚಿ ರಾಘವೇಂದ್ರ ಪೂಜಾರಿ ಹೆದ್ದಾರಿಮನೆ, ಲೆಕ್ಕ ಪರಿಶೋಧಕರಾಗಿ ಲೂವಿಸ್ ಪ್ರಶಾಂತ್, ಕ್ರೀಡಾ ಕಾರ್ಯದರ್ಶಿಯಾಗಿ ಕೃಷ್ಣ ಕೋಟ್ಯಾನ್, ಜೊತೆ ಕ್ರೀಡಾ ಕಾರ್ಯದರ್ಶಿಯಾಗಿ ರವಿ ಮೊಗವೀರ, ಸಾಂಸ್ಕೃತಿಕ ಕಾರ್ಯದರ್ಶಿ ಶಶಿಕಾಂತ, ಜೊತೆ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಮಹೇಂದ್ರ ದೇವಾಡಿಗ ಹಾಗೂ ವಿನಯ್ ಮೂವತ್ತುಮುಡಿ, ಸಂಘಟನಾ ಕಾರ್ಯದರ್ಶಿಗಳಾಗಿ ಚಂದ್ರ ಪೂಜಾರಿ, ಸುಕುಮಾರ್ ಪೂಜಾರಿ, ಸಂತೋಷ ಹೆಮ್ಮಾಡಿ, ಶ್ರೀಲತಾ ಹೆಮ್ಮಾಡಿ ಹಾಗೂ ಜಯಲಕ್ಷ್ಮೀ ಆಯ್ಕೆಯಾದರು.

ಈ ಸಂದರ್ಭದಲ್ಲಿ ಹೆಮ್ಮಾಡಿ ಗ್ರಾಮಪಂಚಾಯತ್ ಅಧ್ಯಕ್ಷೆ ಜ್ಯೋತಿ ಹರೀಶ್ ಭಂಡಾರಿ, ಉಪಾಧ್ಯಕ್ಷರಾದ ಅಂತೋನಿ ಲೂವಿಸ್, ಶಾಲಾ ಎಸ್‌ಡಿಎಮ್‌ಸಿ ಅಧ್ಯಕ್ಷರಾದ ಅಶೋಕ ಹಟ್ಟಿಯಂಗಡಿ, ಉಪಾಧ್ಯಕ್ಷೆ ಲಕ್ಷ್ಮೀ ದೇವಾಡಿಗ ಸದಸ್ಯರಾದ ಶ್ರೀಧರ ಆಚಾರ್ಯ, ದೀಪಾ, ಕಲ್ಪನಾ, ವನಜಾ, ನರಸಿಂಹ ದೇವಾಡಿಗ, ಶಿಕ್ಷಕಿಯರಾದ ಅಶ್ವಿನಿ, ಭವಾನಿ, ಪೂರ್ಣಿಮಾ ಉಪಸ್ಥಿತರಿದ್ದರು.


ಶಾಲಾ ಮುಖ್ಯ ಶಿಕ್ಷಕಿ ಸುಶೀಲ ಪ್ರಸ್ತಾಪಿಸಿ ಸ್ವಾಗತಿಸಿದರು. ಪ್ರೆಸಿಲ್ಲಾ ಧನ್ಯವಾದವಿತ್ತರು.

Related Tags: Hemmady Primary School, New Committee, Old Students Union, Harish Bhandary, Ashok Bhat, Shrikanth Hemmady, Kannada News, Karnataka News, Coastal Karnataka News, Karavali News, Karavali Karnataka, Latest Kannada News, ಕರಾವಳಿ ಸುದ್ದಿ, ಕರಾವಳಿ ಕರ್ನಾಟಕ ಸುದ್ದಿ
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ