ಶ್ರೀಶಾಂತ್ ಮೇಲೆ ಹೇರಿದ್ದ ನಿಷೇಧ ರದ್ದುಗೊಳಿಸಲು ಕೋರ್ಟ್ ಆದೇಶ
2013ರಲ್ಲಿ ಮ್ಯಾಚ್ ಫಿಕ್ಸಿಂಗ್ ಆರೋಪದಡಿ ಬಿಸಿಸಿಐ ರಾಜಸ್ಥಾನ್ ರಾಯಲ್ಸ್ ತಂಡದ ಮಾಜಿ ಆಟಗಾರ ಶ್ರೀಶಾಂತ್ ಮೇಲೆ ಆಜೀವ ನಿಷೇಧ ಹೇರಿತ್ತು.

ಕರಾವಳಿ ಕರ್ನಾಟಕ ವರದಿ
ಕೊಚ್ಚಿ:
ಟೀಂ ಇಂಡಿಯಾದ ವೇಗಿ ಶ್ರೀಶಾಂತ್‌ಗೆ ವಿಧಿಸಿರುವ ನಿಷೇಧವನ್ನು ತೆರವುಗೊಳಿಸುವಂತೆ ಕೇರಳ ಹೈಕೋರ್ಟ್ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಗೆ ಸೂಚಿಸಿದೆ ಆದೇಶಿಸಿದೆ.

2013ರಲ್ಲಿ ಮ್ಯಾಚ್ ಫಿಕ್ಸಿಂಗ್ ಆರೋಪದಡಿ ಬಿಸಿಸಿಐ ರಾಜಸ್ಥಾನ್ ರಾಯಲ್ಸ್ ತಂಡದ ಮಾಜಿ ಆಟಗಾರ ಶ್ರೀಶಾಂತ್ ಮೇಲೆ ಆಜೀವ ನಿಷೇಧ ಹೇರಿತ್ತು.

ಭೂಗತ ಜಗತ್ತಿನೊಂದಿಗೆ ನಂಟು ಹೊಂದಿದ್ದ ಆರೋಪದಿಂದ ದೆಹಲಿ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯವು ಸಾಕ್ಷ್ಯಾಧಾರದ ಕೊರತೆಯಿಂದಾಗಿ 2015ರಲ್ಲಿ ಶ್ರೀಶಾಂತ್‌ರನ್ನು ದೋಷಮುಕ್ತಗೊಳಿಸಿತ್ತು. ಆದರೆ ಸ್ಪಾಟ್ ಫಿಕ್ಸಿಂಗ್ ಆರೋಪದ ಮೇಲೆ ರಾಜಸ್ಥಾನ ರಾಯಲ್ಸ್ ತಂಡದ ಮಾಜಿ ಆಟಗಾರ ಶ್ರೀಶಾಂತ್ ಅವರ ಮೇಲೆ ಬಿಸಿಸಿಐ ಹೇರಿದ ನಿಷೇಧವನ್ನು ತೆರವುಗೊಳಿಸಲು ಹಿಂದೇಟು ಹಾಕಿತ್ತು.

ಇದನ್ನು ಪ್ರಶ್ನಿಸಿ ಐಪಿಎಲ್‌ ಸ್ಪಾಟ್ ಫಿಕ್ಸಿಂಗ್ ಕಳಂಕಿತ ಆಟಗಾರ ಎಸ್. ಶ್ರೀಶಾಂತ್ ಮಾರ್ಚ್‌ನಲ್ಲಿ ಕೇರಳ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಕ್ರಿಕೆಟ್‌ನಿಂದ ದೂರ ಉಳಿಯುವಂತೆ ಆಜೀವ ನಿಷೇಧ ಹೇರಿ ಬಿಸಿಸಿಐ ಆದೇಶ ಹೊರಡಿಸಿರುವುದು ಸಂವಿಧಾನಾತ್ಮಕ ಹಕ್ಕುಗಳನ್ನು ಉಲ್ಲಂಘನೆ ಎಂದು ನ್ಯಾಯಾಲಯದಲ್ಲಿ ವಾದಿಸಲಾಗಿತ್ತು. ಕಳೆದ ಏಪ್ರಿಲ್ ತಿಂಗಳಲ್ಲಿ ಬಿಸಿಸಿಐ ಶ್ರೀಶಾಂತ್ ಮೇಲಿನ ಆಜೀವ ನಿಷೇಧವನ್ನು ತೆರವುಗೊಳಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಗೆ ಸ್ಪಷ್ಟಪಡಿಸಿತ್ತು.

2013ರ ಐಪಿಎಲ್ 6ನೇ ಆವೃತ್ತಿಯಲ್ಲಿ ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಹಗರಣ ನಡೆದಿದ್ದು, ಶ್ರೀಶಾಂತ್, ಅಜಿತ್ ಚಾಂಡೀಲಾ ಹಾಗೂ ಅಂಕಿತ್ ಚವ್ಹಾಣ್ ಅವರ ಹೆಸರು ಪ್ರಮುಖವಾಗಿ ಕೇಳಿಬರುತ್ತಿದ್ದು, ಎರಡು ವರ್ಷಗಳ ಕಾಲ ವಿಚಾರಣೆ ನಡೆಸಿದ ಬಳಿಕ ಅವರ ವಿರುದ್ಧದ ಮೊಕದ್ದಮೆಯನ್ನು ವಜಾಗೊಳಿಸಿದ ನ್ಯಾಯಾಲಯ ಇತರ 33 ಮಂದಿ ಆರೋಪಿಗಳಿಗೂ ಕ್ಲೀನ್ ಚಿಟ್ ನೀಡಿತ್ತು.ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ನೀಲ ಬನ್ಸಾಲ್ ಕೃಷ್ಣ, ತೀರ್ಪು ಪ್ರಕಟಿಸಿದ್ದು, ಆರೋಪಿಗಳ ವಿರುದ್ಧ ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದ 6 ಸಾವಿರ ಪುಟಗಳ ಆರೋಪ ಪಟ್ಟಿಯಲ್ಲಿ ಬಲವಾದ ಸಾಕ್ಷ್ಯಾಧಾರಗಳು ಇಲ್ಲದ ಕಾರಣ ಕೇಸನ್ನು ವಜಾಗೊಳಿಸಲಾಗಿದೆ ಎಂದು ನ್ಯಾಯಾಧೀಶರು ತಿಳಿಸಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.


 

Related Tags: BCCI, Lifetime Ban, Cricketer Sreesanth, Kerala High Court, Cricket News, Spoerts News, Karavalikarnataka News
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ