ಮಾಜಿ ಮುಖ್ಯಂತ್ರಿ ಎಚ್ ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

ಕರಾವಳಿ ಕರ್ನಾಟಕ ವರದಿ
ಬೆಂಗಳೂರು:
ಅನಾರೋಗ್ಯದಿಂದ ಬಳಲುತ್ತಿದ್ದ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರು ಸಿಂಗಾಪುರದ ಮೌಂಟ್‌ ಎಲಿಜಬೆತ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ.

ತೀವ್ರ ಕೆಮ್ಮು ಮತ್ತು ಕಫ‌ದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಧರ್ಮಸ್ಥಳದ ಉಜಿರೆಯಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇನ್ನಷ್ಟು ಅನಾರೋಗ್ಯ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಗುರುವಾರ ಹೆಚ್ಚಿನ ಚಿಕಿತ್ಸೆಗಾಗಿ ಸಿಂಗಾಪುರಕ್ಕೆ ತೆರಳಿದ್ದಾರೆ.

ಇದೀಗ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರು ಸಿಂಗಾಪುರದ ಮೌಂಟ್‌ ಎಲಿಜಬೆತ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

ಕೆಲ ದಿನಗಳ ಹಿಂದೆ ಕುಮಾರಸ್ವಾಮಿ ಅವರು ಉತ್ತರ ಕರ್ನಾಟಕಕ್ಕೆ ತೆರಳಿದ್ದ ಸಂದರ್ಭದಲ್ಲಿ ಅಲ್ಲಿನ ಅಭಿಮಾನಿಗಳು ಸಿಡಿಸಿದ್ದ ಪಟಾಕಿ ಹೊಗೆ ಸೇವನೆಯಿಂದ ಕೆಮ್ಮು ಮತ್ತು ಕಫ‌ ಸಮಸ್ಯೆ ಉಲ್ಬಣಗೊಂಡಿದೆ ಎನ್ನಲಾಗಿದೆ.

ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಸಿಂಗಾಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಚಿಕಿತ್ಸೆ ಪಡೆದ ಬಳಿಕ ಕುಮಾರಸ್ವಾಮಿ ಅವರು ಭಾನುವಾರ ಬೆಂಗಳೂರಿಗೆ ವಾಪಸಾಗಲಿದ್ದಾರೆ ಎಂದು ಹೇಳಲಾಗಿದೆ.

Related Tags: Mount Elizabeth Hospital Singapore, H. D. Kumaraswamy, Kannada News, Karavalikarnataka News
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ