ಕೊಲ್ಲೂರು ನೆರವು ಸ್ಥಗಿತ: ಶಾಲಾ ಮಕ್ಕಳಿಂದ ಖಾಲಿ ತಟ್ಟೆ ಪ್ರತಿಭಟನೆ

ಕರಾವಳಿ ಕರ್ನಾಟಕ ವರದಿ
ಬಂಟ್ವಾಳ:
  ಕಲ್ಲಡ್ಕ ಪ್ರಭಾಕರ ಭಟ್ ಅವರ ಶಾಲೆಗಳಿಗೆ ಕೊಲ್ಲೂರು ದೇವಳದಿಂದ ಸಿಗುತ್ತಿದ್ದ ಕೋಟ್ಯಾಂತರ ರೂಪಾಯಿ ನೆರವಿಗೆ ರಾಜ್ಯ ಸರ್ಕಾರ ಕತ್ತರಿ ಹಾಕಿರುವುದನ್ನು ಖಂಡಿಸಿ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ಹಾಗೂ ಪುಣಚದ ಶ್ರೀದೇವಿ ವಿದ್ಯಾ ಕೇಂದ್ರದ 2 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಬಿ.ಸಿ.ರೋಡ್‌ನ‌ ತಾಲೂಕು ಕಚೇರಿ ಎದುರು ಬೃಹತ್‌ ಪ್ರತಿಭಟನೆ ನಡೆಸಿದರು.





ಪ್ರತಿಭಟನೆಯ ವೇಳೆ ವಿದ್ಯಾರ್ಥಿಗಳು ಅನ್ನದ ಖಾಲಿ ತಟ್ಟೆಗಳನ್ನು ಬಡಿದು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಸಂಸ್ಥೆಗಳ ನೂರಾರು ಸಿಬ್ಬಂದಿಗಳು ಭಾಗಿಯಾಗಿದ್ದರು.

ಆರ್‌ಎಸ್‌ಎಸ್‌ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ಅವರಿಗೆ ಸೇರಿರುವ ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರ ಹಾಗೂ ಪುಣಚದ ಶ್ರೀದೇವಿ ವಿದ್ಯಾ ಕೇಂದ್ರ ಪ್ರೌಢ ಶಾಲೆಗಳಿಗೆ ಕಳೆದ ಹತ್ತು ವರ್ಷಗಳಿಂದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಿಂದ ಅನುದಾನ ನೀಡಲಾಗಿತ್ತು.

ಈ ಎರಡು ಶಾಲೆಗಳನ್ನು ಕೊಲ್ಲೂರು ಮೂಕಾಂಬಿಕಾ ದೇವಾಲಯ ದತ್ತು ಪಡೆದುಕೊಂಡಿತ್ತು. ಇದೀಗ ಕೊಲ್ಲೂರು ದೇಗುಲ ದತ್ತು ತೆಗೆದುಕೊಂಡಿದ್ದ ಆದೇಶ ಹಿಂದಕ್ಕೆ ಪಡೆಯಲಾಗಿದ್ದು, ದೇವಸ್ಥಾನದ ದುಡ್ಡು ಶಾಲೆಗೆ ನೀಡಬಾರದೆಂದು ಆದೇಶದಲ್ಲಿ ಉಲ್ಲೇಖಿಸಿತ್ತು.

ಇದನ್ನೂ ಓದಿ:
►►ಕೊಲ್ಲೂರು ದೇವಳದ ನೆರವು ಸ್ಥಗಿತ: ಕಲ್ಲಡ್ಕ ಪ್ರಭಾಕರ ಭಟ್ ಹಾಕಿದ ಸವಾಲು ಏನು ಗೊತ್ತೆ?:
http://bit.ly/2vmrZ2l
►►ಕಲ್ಲಡ್ಕ ಭಟ್ಟರ ಶಾಲೆಗೆ ಕೊಲ್ಲೂರಿನ ನೆರವು ಸ್ಥಗಿತ: ಸಂದಾಯವಾದ ಒಟ್ಟು ಮೊತ್ತವೆಷ್ಟು ಗೊತ್ತೆ? ಅಬ್ಬಬ್ಬ!: http://bit.ly/2ukYD71

Related Tags: Kalladka Prabhakar Bhat, Kollur Temple Grant, Siddaramiah Government , RSS Leader, Students Protest, Kannada News, Karnataka News, Coastal Karnataka News, Karavali News, Karavali Karnataka, Latest Kannada News, ಕರಾವಳಿ ಸುದ್ದಿ, ಕರಾವಳಿ ಕರ್ನಾಟಕ ಸುದ್ದಿ
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ