ಕಲ್ಲಡ್ಕ ಶಾಲೆಗೆ ಕೊಟ್ಟ ಹಣ ವಸೂಲಿ ಮಾಡಲಾಗುವುದು: ರಮಾನಾಥ ರೈ

ಕರಾವಳಿ ಕರ್ನಾಟಕ ವರದಿ
ಮಡಿಕೇರಿ:
ಕಲ್ಲಡ್ಕ ಪ್ರಭಾಕರ ಭಟ್ಟರು ನಡೆಸುತ್ತಿರುವ ಶಾಲೆಗೆ ಕಾನೂನುಬಾಹಿರವಾಗಿ ಕೊಲ್ಲೂರು ದೇವಸ್ಥಾನದಿಂದ ಸಂದಾಯವಾಗುತ್ತಿರುವ ಆರ್ಥಿಕ ನೆರವಿಗೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದ್ದು, ಹಲವಾರು ವಿವಾದಗಳಿಗೆ ಕಾರಣವಾಗಿದೆ.

ಇದೀಗ ಎರಡೂ ಶಾಲೆಗಳಿಗೆ ನೀಡಿರುವ ಅನುದಾನವನ್ನು ವಾಪಾಸ್ ಪಡೆಯಲು ಇಲಾಖೆ ಕ್ರಮ ಕೈಗೊಳ್ಳಲಿದೆ ಎಂದು ರಾಜ್ಯ ಅರಣ್ಯ ಸಚಿವ ರಮಾನಾಥ ರೈ ಹೇಳಿದ್ದಾರೆ.

ದ್ವೇಷ ರಾಜಕಾರಣಕ್ಕಾಗಿ ಅನುದಾನ ಕಡಿತ ಮಾಡಲಾಗಿದೆ ಎಂಬ ಪ್ರಭಾಕರ ಭಟ್ಟರ ಆರೋಪದಲ್ಲಿ ಸತ್ಯಾಂಶವಿಲ್ಲ. ಹಣ ದುರುಪಯೋಗದ ಮಾಹಿತಿ ಅರಿತು ಇಲಾಖೆ ಕ್ರಮ ಕೈಗೊಂಡಿದೆ.

ಕೊಲ್ಲೂರು ಮೂಕಾಂಬಿಕಾ ದೇಗುಲದ ಆಡಳಿತ ವ್ಯಾಪ್ತಿಯನ್ನೂ ಮೀರಿ ಎರಡು ಸಂಸ್ಥೆಗಳಿಗೆ ಅನುದಾನ ಸಂದಾಯವಾಗುತ್ತಿತ್ತು. ಇದಕ್ಕೆ ಸರ್ಕಾರ ಬ್ರೇಕ್ ಹಾಕಿದೆ. ಹಲವು ತಿಂಗಳ ಹಿಂದೆ ಈ ಪ್ರಕ್ರಿಯಿಯೆ ನಡೆದಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ರಾಜ್ಯದ ಸಣ್ಣ ದೇವಸ್ಥಾನಗಳ ಅಭಿವೃದ್ದಿ
ಮುಜರಾಯಿ ಇಲಾಖೆಗೆ ಸೇರಿದ ದೇವಸ್ಥಾನಗಳ ಅನುದಾನವನ್ನು ವಿದ್ಯಾಸಂಸ್ಥೆಗಳಿಗೆ ನೀಡಲು ಕಾನೂನಿನಲ್ಲಿ ಅವಕಾಶವಿಲ್ಲ. ಸರ್ಕಾರ ಈವರೆಗೂ ನೀಡಿರುವ ಅನುದಾನವನ್ನು ವಾಪಸ್‌ ಪಡೆದು, ರಾಜ್ಯದ ಸಣ್ಣ ದೇವಸ್ಥಾನಗಳ ಅಭಿವೃದ್ಧಿಗೆ ಬಳಸಲಾಗುವುದು.

ಪ್ರಭಾಕರ್‌ ಭಟ್‌ ಸಾಮಾನ್ಯ ವ್ಯಕ್ತಿಯಲ್ಲ. ಆರ್ಥಿಕವಾಗಿ ಸಬಲರಿದ್ದಾರೆ. ಧಾರ್ಮಿಕ ವಿಚಾರಗಳಲ್ಲಿ ಮಾತ್ರ ಸಕ್ರಿಯರಾಗಿಲ್ಲ. ಅವರು ರಿಯಲ್‌ ಎಸ್ಟೇಟ್ ನಡೆಸುವುದು ಎಲ್ಲರಿಗೂ ಗೊತ್ತು ಎಂದು ರಮಾನಾಥ ರೈ ಹೇಳಿದರು.

ಸರ್ಕಾರಕ್ಕೆ ಹೊರೆಯಾಗುವುದಿಲ್ಲ
ರಾಜ್ಯದಲ್ಲಿ ಸಾವಿರಾರು ಶಾಲೆಗಳಿಗೆ ಬಿಸಿಯೂಟ ನೀಡಲಾಗುತ್ತಿದ್ದು, ಪ್ರಭಾಕರ ಭಟ್ ನೇತೃತ್ವದ ಎರಡು ಶಾಲೆಯ ಮಕ್ಕಳಿಗೆ ಬಿಸಿಯೂಟ ನೀಡಲು ಸರ್ಕಾರಕ್ಕೆ ಯಾವುದೇ ಹೊರೆಯಾಗುವುದಿಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.

2007ರಲ್ಲಿ ಬಿಜೆಪಿ ಸರಕಾರ ಆಡಳಿತದಲ್ಲಿದ್ದಾಗ ಈ ಎರಡು ಶಾಲೆಗಳನ್ನು ದತ್ತು ತೆಗೆದುಕೊಳ್ಳಲಾಗಿತ್ತು. ಕಳೆದ ಹತ್ತು ವರ್ಷಗಳಲ್ಲಿ ಕೊಲ್ಲೂರು ದೇವಸ್ಥಾನದಿಂದ ಶ್ರೀರಾಮ ವಿದ್ಯಾಕೇಂದ್ರಕ್ಕೆ 2.32 ಕೋಟಿ ಅನುದಾನ ಲಭಿಸಿದ್ದರೆ, ಪುಣಚ ಶ್ರೀದೇವಿ ಶಾಲೆಗೆ 50.72 ಲಕ್ಷ ನೆರವು ನೀಡಲಾಗಿತ್ತು.

ಸರ್ಕಾರದ ನಡೆಯನ್ನು ಖಂಡಿಸಿರುವ ಶಾಲೆಗಳ ಸಂಚಾಲಕ ಕಲ್ಲಡ್ಕ ಪ್ರಭಾಕರ್ ಭಟ್ "ಇದು ಸಿದ್ದರಾಮಯ್ಯ ಸರ್ಕಾರದ ದ್ವೇಷ ರಾಜಕಾರಣ. ರಾಜ್ಯ ಸರಕಾರ ಬಡ ಮಕ್ಕಳ ಹೊಟ್ಟೆಗೆ ಹೊಡೆದಿದೆ. ಈ ವಿದ್ಯಾಕೇಂದ್ರದಲ್ಲಿ ಕಲಿಯುತ್ತಿರುವುದು ಸಿದ್ಧರಾಮಯ್ಯ ಹೇಳಿಕೊಂಡು ತಿರುಗಾಡುವ ಅಹಿಂದದ ಮಕ್ಕಳೇ. ಶೇಕಡಾ 90ರಷ್ಟು ಅಹಿಂದ ವರ್ಗಕ್ಕೆ ಸೇರಿದ ಬಡ ಮಕ್ಕಳು ಕೇಂದ್ರದಲ್ಲಿದ್ದಾರೆ. ಇವರಿಗೆ ರಾಜ್ಯ ಸರಕಾರ ಅನ್ಯಾಯ ಮಾಡಿದೆ ಎಂದು ಕಿಡಿಕಾರಿದ್ದರು.

ಅಲ್ಲದೇ ಯಾವುದೇ ಕಾರಣಕ್ಕೂ ಸರ್ಕಾರದ ಎದುರು ಮತ್ತೆ ಈ ನಿರ್ಧಾರ ಪುನರ್ ಪರಿಶೀಲಿಸಿ ಎಂದು ಕೇಳುವ ಪ್ರಶ್ನೆಯೆ ಇಲ್ಲ. ನಾನು ಅನುದಾನ ಬಾರದೆ ಇದ್ದರೂ ಬಡವರ ಸೇವೆ ಮಾಡುತ್ತೇನೆ. ಭಿಕ್ಷಾ ಪಾತ್ರೆ ಹಿಡಿದು ಜನರ ಎದುರು ಹೋಗಿ ಶಾಲೆಯನ್ನು ನಡೆಸುತ್ತೇನೆ ಎಂದು ಭಟ್ ಸರ್ಕಾರಕ್ಕೆ ಸವಾಲು ಹಾಕಿದ್ದರು. ಆದರೂ ಶುಕ್ರವಾರ ತಾಲೂಕು ಕಚೇರಿ ಎದುರು ಸಾವಿರಾರು ಮಕ್ಕಳನ್ನು ಕರೆತಂದು ಪ್ರತಿಭಟನೆ ನಡೆಸಿದ್ದರು.

ಇದನ್ನೂ ಓದಿ:
►►ಕೊಲ್ಲೂರು ನೆರವು ಸ್ಥಗಿತ: ಕಲ್ಲಡ್ಕ ಶಾಲಾ ಮಕ್ಕಳಿಂದ ಖಾಲಿ ತಟ್ಟೆ ಬಡಿದು ಪ್ರತಿಭಟನೆ:
http://bit.ly/2uunaqv
►►ಕೊಲ್ಲೂರು ದೇವಳದ ನೆರವು ಸ್ಥಗಿತ: ಕಲ್ಲಡ್ಕ ಪ್ರಭಾಕರ ಭಟ್ ಹಾಕಿದ ಸವಾಲು ಏನು ಗೊತ್ತೆ?: http://bit.ly/2vmrZ2l
►►ಕಲ್ಲಡ್ಕ ಭಟ್ಟರ ಶಾಲೆಗೆ ಕೊಲ್ಲೂರಿನ ನೆರವು ಸ್ಥಗಿತ: ಸಂದಾಯವಾದ ಒಟ್ಟು ಮೊತ್ತವೆಷ್ಟು ಗೊತ್ತೆ? ಅಬ್ಬಬ್ಬ!: http://bit.ly/2ukYD71

Related Tags: Kalladka Prabhakar Bhat, Ramanath Rai, Kollur Temple Grant, Siddaramiah Government , RSS Leader, Kollur Temple, Kalladka School. Prabhakar Bhat, Kannada News, Karnataka News, Coastal Karnataka News, Karavali News, Karavali Karnataka, Latest Kannada News, ಕರಾವಳಿ ಸುದ್ದಿ, ಕರಾವಳಿ ಕರ್ನಾಟಕ ಸುದ್ದಿ
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ