ಮೇಟಿ ಸೆಕ್ಸ್ ಸಿ.ಡಿ ಪ್ರಕರಣ: ಮಹಿಳೆಯಿಂದ ಆತ್ಮಹತ್ಯೆಗೆ ಯತ್ನ

ಕರಾವಳಿ ಕರ್ನಾಟಕ ವರದಿ
ಬಾಗಲಕೋಟೆ:
ತೀವ್ರ ಟೀಕೆಗೆ ಗ್ರಾಸವಾಗಿದ್ದ ಮಾಜಿ ಅಬಕಾರಿ ಸಚಿವ ಎಚ್ ವೈ ಮೇಟಿ ಅವರ ರಾಸಲೀಲೆ ಸಿಡಿ ಪ್ರಕರಣದ ಸಂತ್ರಸ್ತ ಮಹಿಳೆ ಭಾನುವಾರ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ.


ಮೇಟಿ ಅವರ ರಾಸಲೀಲೆ ಸಿಡಿ ಪ್ರಕರಣದ ಸಂತ್ರಸ್ತ ಮಹಿಳೆ ವಿಜಯಲಕ್ಷ್ಮೀ ಅವರು ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.

ತಕ್ಷಣ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸದ್ಯ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಮೇಟಿ ಬೆಂಬಲಿಗರಿಂದ ತನಗೆ ನಿರಂತರ ಬೆದರಿಕೆ ಕರೆ ಬರುತ್ತಿದ್ದು, ಇದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿರುವುದಾಗಿ ವಿಜಯಲಕ್ಷ್ಮಿ ಅವರು ಆಸ್ಪತ್ರೆಯಲ್ಲಿ ಪ್ರತಿಕ್ರಿಯಿಸಿದ್ದಾರೆ.

ಎಂಟು ತಿಂಗಳ ಹಿಂದೆ ಅಬಕಾರಿ ಸಚಿವರಾಗಿದ್ದ ಮೇಟಿ ಅವರೊಂದಿಗೆ ಮಹಿಳೆ ರಾಸಲೀಲೆಯಲ್ಲಿ ತೊಡಗಿದ್ದಾರೆಂದು ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗಿತ್ತು.

ಈ ವಿವಾದದಿಂದ ಮೇಟಿ ಅವರು ತಮ್ಮ ಸಚಿವ ಸ್ಥಾನವನ್ನು ತೊರೆದಿದ್ದರು.

Related Tags: Bagalkot, H Y Meti CD Controversy, Sex Scandal, Vijayalakshmi Suicide Attempt, Kannada News, Karavalikarnataka News
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ