ಜೆಡಿಎಸ್‌ ಬಂಡಾಯ ಶಾಸಕರ ಕಾಂಗ್ರೆಸ್ ಸೇರ್ಪಡೆಗೆ ರಾಹುಲ್ ಸಮ್ಮತಿ

ಕರಾವಳಿ ಕರ್ನಾಟಕ ವರದಿ
ಬೆಂಗಳೂರು
: ಜೆಡಿಎಸ್‌ನಿಂದ ಅಮಾನತು'ಗೊಂಡಿರುವ 7 ಬಂಡಾಯ ಶಾಸಕರನ್ನು  ಕಾಂಗ್ರೆಸ್'ಗೆ ಸೇರ್ಪಡೆಗೊಳ್ಳಲು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಸಮ್ಮತಿ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ನವದೆಹಲಿಗೆ ಹೈಕಮಾಂಡ್ ಜೊತೆ ಚರ್ಚಿಸುವ ಸಲುವಾಗಿ ಭೇಟಿ ನೀಡುರುವ ಸಿದ್ದರಾಮಯ್ಯ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

7 ಶಾಸಕರನ್ನು ಜೆಡಿಎಸ್'ನಿಂದ ಅಮಾನತು ಮಾಡಲಾಗಿದ್ದು ಇವರನ್ನು ರಕ್ಷಣೆ ಮಾಡುವ ಜವಾಬ್ದಾರಿಯನ್ನು ರಾಹುಲ್ ಗಾಂಧಿ ತೆಗೆದುಕೊಂಡಿದ್ದಾರೆ.

ಈ ವರ್ಷದ ಡಿಸೆಂಬರ್ ಅಥವಾ ಮುಂದಿನ ಜನವರಿಯಲ್ಲಿ ಇವರೆಲ್ಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ.

ತಮ್ಮ ಕ್ಷೇತ್ರಗಳಲ್ಲಿ ಬಲಿಷ್ಠರಾಗಿರುವುದರಿಂದ ಇವರ ಆಗಮನದಿಂದ ಕಾಂಗ್ರೆಸ್'ಗೆ ಲಾಭವಾಗಲಿದೆ ಎಂದ ಸಿದ್ದರಾಮಯ್ಯ ಬಿಜೆಪಿಯ ಹಲವು ನಾಯಕರು ಕಾಂಗ್ರೆಸ್ ಸೇರಲು ಆಸಕ್ತಿ ತೋರಿದ್ದಾರೆ ಎಂದೂ ಹೇಳಿದ್ದಾರೆ.

Related Tags: Rebel JDS MLAs. Karnataka,Suspended JDS MLAs, Siddaramiah,
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ