ತೆಂಕುತಿಟ್ಟಿನ ಶ್ರೇಷ್ಠ ಭಾಗವತ ಕುಬಣೂರು ಶ್ರೀಧರ ರಾವ್ ನಿಧನ

ಕರಾವಳಿ ಕರ್ನಾಟಕ ವರದಿ

ಮಂಗಳೂರು:
ತೆಂಕುತಿಟ್ಟಿನ ಶ್ರೇಷ್ಠ ಭಾಗವತ, ಮಾಸ ಪತ್ರಿಕೆಯೊಂದರ ಸಂಪಾದಕ ಹಾಗೂ ಕಟೀಲು ನಾಲ್ಕನೇ ಮೇಳದ ಪ್ರಧಾನ ಭಾಗವತರಾಗಿದ್ದ ಕುಬಣೂರು ಶ್ರೀಧರ ರಾವ್ ನಿಧನರಾಗಿದ್ದಾರೆ.

ತೀವ್ರ ಜ್ವರದಿಂದಾಗಿ ಬಳಲುತ್ತಿದ್ದ ಶ್ರೀಧರ ರಾವ್ ಇಂದು ನಸುಕಿನ ಜಾವ ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ.

ಆರಂಭದಲ್ಲಿ ಕದ್ರಿ, ನಂದಾವರ, ಅರುವ, ಬಪ್ಪನಾಡು, ಕಾಂತಾವರ ಮೇಳದಲ್ಲಿ ತಿರುಗಾಟ ನಡೆಸಿ ಕಳೆದ ಎರಡುವರೆ ದಶಕಗಳಿಂದ ಕಟೀಲು ಮೇಳದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅಲ್ಲದೇ 27 ವರ್ಷದಿಂದ ‘ಯಕ್ಷ ಪ್ರಭ’ ಮಾಸ ಪತ್ರಿಕೆಯ ಸಂಪಾದಕ ಮತ್ತು ಪ್ರಕಾಶಕರಾಗಿದ್ದರು.

ಮೂಲತಃ ಕಾಸರಗೋಡು ಜಿಲ್ಲೆಯ ಕುಬಣೂರಿನಲ್ಲಿ ಹುಟ್ಟಿದ ಶ್ರೀಧರ ರಾವ್ ಮೆಕ್ಯಾನಿಕಲ್ ಎಂಜಿನಿಯರಿಂಗ್‍ನಲ್ಲಿ ಡಿಪ್ಲೊಮಾ ವಿದ್ಯಾಭ್ಯಾಸ ಮುಗಿಸಿದ್ದರಾದರೂ ತನ್ನ ಇಡೀ ಜೀವನವನ್ನು ಯಕ್ಷಗಾನ ಭಾಗವತಿಕೆಗೆ ಸಮರ್ಪಿಸಿದರು.

ಪ್ರಾರಂಭದಲ್ಲಿ ಉಪ್ಪಳ ಕೃಷ್ಣ ಮಾಸ್ತರ್ ಅವರಿಂದ ಮದ್ದಳೆ, ಟಿ. ಗೋಪಾಲಕೃಷ್ಣ ಮಯ್ಯ ಹಾಗೂ ಮಾಂಬಾಡಿ ನಾರಾಯಣ ಭಾಗವತರಿಂದ ಯಕ್ಷಗಾನ ಭಾಗವತಿಕೆ ಕಲಿತ ಇವರು ಟಿ. ರಾಘವ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತವನ್ನು ಅಭ್ಯಾಸ ಮಾಡಿದ್ದರು.

Related Tags: Thenkutittu, Yakshagana Bhagavata, Sridhar Rao Death, Kannada News, Karnataka News, Coastal Karnataka News, Karavali News, Karavali Karnataka, Latest Kannada News, ಕರಾವಳಿ ಸುದ್ದಿ, ಕರಾವಳಿ ಕರ್ನಾಟಕ ಸುದ್ದಿ
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ