ಸಿದ್ದರಾಮಯ್ಯ ನೇತೃತ್ವದಲ್ಲೇ ಮುಂದಿನ ಚುನಾವಣೆ: ಕೆ.ಸಿ. ವೇಣುಗೋಪಾಲ್‌

ಕರಾವಳಿ ಕರ್ನಾಟಕ ವರದಿ

ಬೆಂಗಳೂರು:
ಕಾಂಗ್ರೆಸ್ ಪಕ್ಷವು ಮುಂಬರುವ ವಿಧಾನಸಭಾ ಚುನಾವಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲೇ ಎದುರಿಸಲಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಗೊಂದಲದ ಹೇಳಿಕೆ ನೀಡುವವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ಎಚ್ಚರಿಸಿದ್ದಾರೆ.

ವಿಧಾನಸೌಧದ ಸಭಾಂಗಣದಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಕಾಂಗ್ರೆಸ್ ಶಾಸಕರನ್ನು ತರಾಟೆಗೈದ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌, ಮುಂದಿನ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ಯಾವುದೇ ಶಾಸಕರು ತಲೆ ಕೆಡಿಸಿಕೊಳ್ಳುವುದು ಬೇಡ. ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದು ನಮ್ಮ ಮುಂದಿರುವ ಗುರಿ. ಈ ಬಗ್ಗೆ ಮಾಧ್ಯಮಗಳ ಮುಂದೆ ಯಾರೊಬ್ಬರೂ ಬಹಿರಂಗ ಹೇಳಿಕೆ ನೀಡಕೂಡದು ಎಂದು ತಾಕೀತು ಮಾಡಿದ್ದಾರೆ.

ಸಚಿವರ ವಿರುದ್ಧ ವೇಣುಗೋಪಾಲ್‌ ಗರಂ
ಪ್ರತಿಪಕ್ಷಗಳ ಆರೋಪಗಳಿಗೆ ತಕ್ಕ ಉತ್ತರ ನೀಡದೇ ಇರುವ ಸಚಿವರ ವಿರುದ್ಧ ವೇಣುಗೋಪಾಲ್‌ ಗರಂ ಆದರು. ಜೊತೆಗೆ, ಪ್ರತಿಪಕ್ಷಗಳ ಪ್ರತಿ ಟೀಕೆಗೆ ಮುಖ್ಯಮಂತ್ರಿಗಳೊಬ್ಬರೇ ತಿರುಗೇಟು ನೀಡಿದರೆ ಸಾಲದು, ಎಲ್ಲರೂ ಪ್ರತಿಕ್ರಿಯಿಸಬೇಕು ಎಂದೂ ಖಡಕ್ಕಾಗಿ ಸೂಚಿಸಿದ್ದಾರೆ.

ಕಳೆದ ನಾಲ್ಕೂವರೆ ವರ್ಷದಲ್ಲಿ ಸಚಿವರು, ಸರ್ಕಾರ ಹಾಗೂ ಪಕ್ಷದ ವಿರುದ್ಧ ಬಂದಿರುವ ಆರೋಪಗಳಿಗೆ ಪ್ರತಿಕ್ರಿಯೆ ನೀಡದೆ ಮೌನ ವಹಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಅವರು, ಸರ್ಕಾರದ ಸಾಧನೆಗಳನ್ನು ಹೇಳಿಕೊಳ್ಳಲು ಎಷ್ಟು ಪತ್ರಿಕಾಗೋಷ್ಠಿ ನಡೆಸಿದ್ದೀರಿ? ಪ್ರತಿಪಕ್ಷಗಳ ಟೀಕೆಗಳಿಗೆ ಎಷ್ಟು ಪ್ರತಿಕ್ರಿಯೆ ನೀಡಿದ್ದೀರಿ? ಎಂದು ಸಚಿವರಿಗೆ ಮಾಹಿತಿ ನೀಡುವಂತೆ ವೇಣುಗೋಪಾಲ ಕೇಳಿದ್ದಾರೆ.

ಪ್ರತಿಪಕ್ಷಗಳ ಪ್ರತಿಯೊಂದು ಟೀಕೆಗೂ ಮುಖ್ಯ ಮಂತ್ರಿಯೊಬ್ಬರೇ ತಿರುಗೇಟು ನೀಡಿದರೆ ಸಾಲದು. ಎಲ್ಲರೂ ಪ್ರತಿಕ್ರಿಯೆ ನೀಡಬೇಕು. ಪಕ್ಷ ನಿಮ್ಮನ್ನು ಮಂತ್ರಿಗಳನ್ನಾಗಿ ಮಾಡಿದೆ. ಪಕ್ಷ ಇಲ್ಲದಿದ್ದರೆ ಅಧಿಕಾರ ಇಲ್ಲ ಎನ್ನುವ ಮಾತನ್ನು ಸಚಿವರಿಗೆ ಹೇಳಿದ್ದಾರೆ.

ನರೇಂದ್ರ ಮೋದಿ ಸಾಧನೆ ಶೂನ್ಯ
ಕರ್ನಾಟಕವನ್ನು ಕಾಂಗ್ರೆಸ್ ಮುಕ್ತಗೊಳಿಸಿದರೆ ಬಿಜೆಪಿ ದಾರಿ ಸುಗಮವಾಗುತ್ತದೆ ಎಂದು ಮೋದಿ, ಅಮಿತ್ ಷಾ ಆಲೋಚಿಸಿದ್ದಾರೆ. ಅವರ ಯತ್ನ ಯಶಸ್ವಿಯಾದರೆ ಪ್ರಜಾಪ್ರಭುತ್ವಕ್ಕೆ ಆತಂಕ ಒದಗಲಿದೆ. ಇದು ತಪ್ಪಬೇಕಾದರೆ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ್ನು ಗೆಲ್ಲಿಸಲು ಪಣತೊಡಬೇಕು.

ಪ್ರಧಾನಿ ನರೇಂದ್ರ ಮೋದಿ ಅವರದ್ದು ಬಾಯಿ ಬಡಾಯಿ. ಸಾಧನೆ ಶೂನ್ಯ. ಆದರೂ ಬಿಜೆಪಿಯವರು ಜನರಿಗೆ ಸುಳ್ಳು ಹೇಳಿ ನಂಬಿಸುತ್ತಿದ್ದಾರೆ. ನಾವು ಸುಳ್ಳು ಹೇಳುವ ಅಗತ್ಯವಿಲ್ಲ, ನಮ್ಮ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವ ಕೆಲಸ ಮಾಡಿದರೆ ನೂರಕ್ಕೆ ಇನ್ನೂರರಷ್ಟು ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ ಎಂದರು.

ಇಂದು ಹೆಚ್ಚು ಓದಿದ ಸುದ್ದಿಗಳು
►►ಗೌರಿ ಲಂಕೇಶ್ ಹತ್ಯೆ: ಸನಾತನ ಸಂಸ್ಥೆಯ ಐವರು ಕಾರ್ಯಕರ್ತರ ಮೇಲೆ ಶಂಕೆ:
http://bit.ly/2ggYc4R
►►ಮಂಗಳೂರಿನಲ್ಲಿ ಐಸಿಸ್ ತರಬೇತಿ ಎಂದವರ ತನಿಖೆಯಾಗಲಿ: ಖಾದರ್: http://bit.ly/2yLjzlA
►►ಪತ್ರಕರ್ತೆ ಗೌರಿ ಲಂಕೇಶ್ ಹಂತಕರನ್ನು ಕಂಡಿದ್ದ ವಿದ್ಯಾರ್ಥಿ: http://bit.ly/2ysa3aI
►►ಭೀಕರ ಅಪಘಾತ: ಟ್ರಕ್-ಕಾರು ಢಿಕ್ಕಿ. ನಾಲ್ವರು ವಿದ್ಯಾರ್ಥಿಗಳ ಸಾವು: http://bit.ly/2xkhIaR

Related Tags: Venugopal, Congress, KC Venugopal to Bengaluru MLAs, Kannada News, Karavalikarnataka News
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ