ಟಿ-20 ಸರಣಿಯಿಂದ ಆಸೀಸ್ ನಾಯಕ ಸ್ಟೀವ್ ಸ್ಮಿತ್ ಔಟ್

ಕರಾವಳಿ ಕರ್ನಾಟಕ ವರದಿ

ರಾಂಚಿ:
ಭಾರತ-ಆಸ್ಟ್ರೇಲಿಯಾ ನಡುವಿನ ಟಿ–20 ಸರಣಿಯ ಮೊದಲ ಪಂದ್ಯ ಇಂದು ರಾಂಚಿಯಲ್ಲಿ ನಡೆಯಲಿದ್ದು, ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನಾಯಕ ಸ್ಟೀವ್ ಸ್ಮಿತ್ ಗಾಯದ ಸಮಸ್ಯೆಯಿಂದ ಭಾರತ ವಿರುದ್ಧದ ಟಿ-20 ಸರಣಿಯಿಂದ ಹೊರ ನಡೆದಿದ್ದಾರೆ.

ಗಾಯದ ಸಮಸ್ಯೆಯಿಂದಾಗಿ ಭಾರತ ಪ್ರವಾಸವನ್ನು ಅರ್ಧಕ್ಕೆ ಮೊಟಕುಗೊಳಿಸಿ ತವರಿಗೆ ಮರಳಲಿದ್ದಾರೆ. ಗಾಯದ ಸಮಸ್ಯೆಯಿಂದ ಭಾರತ ವಿರುದ್ಧದ ಟಿ-20 ಸರಣಿಯಿಂದ ಹೊರ ನಡೆದಿದ್ದಾರೆ.
 
ಭಾನುವಾರ ನಡೆದ ಭಾರತ ವಿರುದ್ಧದ 5ನೇ ಏಕದಿನ ಪಂದ್ಯದಲ್ಲಿ ಸ್ಮಿತ್ ಬಲ ಭುಜಕ್ಕೆ ಗಾಯವಾಗಿರುವ ಹಿನ್ನೆಲೆಯಲ್ಲಿ ಭಾರತ ಪ್ರವಾಸವನ್ನು ಅರ್ಧಕ್ಕೆ ಮೊಟಕುಗೊಳಿಸಿ ತವರಿಗೆ ಮರಳಲಿದ್ದಾರೆ. ಈ ಮೂಲಕ ಸ್ಮಿತ್ ಭಾರತದ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯಿಂದ ಹೊರಗುಳಿಯಲಿದ್ದಾರೆ.

ನಾಯಕ ಸ್ಮಿತ್ ಅನುಪಸ್ಥಿತಿಯಲ್ಲಿ ಆಸ್ಟ್ರೇಲಿಯಾ ತಂಡವನ್ನು ಡೇವಿಡ್ ವಾರ್ನರ್ ಮುನ್ನಡೆಸಲಿದ್ದಾರೆ. ಸ್ಮಿತ್ ಸ್ಥಾನವನ್ನು ತಂಡದಲ್ಲಿ ಮಾರ್ಕಸ್ ಸ್ಟೊಯಿನಿಸ್ ಪಡೆದಿದ್ದಾರೆ.

ಶುಕ್ರವಾರ ಅಭ್ಯಾಸದ ವೇಳೆ ಸ್ಮಿತ್ ಸ್ವಲ್ಪ ಸಮಯದ ಕಾಲ ಮೈದಾನದಲ್ಲಿ ಅಭ್ಯಾಸವನ್ನು ನಡೆಸಿದ್ದರು. ನಂತರ ತಂಡದ ವೈದ್ಯರ ಬಳಿ ಮಾತನಾಡಿ ವಿಶಾಂತ್ರಿಯನ್ನು ಪಡೆಯುವ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.

ಭಾರತ ವಿರುದ್ಧ ಆಸ್ಟ್ರೇಲಿಯಾ, ತಮ್ಮ ಐದು ಪಂದ್ಯಗಳ ಏಕದಿನ ಸರಣಿಯನ್ನು 4-1 ಅಂತರದಿಂದ ಕಳೆದುಕೊಂಡಿದ್ದು, ಇಂದಿನಿಂದ ಮೂರು ಪಂದ್ಯಗಳ ಟಿ20 ಸರಣಿ ಪ್ರಾರಂಭವಾಗಲಿದ್ದು, ಇಂದು ಮೊದಲ ಟಿ20 ಪಂದ್ಯ ರಾಂಚಿಯಲ್ಲಿ ನಡೆಯಲಿದೆ.

ಇದನ್ನೂ ಓದಿ:
ಭಾರತ–ಆಸ್ಟ್ರೇಲಿಯಾ ಟಿ–20 ಸರಣಿ: ಗೆಲುವಿನ ವಿಶ್ವಾಸದಲ್ಲಿ ಕೊಹ್ಲಿ ಪಡೆ:
http://bit.ly/2y6rH2H

ಇಂದು ಹೆಚ್ಚು ಓದಿದ ಸುದ್ದಿಗಳು
►►ಕುಂದಾಪುರದ ಜ್ಯೋತಿಷಿಯಿಂದ ಗೋವಾದಲ್ಲಿ ಯುವತಿ ಅತ್ಯಾಚಾರ:
http://bit.ly/2gjxetp
►►ರಾಜಕೀಯದಲ್ಲಿ ಪೊಲೀಸ್ ಪ್ರಯೋಗಕ್ಕೆ ಸಿದ್ಧ: ಅನುಪಮಾ ಶೆಣೈ: http://bit.ly/2y0FyFZ
►►ಝುಬೈರ್ ಹತ್ಯೆಗೆ ಬಿಜೆಪಿ ಪ್ರತಿಭಟನೆ: 40 ಲಕ್ಷ ಪರಿಹಾರಕ್ಕೆ ಆಗ್ರಹ: http://bit.ly/2y5SUTs
►►ಕೋಮುವಾದಿ ಚಟುವಟಿಕೆ ತಡೆಗೆ ಕಠಿಣ ಕ್ರಮ: ಹೇಮಂತ್ ನಿಂಬಾಳ್ಕರ್: http://bit.ly/2yvNhin

Related Tags: Steve Smith Injury, Returns Home From India, Smith Out of T20Is Against , Sports News, Kannada News, Karavalikarnataka News
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ