ಮೊದಲ ಟಿ–20 ಪಂದ್ಯ: ಆಸೀಸ್ ವಿರುದ್ದ ಭಾರತಕ್ಕೆ ಜಯ
ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 9 ವಿಕೆಟ್‌ಗಳ ಗೆಲುವು ಸಾಧಿಸಿದೆ. ಈ ಮೂಲಕ ಆಸೀಸ್ ವಿರುದ್ಧ ಟೀಂ ಇಂಡಿಯಾ ಟಿ-20 ಕ್ರಿಕೆಟ್ ಪಂದ್ಯದಲ್ಲಿ ಸತತ 7ನೇ ಗೆಲುವು ದಾಖಲಿಸಿದೆ.

ಕರಾವಳಿ ಕರ್ನಾಟಕ ವರದಿ

ರಾಂಚಿ:
ಭಾರತೀಯ ಬೌಲರ್‌ಗಳ ಕರಾರುವಕ್ಕಾದ ಬೌಲಿಂಗ್ ದಾಳಿಯ ಪರಿಣಾಮ ಮೊದಲನೇ ಟಿ-20 ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಗೆಲುವು ಸಾಧಿಸಿದೆ. ಈ ಮೂಲಕ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಟಿ-20 ಕ್ರಿಕೆಟ್ ಪಂದ್ಯದಲ್ಲಿ ಸತತ 7ನೇ ಗೆಲುವು ಸಾಧಿಸಿದೆ

ವೇಗಿ ಜಸ್‌ಪ್ರೀತ್‌ ಬೂಮ್ರಾ (17ಕ್ಕೆ2) ಮತ್ತು ಕುಲದೀಪ್‌ ಯಾದವ್‌ (16ಕ್ಕೆ2) ಅವರ ಪರಿಣಾಮಕಾರಿ ಬೌಲಿಂಗ್‌ ಬಲದಿಂದ ಭಾರತ ತಂಡ ಮೊದಲ ಟಿ–20 ಪಂದ್ಯದಲ್ಲಿ 9 ವಿಕೆಟ್‌ಗಳಿಂದ ಜಯ ದಾಖಲಿಸಿ 3 ಪಂದ್ಯಗಳ ಸರಣಿಯಲ್ಲಿ 1–0ರ ಮುನ್ನಡೆ ತನ್ನದಾಗಿಸಿಕೊಂಡಿದೆ.

ಈ ಮೊದಲು ಟಾಸ್ ಗೆದ್ದ ಕೊಹ್ಲಿ ಪಡೆ ಬೌಲಿಂಗ್ ಅನ್ನು ಆಯ್ಕೆ ಮಾಡಿಕೊಂಡಿತು. 18.4 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 118 ರನ್ ಗಳಿಸಿದ್ದ ಆಸ್ಟ್ರೇಲಿಯಾ ತಂಡಕ್ಕೆ ಮಳೆ ಅಡ್ಡಿಯಾಯಿತು.

ಆಸ್ಟ್ರೇಲಿಯಾ ತಂಡ 20 ಓವರ್ ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ. ಮಳೆ ಮುಂದುವರೆದ ಪರಿಣಾಮ ಭಾರತ ತಂಡದ ಬ್ಯಾಟಿಂಗ್‌ಗೂ ಅಡ್ಡಿಯಾಯಿತು.

ಕೊನೆಗೆ ಡಕ್‌ವರ್ತ್ ಲೂಯಿಸ್ ನಿಯಮದ ಅನ್ವಯ ಭಾರತಕ್ಕೆ 6 ಓವರ್‌ಗಳಲ್ಲಿ 48 ರನ್ ಟಾರ್ಗೆಟ್ ನೀಡಲಾಯಿತು. ಸುಲಭವಾದ ಟಾರ್ಗೆಟ್ ಅನ್ನು ಬೆನ್ನಟ್ಟಿದ ಭಾರತ ಆಸ್ಟ್ರೇಲಿಯಾ ವಿರುದ್ಧ 9 ವಿಕೆಟ್‌ಗಳ ಜಯ ದಾಖಲಿಸಿದೆ. 
ಟೀ ಇಂಡಿಯಾ ಪರವಾಗಿ ಜಸ್‌ಪ್ರೀತ್ ಬೂಮ್ರಾ ಹಾಗೂ ಕುಲದೀಪ್ ಯಾದವ್ ತಲಾ 2 ವಿಕೆಟ್ ಪಡೆದರೆ ಭುವನೇಶ್ವರ್ ಕುಮಾರ್, ಹಾರ್ದಿಕ್ ಪಾಂಡ್ಯಾ ಹಾಗೂ ಚಾಹಲ್ ತಲಾ 1 ವಿಕೆಟ್ ಪಡೆದರು. ಸ್ಪಿನ್ನರ್ ಕುಲದೀಪ್ ಯಾದವ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

ಇಂದು ಹೆಚ್ಚು ಓದಿದ ಸುದ್ದಿಗಳು
►►ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ: ಬ್ಲೂ ವೇಲ್ ಶಂಕೆ:
http://bit.ly/2fZRhjm
►►ಜೈಪುರದ ಮಹಿಳೆಗೆ ಪ್ರಧಾನಿ ಮೋದಿಯನ್ನು ಮದುವೆಯಾಗಬೇಕಂತೆ!: http://bit.ly/2hVlbWN
►►ಕುಂದಾಪುರದ ಜ್ಯೋತಿಷಿಯಿಂದ ಗೋವಾದಲ್ಲಿ ಯುವತಿ ಅತ್ಯಾಚಾರ: http://bit.ly/2gjxetp
►►ರಾಜಕೀಯದಲ್ಲಿ ಪೊಲೀಸ್ ಪ್ರಯೋಗಕ್ಕೆ ಸಿದ್ಧ: ಅನುಪಮಾ ಶೆಣೈ: http://bit.ly/2y0FyFZ

Related Tags: India vs Australia, 1st T20, India Beat Australia By 9 Wickets, Rain-Curtailed Match
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ