ಹಾಸ್ಟೆಲ್‌ ಶೌಚಾಲಯದಲ್ಲಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಕರಾವಳಿ ಕರ್ನಾಟಕ ವರದಿ

ಬೆಂಗಳೂರು:
ಕಾಲೇಜು ಹಾಸ್ಟೇಲ್ ಶೌಚಾಲಯದಲ್ಲಿ ವಿದ್ಯಾರ್ಥಿಯೋರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಬೆಳ್ಳಂದೂರು ಚೈತನ್ಯ ಇ–ಟೆಕ್ನೊ ಕಾಲೇಜಿನ ಹಾಸ್ಟೆಲ್‌ನಲ್ಲಿ ಘಟಿಸಿದೆ.

ದ್ವಿತೀಯ ಪಿಯುಸಿ ವಿದ್ಯಾರ್ಥಿ, ಧಾರವಾಡ ನಿವಾಸಿ ಸಾರ್ಥಕ್ ಪುರಾಣಿಕ್ (17) ಸಾವನ್ನಪ್ಪಿದ ದುರ್ದೈವಿ. ಹಾಸ್ಟೆಲ್‌ನ ಶೌಚಾಲಯದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ಬೆಳಗ್ಗೆ ಶೌಚಾಲಯಕ್ಕೆ ತೆರಳಿದ್ದ ಸಾರ್ಥಕ್ ಪುರಾಣಿಕ್ ಅರ್ಧ ತಾಸು ಕಳೆದರೂ ವಾಪಸಾಗಿರಲಿಲ್ಲ. ಹೀಗಾಗಿ ಸ್ನೇಹಿತರು ಆತನನ್ನು ಹುಡುಕಿಕೊಂಡು ಶೌಚಾಲಯದ ಬಳಿ ತೆರಳಿದ್ದದ್ದು, ಎಷ್ಟೇ ಬಾಗಿಲು ಬಡಿದರೂ ಬಾಗಿಲು ತೆರೆಯದಿದ್ದಾಗ ಹಾಸ್ಟೆಲ್‌ ಸಿಬ್ಬಂದಿಯ ಗಮನಕ್ಕೆ ತಂದಿದ್ದರು.

ಬಳಿಕ ಸಿಬ್ಬಂದಿ ಬಾಗಿಲು ಮುರಿದು ನೋಡಿದಾಗ ಸಾರ್ಥಕ್ ಬಿದ್ದಿದ್ದನು.ಕೂಡಲೇ ಆತನನ್ನು ಹತ್ತಿರದ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತಾದರೂ ಅಷ್ಟರಲ್ಲಾಗಲೇ ಸಾರ್ಥಕ್ ಸಾವನ್ನಪ್ಪಿದ್ದಾನೆ.

ದೇಹದ ಮೇಲೆ ಯಾವುದೇ ಗಾಯದ ಗುರುತುಗಳಿಲ್ಲದಿರುವುದರಿಂದ ವಿದ್ಯಾರ್ಥಿಯ ಪೋಷಕರು ಯಾರ ಮೇಲೂ ಶಂಕೆ ವ್ಯಕ್ತಪಡಿಸಿಲ್ಲ. ಹೀಗಾಗಿ, ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು ಹೆಚ್ಚು ಓದಿದ ಸುದ್ದಿಗಳು:
►►ಜಮ್ಮು-ಕಾಶ್ಮೀರದಲ್ಲಿ ಗುಂಡು ಹಾರಿಸಿಕೊಂಡು ಕನ್ನಡಿಗ ಯೋಧ ಆತ್ಮಹತ್ಯೆ:
http://bit.ly/2yyvXcl
►►ಕಳ್ಳನೆಂದು ಅನುಮಾನಿಸಿ ಕಾರ್ಮಿಕನನ್ನು ಹೊಡೆದು ಕೊಂದ ಗ್ರಾಮಸ್ಥರು: http://bit.ly/2hYvCIY

Related Tags: Bengaluru, PU Student Found Dead, College Hostel Toilet, Sarthak Puranik, Kannada News, Karavalikarnataka News
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ