ಬೆಂಗಳೂರು ರಸ್ತೆಗುಂಡಿಗಳಿಗೆ ಯುವಕ, ಯುವತಿ ಬಲಿ: ಸರ್ಕಾರದ ವಿರುದ್ಧ ಜನಾಕ್ರೋಶ

ಕರಾವಳಿ ಕರ್ನಾಟಕ ವರದಿ

ಬೆಂಗಳೂರು:
ರಸ್ತೆಯ ಗುಂಡಿಗಳನ್ನು ತಪ್ಪಿಸುವ ಭರದಲ್ಲಿ ನಡೆದ ಎರಡು ಪ್ರತ್ಯೇಕ ಅಪಘಾತದಲ್ಲಿ ಓರ್ವ ಯುವಕ ಹಾಗೂ ಯುವತಿ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನಿಂದ ವರದಿಯಾಗಿದೆ.

ರಸ್ತೆ ಹೊಂಡಗಳನ್ನು ತಪ್ಪಿಸುವ ಭರದಲ್ಲಿ ನಿಯಂತ್ರಣ ತಪ್ಪಿದ ದ್ವಿಚಕ್ರ ಸವಾರ ಯುವತಿಯೋರ್ವರು ಸಾವನ್ನಪ್ಪಿದ ದಾರುಣ ಘಟನೆ ಬೆಂಗಳೂರಿನ ದೇವನಹಳ್ಳಿ ಮುಖ್ಯ ರಸ್ತೆಯಲ್ಲಿ ನಡೆದಿದೆ. ದ್ವಿಚಕ್ರ ವಾಹನ ಸವಾರ ಯುವತಿ ವೀಣಾ(21) ಅಪಘಾತದಲ್ಲಿ ಸಾವನ್ನಪ್ಪಿದವರು.

ರಸ್ತೆಯಲ್ಲಿ ಬೃಹದಾಕಾರದ ಗುಂಡಿಗಳನ್ನು ತಪ್ಪಿಸಲು ಬ್ರೇಕ್ ಅದುಮಿದಾಗ ವೀಣಾ ನಿಯಂತ್ರಣ ತಪ್ಪಿ ಕೆಳಕ್ಕೆ ಬಿದ್ದಿದ್ದರು. ಈ ವೇಳೆ ಹಿಂಬದಿಯಲ್ಲಿ ಧಾವಿಸುತ್ತಿದ್ದ ಟ್ರಕ್ ಯುವತಿಯ ಮೈ ಮೇಲೆ ಹರಿದು ಹೋಗಿತ್ತು. ತೀವ್ರ ಗಾಯಗೊಂಡಿದ್ದ ಮಹಿಳೆ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ.

ಇನ್ನು ಅಪಘಾತದ ವೇಳೆ ಹಿಂಬದಿ ಸವಾರ ಯುವತಿ ವೀಣಾ ಸಹೋದರಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಾಘತ ನಡೆದ ಬಳಿಕ ಟ್ರಕ್ ಚಾಲಕ ಪರಾರಿಯಾಗಿದ್ದಾನೆ.
ದೇವನಹಳ್ಳಿ ಪೊಲೀಸರು ಪ್ರಕರಣ ದಾಖಲಸಿಕೊಂಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಪ್ರತ್ಯೇಕ ಪ್ರಕರಣವೊಂದರಲ್ಲಿ ತೇಜಸ್ವಿ ಗೌಡ(21) ತನ್ನ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ರಸ್ತೆಯಲ್ಲಿದ್ದ ಗುಂಡಿ ತಪ್ಪಿಸಲು ಹೋಗಿ ಬೈಕ್ ಸ್ಕಿಡ್ ಆಗಿ ಕೆಳಗೆ ಬಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಲಾರಿ ಯುವಕನ ಮೇಲೆ ಹರಿದ ಪರಿಣಾಮ ತೇಜಸ್ವಿ ಗೌಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಉತ್ತರಹಳ್ಳಿ ರೋಡ್‍ನಲ್ಲಿ ಇಂದು ಬೆಳಗ್ಗೆ ಸುಮಾರು 8.30ರ ವೇಳೆಗೆ ಈ ಅಪಘಾತ ನಡೆದಿದ್ದು, ರಸ್ತೆಯಲ್ಲಿನ ಮರಣಗುಂಡಿ ಯುವಕನ ಸಾವಿಗೆ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ಹೆಚ್ಚು ಓದಿದ ಸುದ್ದಿಗಳು
►►ನೀನು ಮಹಾಪುರುಷ ಕಣಪ್ಪಾ! ಬೈಕ್ ಸವಾರನಿಗೆ ಇನ್ಸ್‌ಪೆಕ್ಟರ್ ದೊಡ್ಡ ನಮಸ್ಕಾರ:
http://bit.ly/2xvLV73
►►ಬಿಜೆಪಿಯಿಂದ ಈಗ 'ಬೇಟಾ ಬಚಾವೊ' ಆಂದೋಲನ: ರಾಹುಲ್ ಗಾಂಧಿ: http://bit.ly/2xvTcUy
►►ಸಮಾಜದಲ್ಲಿ ಕ್ರೌರ್ಯಕ್ಕಿಂತ ಭಯ ದೊಡ್ಡ ರೋಗವಾಗಿ ಹುಟ್ಟಿಕೊಳುತ್ತಿದೆ: http://bit.ly/2yamZPB

Related Tags: Bangalore Potholes, Accidents, Youth Death, Woman Death, Veena Death, Tejaswi Gowda Death, Kannada News, Karavalikarnataka News
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ