ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಇಂದಿರಾ ಕ್ಯಾಂಟೀನ್
ಜ. 1ರಿಂದ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಲು ಸಚಿವ ಸಂಪುಟದ ಸಭೆ ನಿರ್ಧಾರ. ಪ್ರತಿ ದಿನ ತಲಾ 29 ಲಕ್ಷದಂತೆ, ಪ್ರತಿ ತಿಂಗಳು ಸುಮಾರು 8.98 ಕೋಟಿ ರೂ. ಸಹಾಯ ಧನ.

ಕರಾವಳಿ ಕರ್ನಾಟಕ ವರದಿ

ಬೆಂಗಳೂರು:
ಜ. 1ರಿಂದ ರಾಜ್ಯದ ಎಲ್ಲ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಲು ಸಚಿವ ಸಂಪುಟದ ಸಭೆಯಲ್ಲಿ ಸರಕಾರ ನಿರ್ಧರಿಸಿದೆ. 171 ಸ್ಥಳಗಳಲ್ಲಿ 246 ಕೇಂದ್ರಗಳಲ್ಲಿ ಇಂದಿರಾ ಕ್ಯಾಂಟೀನ್‌ಗಳು ಆರಂಭವಾಗಲಿದೆ.

ನವೆಂಬರ್ ಅಂತ್ಯದೊಳಗೆ ಸೂಕ್ತ ಸ್ಥಳ ಗುರುತಿಸಬೇಕು. ಒಂದು ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಇರುವ ಪಟ್ಟಣಗಳಲ್ಲಿನ ಆಸ್ಪತ್ರೆಗಳ ಆವರಣ, ರೈಲು ನಿಲ್ದಾಣ ಮತ್ತು ಬಸ್ ನಿಲ್ದಾಣಗಳ ಬಳಿ ಕ್ಯಾಂಟೀನ್ ತೆರೆಯಲಾಗುವುದು ಎಂದು ಕಾನೂನು ಸಚಿವ ಟಿ.ಬಿ. ಜಯಚಂದ್ರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಡಿಸೆಂಬರ್ ಒಳಗೆ ಮೂಲಸೌಲಭ್ಯಗಳನ್ನು ಕಲ್ಪಿಸುವಂತೆ ಪೌರಾಡಳಿತ ನಿರ್ದೇಶನಾಲಯಕ್ಕೆ ಸೂಚಿಸಲಾಗಿದೆ. ಈ ಯೋಜನೆಗೆ ಪ್ರತಿ ದಿನ ತಲಾ 29 ಲಕ್ಷದಂತೆ, ಪ್ರತಿ ತಿಂಗಳು ಸುಮಾರು 8.98 ಕೋಟಿ ರೂ. ಸಹಾಯ ಧನ ಬಿಡುಗಡೆ ಮಾಡಲು ಸಂಪುಟ ಅನುಮೋದನೆ ನೀಡಿದೆ ಎಂದು ಅವರು ವಿವರಿಸಿದರು.

ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆಗೆ ಮೊದಲ ಹಂತದಲ್ಲಿ 1,137 ಕೋಟಿ ರೂ. ಬಿಡುಗಡೆ ಮಾಡಲಾಗುವುದು.

2018ರ ಮಾರ್ಚ್ ಅಂತ್ಯದೊಳಗೆ 10 ಲಕ್ಷ ಫಲಾನುಭವಿಗಳಿಗೆ ಸೌಲಭ್ಯ ಕಲ್ಪಿಸುವ ಗುರಿ ಹಾಕಿಕೊಳ್ಳಲಾಗಿದೆ. ಸೀಮೆ ಎಣ್ಣೆ ತ್ಯಜಿಸುವ ಕುಟುಂಬಗಳಿಗೆ ಉಚಿತ ಎಲ್ಇಡಿ ಬಲ್ಬ್ ವಿಸ್ತರಿಸುವ ಯೋಜನೆಗೂ ಒಪ್ಪಿಗೆ ನೀಡಲಾಗಿದೆ.

ಕಲಬುರ್ಗಿಯಲ್ಲಿ 153 ಕೋಟಿ  ರೂ. ವೆಚ್ಚದಲ್ಲಿ ಪೊಲೀಸ್ ಕಮಿಷನರೇಟ್ ಸ್ಥಾಪನೆಗೆ ಒಪ್ಪಿಗೆ ನೀಡಲಾಗಿದೆ.

ಆರೋಗ್ಯ ಕವಚ ಯೋಜನೆಯ ಹಳೆಯ 95 ಆಧುನಿಕ ಜೀವ ರಕ್ಷಕ ವ್ಯವಸ್ಥೆ (ಅಡ್ವಾನ್ಸ್ ಲೈಫ್ ಸಪೋರ್ಟರ್ಸ್) ಮತ್ತು 276 ಮೂಲ ಜೀವರಕ್ಷಕ ವ್ಯವಸ್ಥೆ (ಬೇಸಿಕ್ ಲೈಫ್ ಸಪೋರ್ಟರ್ಸ್) ಆಂಬ್ಯುಲೆನ್ಸ್‌ಗಳನ್ನು ಬದಲಿಸಿ  61.78 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಆಂಬ್ಯುಲೆನ್ಸ್‌ಗಳ ಖರೀದಿಸಲು ಒಪ್ಪಿಗೆ ನೀಡಲಾಗಿದೆ ಎಂದು ವಿವರಿಸಿದರು.

ಇಂದು ಓದಿದ ಹೆಚ್ಚು ಓದಿದ ಸುದ್ದಿಗಳು
►►ಶ್ಲೋಕ ತಪ್ಪಾಗಿ ಹಾಡಿದ ಮುಸ್ಲಿಂ ಗಾಯಕನ ಹತ್ಯೆ: ಭೀತಿಯಿಂದ ಊರು ತೊರೆದ ಮುಸ್ಲಿಮರು:
http://bit.ly/2hCJIfp
►►ಟ್ರಕ್-ಬೈಕ್ ಢಿಕ್ಕಿ: ಸವಾರ ಸ್ಥಳದಲ್ಲೇ ಸಾವು: http://bit.ly/2zhioLu
►►ಉಡುಪಿ ಬಾರ್ ಮಾಲಕರಿಗೆ ತಲವಾರ್‌ನಿಂದ ಹಲ್ಲೆ, ಜೀವ ಬೆದರಿಕೆ: http://bit.ly/2hCNHsm
►►ಉಳ್ಳಾಲ ಝುಬೈರ್ ಕೊಲೆ: ಐವರು ಆರೋಪಿಗಳ ಸೆರೆ: http://bit.ly/2z1QmTg

Related Tags: Indira Canteen, Kannada News, Karnataka News, Coastal Karnataka News, Karavali News, Karavali Karnataka, Latest Kannada News, ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಇಂದಿರಾ ಕ್ಯಾಂಟೀನ್, ಕನ್ನಡ ಸುದ್ದಿ, ಕರಾವಳಿ ಸುದ್ದಿ, ಕರಾವಳಿ ಕರ್ನಾಟಕ, ಇತ್ತೀಚಿನ ಸುದ್ದಿ
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ