ಆರುಷಿ ಹತ್ಯೆ: ಹೆತ್ತವರನ್ನು ಖುಲಾಸೆಗೊಳಿಸಿದ ಹೈಕೋರ್ಟ್

ಕರಾವಳಿ ಕರ್ನಾಟಕ ವರದಿ

ಅಲಹಾಬಾದ್:
ತೀವ್ರ ಚರ್ಚೆಗೆ ಗ್ರಾಸವಾಗಿದ್ದ 14 ವರ್ಷದ ಆರುಷಿ ತಲ್ವಾರ್ ಹಾಗೂ ಹೇಮರಾಜ್ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ರಾಜೇಶ್ ತಲ್ವಾರ್ ಮತ್ತು ನೂಪುರ್ ತಲ್ವಾರ್ ದಂಪತಿಯನ್ನು ಗುರುವಾರ ಅಲಹಾಬಾದ್ ಹೈಕೋರ್ಟ್ ಖುಲಾಸೆಗೊಳಿಸಿ ಮಹತ್ವದ ತೀರ್ಪು ನೀಡಿದೆ.

ಖುಲಾಸೆಗೊಂಡಿರುವ ರಾಜೇಶ್ ಮತ್ತು ನೂಪುರ್‌ ತಲ್ವಾರ್‌ ದಂಪತಿ ಶುಕ್ರವಾರ ದಸ್ನಾ ಕಾರಾಗೃಹದಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಆರುಷಿ ಹಾಗೂ ಮನೆ ಕೆಲಸದಾತ ಹೇಮರಾಜ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ಕೋರ್ಟ್ ರಾಜೇಶ್ ದಂಪತಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಅದನ್ನು ಪ್ರಶ್ನಿಸಿ ರಾಜೇಶ್ ತಲ್ವಾರ್ ಮತ್ತು ನೂಪುರ್ ತಲ್ವಾರ್ ಅಲಹಾಬಾದ್ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.

ರಾಜೇಶ್‌ ಮತ್ತು ನೂಪುರ್‌ ಅವರೇ ಈ ಜೋಡಿ ಕೊಲೆ ಮಾಡಿದ್ದಾರೆ ಎಂಬುದಕ್ಕೆ ಯಾವುದೇ ಸೂಕ್ತ ಸಾಕ್ಷ್ಯಾಧಾರಗಳಿಲ್ಲ. ಹೀಗಾಗಿ ರಾಜೇಶ್‌ ಮತ್ತು ನೂಪುರ್‌ ದಂಪತಿ ತಮ್ಮ ಮಗಳು ಮತ್ತು ಮನೆ ಕೆಲಸದ ಸಹಾಯಕ ಹೇಮರಾಜ್‌ ಕೊಲೆಯ ಹೊಣೆಗಾರರಲ್ಲ ಎಂದು ನ್ಯಾಯಪೀಠ ಹೇಳಿದೆ.
ಕಳೆದ ಸೆಪ್ಟೆಂಬರ್ ಮೇಲ್ಮನವಿ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ್ದ ನ್ಯಾಯಮೂರ್ತಿ ಬಿ.ಕೆ. ನಾರಾಯಣ ಮತ್ತು ನ್ಯಾಯಾಮೂರ್ತಿ ಎ.ಕೆ ಮಿಶ್ರಾ ಅವರನ್ನೊಳಗೊಂಡ ಪೀಠ ತೀರ್ಪನ್ನು ಕಾದಿರಿಸಿತ್ತು. ಇಂದು ಆರೋಪಿಗಳನ್ನು ಖುಲಾಸೆಗೊಳಿಸಿ ತೀರ್ಪು ನೀಡಿದೆ.

ಒಂಬತ್ತು ವರ್ಷಗಳ ಹಿಂದೆ ನಡೆದಿದ್ದ 14 ವರ್ಷ ಪ್ರಾಯದ ಆರುಷಿ ತಲ್ವಾರ್‌ ಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಅಲಹಾಬಾದ್‌ ಹೈಕೋರ್ಟ್‌ ಇಂದು ಗುರುವಾರ ತೀರ್ಪು ನೀಡಿತು. 2008ರಲ್ಲಿ ನೋಯ್ಡಾದಲ್ಲಿನ ತನ್ನ ನಿವಾಸದಲ್ಲಿ ಆರುಷಿ ಸತ್ತು ಬಿದ್ದಿರುವುದು ಪತ್ತೆಯಾಗಿತ್ತು.

ಇಂದು ಓದಿದ ಹೆಚ್ಚು ಓದಿದ ಸುದ್ದಿಗಳು
►►‘ಉಪ್ಪಿನಕಾಯಿ’ ಎಂದು ಗಾಂಜಾ ನೀಡಿದವನ ಬಂಧನ:
http://bit.ly/2yeb6rN
►►ಶ್ಲೋಕ ತಪ್ಪಾಗಿ ಹಾಡಿದ ಮುಸ್ಲಿಂ ಗಾಯಕನ ಹತ್ಯೆ: ಭೀತಿಯಿಂದ ಊರು ತೊರೆದ ಮುಸ್ಲಿಮರು: http://bit.ly/2hCJIfp
►►ಟ್ರಕ್-ಬೈಕ್ ಢಿಕ್ಕಿ: ಸವಾರ ಸ್ಥಳದಲ್ಲೇ ಸಾವು: http://bit.ly/2zhioLu
►►ಉಡುಪಿ ಬಾರ್ ಮಾಲಕರಿಗೆ ತಲವಾರ್‌ನಿಂದ ಹಲ್ಲೆ, ಜೀವ ಬೆದರಿಕೆ: http://bit.ly/2hCNHsm

Related Tags: Allahabad High Court, Acquits, Talwars Daughter, Aarushi, Hemraj Murder Case, Allahabad High Court
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ