ಲಥಾಮ್‌, ಟೇಲರ್‌ ದಾಖಲೆಯ ಜೊತೆಯಾಟ: ಭಾರತಕ್ಕೆ ಸೋಲು

ಕರಾವಳಿ ಕರ್ನಾಟಕ ವರದಿ

ಮುಂಬೈ:
ರಾಸ್ ಟೇಲರ್‌ ಹಾಗೂ ಟಾಮ್ ಲಥಾಮ್ ಅಮೋಘ ಜತೆಯಾಟದ ನೆರವಿನಿಂದ ಭಾರತದ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್‌ ಗೆಲುವು ಸಾಧಿಸಿದೆ.

ಭಾನುವಾರ ವಾಂಖೇಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ನೀಡಿದ 281 ರನ್‌ ಗೆಲುವಿನ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್‌ ರಾಸ್ ಟೇಲರ್‌(95) ಮತ್ತು ಟಾಮ್ ಲಥಾಮ್(103) ಮೂರನೇ ವಿಕೆಟ್‌ ಜತೆಯಾಟದಿಂದ ಗೆಲುವು ಸಾಧಿಸಿತು.

ನ್ಯೂಜಿಲೆಂಡ್‌ 80 ರನ್‌ ಗಳಿಸುವಷ್ಟರಲ್ಲಿ 3 ವಿಕೆಟ್‌ ಕಳೆದುಕೊಂಡಿತು. ಆದರೆ, ನಂತರ ಲಥಾಮ್‌ ಹಾಗೂ ಟೇಲರ್‌ ಭಾರತದ ಬೌಲರ್‌ಗಳಿಗೆ ದಿಟ್ಟ ಉತ್ತರ ನೀಡಿದರು. ಟೇಲರ್‌ 48ನೇ ಓವರ್‌ನಲ್ಲಿ ಭುವನೇಶ್ವರ್‌ ಕುಮಾರ್‌ಗೆ ವಿಕೆಟ್‌ ಒಪ್ಪಿಸಿದರು.

ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ವಿರಾಟ್‌ ಕೊಹ್ಲಿ ಶತಕ(121)ದ ನೆರವಿನೊಂದಿಗೆ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 280ರನ್‌ ಕಲೆಹಾಕಿತು.

ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಭಾರತ ತಂಡದ ಆರಂಭ ಉತ್ತಮವಾಗಿರಲಿಲ್ಲ. ಶಿಖರ್ ಧವನ್‌, ರೋಹಿತ್ ಶರ್ಮಾ ಮತ್ತು ಕೇದಾರ್ ಜಾದವ್ ಬೇಗನೇ ಔಟಾಗಿ ನಿರಾಸೆ ಮೂಡಿಸಿದರು. ನಂತರ ವಿರಾಟ್ ಕೊಹ್ಲಿ ಜೊತೆಗೂಡಿದ ದಿನೇಶ್ ಕಾರ್ತಿಕ್ ಮತ್ತು ಮಹೇಂದ್ರ ಸಿಂಗ್ ಧೋನಿ ತಂಡಕ್ಕೆ ಸ್ವಲ್ಪ ಹೊತ್ತು ಆಸರೆಯಾದರು. ಇವರಿಬ್ಬರು ಪೆವಿಲಿಯನ್ ಸೇರಿದ ನಂತರ ನಾಯಕ ‘ವಿರಾಟ್’ ಇನಿಂಗ್ಸ್‌ ಕಟ್ಟಿದರು. ಹೀಗಾಗಿ ತಂಡ ಸ್ಪರ್ಧಾತ್ಮಕ ಮೊತ್ತ ಗಳಿಸುವಲ್ಲಿ ಯಶಸ್ವಿಯಾಯಿತು.

125 ಎಸೆತಗಳಲ್ಲಿ 121 ರನ್ ಗಳಿಸಿದ ಅವರು ಭಾನುವಾರದ ರಜೆ ಕಳೆಯಲು ಸೇರಿದ್ದ ಕ್ರಿಕೆಟ್ ಪ್ರಿಯರಿಗೆ ಭರಪೂರ ಮನರಂಜನೆ ನೀಡಿದರು. ಒಂಬತ್ತು ಬೌಂಡರಿ ಮತ್ತು ಎರಡು ಸಿಕ್ಸರ್‌ ಗಳಿಸಿದ ಅವರು 31ನೇ ಶತಕ ಸಿಡಿಸಿ ಸಂಭ್ರಮಿಸಿದರು.

Related Tags: India vs New Zealand 2017, 1st ODI in Mumbai, New Zealand Win, Cricket News, Sports News, Kannada News, Karavalikarnataka News
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ