ಖಾಸಗಿ ಬಸ್ ಪಲ್ಟಿ: ಓರ್ವ ಮೃತ್ಯು, ಆರು ಮಂದಿ ಗಂಭೀರ

ಕರಾವಳಿ ಕರ್ನಾಟಕ ವರದಿ

ಧಾರವಾಡ:
ಇಂದು ನಸುಕಿನ ಜಾವ ಖಾಸಗಿ ಬಸ್ಸೊಂದು ಪಲ್ಟಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಪ್ರಭುನಗರ ಹೊನ್ನಾಪುರ ಬಳಿ ಸಂಭವಿಸಿದೆ

50 ಪ್ರಯಾಣಿಕರಿದ್ದ ಖಾಸಗಿ ಬಸ್ ಮುಂಜಾನೆ ಬೆಂಗಳೂರಿನಿಂದ ಗೋವಾ ಕಡೆಗೆ ಸಾಗುತ್ತಿತ್ತು. ಬಸ್‍ ಹೊನ್ನಾಪೂರಯ ಬಳಿ ಸಮೀಪಿಸುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಪರಿಣಾಮ ಪ್ರಯಾಣಿಕರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮೃತರ ಗುರುತು ಪತ್ತೆಯಾಗಿಲ್ಲ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಆಂಬುಲೆನ್ಸ್ ಮೂಲಕ ಗಾಯಾಳುಗಳನ್ನು ಸಮೀಪದ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.


Related Tags: Goa Bus Overturns, One Dead, Six Injuired, Dharwad Accident, Kannada News, Karavalikarnataka News
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ