ಡಿವೈಡರ್‌ಗೆ ಢಿಕ್ಕಿಯಾದ ಕಾರು: ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಮೃತ್ಯು

ಕರಾವಳಿ ಕರ್ನಾಟಕ ವರದಿ

ಬೆಳಗಾವಿ:
ಶರವೇಗದಲ್ಲಿ ಧಾವಿಸುತ್ತಿದ್ದ ಕಾರೊಂದು ರಸ್ತೆ ವಿಭಾಜಕಕ್ಕೆ ಢಿಕ್ಕಿಯಾದ ಪರಿಣಾಮ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ನಸುಕಿನ ಜಾವದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಗಳನ್ನು ಮೂಲತಃ ಬಿಹಾರದ ಪಾಟ್ನಾದ ನಿವಾಸಿ, ಕೆಎಲ್‍ಇ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾಭ್ಯಾಸ ನಡೆಸುತ್ತಿದ್ದ ನಿಶಾ(22) ಜಯಂತ್ ರಾಯ್ (22) ಎಂದು ಗುರುತಿಸಲಾಗಿದೆ.

ಇನ್ನು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇನ್ನೋರ್ವ ವಿದ್ಯಾರ್ಥಿ ಅನಸುಮಾನ್ ಕುಮಾರ್ ಎಂಬಾತನನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂವರು ವಿದ್ಯಾರ್ಥಿಗಳು ವೋಕ್ಸ್ ವ್ಯಾಗನ್ ಕಾರಿನಲ್ಲಿ ಹುಬ್ಬಳ್ಳಿ ಕಡೆಯಿಂದ ಬೆಳಗಾವಿಗೆ ಇಂದು ಮುಂಜಾನೆ ಪ್ರಯಾಣಿಸುತ್ತಿರುವಾಗ ಅಪಘಾತ ಸಂಭವಿಸಿದೆ. ಸುಮಾರು 2.45 ವೇಳೆಗೆ ಕಾರು ಬೆಳಗಾವಿ ಸಮೀಪಿಸುತ್ತಿದ್ದಂತೆ ಕಾರು ಡಿವೈಡರ್‌ಗೆ ಢಿಕ್ಕಿ ಹೊಡೆದಿತ್ತು. ಪರಿಣಾಮ ಕಾರು ಪಲ್ಟಿಯಾಗಿ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಹಿರೇಬಾಗೆವಾಡಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Related Tags: Car Accident, Hirebagevadi Police, Medical Student Death, Nish, Jayanth Death, Kannada News, Karavalikarnataka News
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ