ಐಟಿ ಅಧಿಕಾರಿಗಳು ಡಿಕೆಶಿಗೆ ಬಿಜೆಪಿ ಸೇರುವಂತೆ ಹೇಳಿದ್ದರು: ಸಿದ್ದರಾಮಯ್ಯ ಆರೋಪ

ಕರಾವಳಿ ಕರ್ನಾಟಕ ವರದಿ

ಬೆಂಗಳೂರು:
ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರ ನಿವಾಸದ ಮೇಲೆ ಆದಾಯ ಮತ್ತು ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದ ಸಂದರ್ಭ ಡಿ.ಕೆ. ಶಿವಕುಮಾರ್ ಅವರಿಗೆ ಬಿಜೆಪಿಗೆ ಪಕ್ಷಕ್ಕೆ ಸೇರ್ಪಡೆಗೊಳ್ಳುವಂತೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳೇ ಹೇಳಿದ್ದರಂತೆ. ಅಧಿಕಾರಿಗಳ ಮಟ್ಟದಲ್ಲಿ ಕೇಸರೀಕರಣ ಯಾವ ಮಟ್ಟಕ್ಕೆ ಆಗುತ್ತಿದೆ ಎಂಬುದನ್ನು ಇದರಿಂದ ನಾವು ಅರ್ಥ ಮಾಡಿಕೊಳ್ಳಬೇಕು. ಕೇಂದ್ರ ಸರ್ಕಾರ ಸಿಬಿಐ, ಐಟಿ, ಇಡಿ ಇಲಾಖೆಗಳನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿರುವುದು ದುರಂತ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಈ ರೀತಿಯ ಬೆಳವಣಿಗೆ ಆತಂಕಕಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕೇಂದ್ರ ಸರ್ಕಾರದ ನೋಟು ನಿಷೇಧ ನಿರ್ಧಾರಕ್ಕೆ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಕೆಪಿಸಿಸಿ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಆಯೋಜಿಸಿದ್ದ 'ಭಾರತ ನರಳುತ್ತಿದೆ' ಕರಾಳ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ನರೇಂದ್ರ ಮೋದಿ ಪ್ರಧಾನಿಯಾಗುವ ಮೊದಲು ದೇಶಕ್ಕೆ ಅಚ್ಛೇ ದಿನ್‌ ಆಯೇಗಾ ಎಂದು ಹೇಳಿದ್ದರು. ಅಚ್ಛೇ ದಿನ್‌ ಕಬ್‌ ಆಯೇಗಾ? ಅದಾನಿ, ಅಂಬಾನಿ, ಬಾಬಾ ರಾಮ್‌ದೇವ್‌ಗೆ ಮಾತ್ರ ಅಚ್ಛೇ ದಿನ್‌ ಬಂದಿದೆ. ಸಾಮಾನ್ಯ ಜನರ ಅಕೌಂಟ್‌ಗೆ 15 ಲಕ್ಷ ರೂಪಾಯಿ ಹಾಕುವುದಾಗಿ ಪ್ರಧಾನಿ ಭರವಸೆ ನೀಡಿದ್ದರು. ಆದರೆ, ಒಂದು ನಯಾಪೈಸೆಯೂ ಬಡವರ ಅಕೌಂಟ್‌ಗೆ ಬಂದು ಸೇರಲಿಲ್ಲ. ಪ್ರತಿ ವರ್ಷ 2 ಕೋಟಿ ನಿರುದ್ಯೋಗಿ ಯುವಕರಿಗೆ ಉದ್ಯೋಗ ನೀಡುವುದಾಗಿ ಹೇಳಿದ್ದರು. ಆದರೆ, ಇಪ್ಪತ್ತು ಲಕ್ಷ ಉದ್ಯೋಗ ಕೂಡ ಸೃಷ್ಟಿಯಾಗಿಲ್ಲ ಎಂದು ಆರೋಪಿಸಿದರು.

ಕಳೆದ ವರ್ಷದ ನ.8 ರಂದು ರಾತ್ರೋರಾತ್ರಿ ರೂ.500 ಹಾಗೂ 1000 ಮುಖಬೆಲೆಯ ನೋಟುಗಳ ಮೇಲೆನಿಷೇಧ ಹೇಲಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಕಪ್ಪುಹಣ, ಭ್ರಷ್ಟಾಚಾರ, ಭಯೋತ್ಪಾದನೆ, ನಕಲಿ ನೋಟುಗಳಿಗೆ ಕಡಿವಾಣ ಹಾಕಲು ನೋಟುಗಳನ್ನು ನಿಷೇಧ ಮಾಡಿರುವುದಾಗಿ ಹೇಳಿದ್ದರು. ಆದರೆ, ಇದೀಗ ಅವರ ಹೇಳಿಕೆ ಸುಳ್ಳು ಎಂಬುದು ಜಗಜ್ಜಾಹೀರಾಗಿದೆ. ನೋಟು ನಿಷೇಧ ಎಂಬುದು ಕಪ್ಪು ಹಣ ಹೊಂದಿದ್ದವರಿಗೆ ಕಾನೂನಾತ್ಮಕವಾಗಿಯೇ ಬಿಳಿಹಣವಾಗಿಸಿಕೊಳ್ಳಲು ಮಾಡಿಕೊಟ್ಟ ವ್ಯವಸ್ಥಿತ ಹುನ್ನಾರ ಎಂದು ಆರೋಪಿಸಿದರು.

ಇದೇ ವೇಳೆ ಕೇಂದ್ರ ಮೋದಿ ಸರ್ಕಾರದ ವಿರುದ್ಧ ಗುಡುಗಿರುವ ಅವರು, ದುಬಾರಿ ಮೌಲ್ಯದ ನೋಟುಗಳ ಅಮಾನ್ಯೀಕರಣವು ಕಪ್ಪುಹಣವನ್ನು ಬಿಳಿ ಮಾಡಲು ಕಾನೂನಾತ್ಮಕವಾಗಿಯೇ ಮಾಡಿದ ವ್ಯವಸ್ಥಿತ ಹುನ್ನಾರ. ಕಪ್ಪುಹಣ, ಭ್ರಷ್ಟಾಚಾರ, ಭಯೋತ್ಪಾದನೆಗೆ ಕಡಿವಾಣದ ಹೆಸರಿನಲ್ಲಿ ನೋಟು ಅಮಾನ್ಯ ಮಾಡಿ ದೇಶದ್ರೋಹ ಮಾಡಲಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಅಧಿಕಾರದಲ್ಲಿದ್ದಾಗ ಮಾಡಬಾರದ್ದನ್ನೆಲ್ಲ ಮಾಡಿ ಈಗ ಬಿಜೆಪಿಯವರು ಪರಿವರ್ತನ ಯಾತ್ರೆ ಮಾಡುತ್ತಿದ್ದಾರೆ. ಅದು ಕೆಜೆಪಿ ಯಾತ್ರೆ ಎಂದು ಬಿಜೆಪಿಯವರೇ ಆರೋಪ ಮಾಡಿದ್ದಾರೆ. ಅಲ್ಲದೇ ಸಮಾವೇಶಕ್ಕೆ ಜನರಿಗೆ ಸೀರೆ ಮತ್ತು ಹಣ ಹಂಚಿಕೆ ಮಾಡಲಾಗುತ್ತಿದೆ ಎಂದು ಬಿಜೆಪಿ ಮುಖಂಡ ಸೊಗಡು ಶಿವಣ್ಣ ಆರೋಪ ಮಾಡಿದ್ದಾರೆ. ಯಡಿಯೂರಪ್ಪ ಜತೆಗೆ ಮೂರೇ ಜನ ಇರೋದು. ಶೋಭಾ ಕರಂದ್ಲಾಜೆ ಮತ್ತು ಪುಟ್ಟಸ್ವಾಮಿ ಬಿಟ್ಟರೆ ಬಿಜೆಪಿಯ ಯಾವ ನಾಯಕರೂ ಅವರ ಜೊತೆಗಿಲ್ಲ ಎಂದು ಇದೇ ಸಂದರ್ಭದಲ್ಲಿ ಹೇಳಿದರು.

ಇಂದು ಹೆಚ್ಚು ಓದಿದ ಸುದ್ದಿಗಳು
►►ಗಿನ್ನೆಸ್ ವಿಶ್ವ ದಾಖಲೆಗಾಗಿ 1000 ಮೀಟರ್ ಚಿತ್ರ ರಚನೆ:
http://bit.ly/2zoWQ2w
►►ಗೌರಿ ಲಂಕೇಶ್ ಕೊಲೆ ಪ್ರಕರಣದ ಸತ್ಯಾಂಶ ಬಯಲಾಗಲಿ: ಚಿಂತಕ ಶಿವಸುಂದರ್: http://bit.ly/2ztjdRZ
►►ಕೊನೆಗೂ ಸಮುದ್ರ ಮಾರ್ಗದ ಮೂಲಕ ಗೋವಾಕ್ಕೆ ರೈಲ್ವೇ ಇಂಜಿನ್: http://bit.ly/2yi6PD9
►►ಬಿಜೆಪಿಗರನ್ನು ಲೌಡ್ ಸ್ಪೀಕರ್‌ಗಳಾಗಿ ರೂಪಿಸಲಾಗಿದೆ: ರಾಹುಲ್ ಗಾಂಧಿ: http://bit.ly/2yjFO27
►►ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್: ಮೇರಿ ಕೋಮ್‌ಗೆ ಚಿನ್ನದ ಮುಕುಟ :http://bit.ly/2zpsAlD
►►ವಿದ್ಯಾರ್ಥಿ ಕೊಲೆ ಪ್ರಕರಣಕ್ಕೆ ತಿರುವು, 11ನೇ ತರಗತಿ ವಿದ್ಯಾರ್ಥಿ ಬಂಧನ:
http://bit.ly/2hl8g0q
►►ದಂಡ ಕಟ್ಟಲಾರೆ ಎಂದು ಬಸ್ ಎದುರು ಮಲಗಿದ ಆಟೋ ಚಾಲಕ! http://bit.ly/2yGvbuo
►►ಸ್ಥಳೀಯರ ಎಚ್ಚರಿಕೆ ಕಡೆಗಣಿಸಿ ನೀರುಪಾಲಾದ ಬಾಲಕರು: http://bit.ly/2zFnS6j
►►ಆಧಾರ್‌ ಜೋಡಿಸದ ಮೊಬೈಲ್‌ ಡಿಸ್‌ಕನೆಕ್ಟ್ ಇಲ್ಲ: http://bit.ly/2hl52Kj
►►ಕಂಬಳಕ್ಕೆ ಸದ್ಯಕ್ಕಿಲ್ಲ ಆತಂಕ: ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ: http://bit.ly/2zCjMfe
►►ಪತಿ-ಪತ್ನಿಯಿಂದ ಆತ್ನಹತ್ಯೆಯ ಯತ್ನ. ಪತಿ ಮೃತ. ಪತ್ನಿ ಗಂಭೀರ: http://bit.ly/2zCmyBh

Related Tags: Income Tax Officials, DK Shivakumar To Join BJP, Karnataka CM Siddaramaiah, Kannada News, Karavalikarnataka News
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ