ಕಾಂಗ್ರೆಸ್ ವಿದ್ಯಾರ್ಥಿ ಬ್ರಿಗೇಡ್ ಜಿಲ್ಲಾಧ್ಯಕ್ಷರಾಗಿ ಎಲ್‌ಸ್ಟನ್ ನೊರೊನ್ಹಾ

ಕರಾವಳಿ ಕರ್ನಾಟಕ ವರದಿ

ಉಡುಪಿ:
‘ನ್ಯಾಷನಲ್ ಕಾಂಗ್ರೆಸ್ ಬ್ರಿಗೇಡ್ ‘ಉಡುಪಿ ಜಿಲ್ಲಾ ವಿದ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷರಾಗಿ ಎಲ್‌ಸ್ಟನ್ ನೊರೊನ್ಹಾ ಮೂಡುಬೆಳ್ಳೆ ಇವರನ್ನು ನೇಮಕಗೊಳಿಸಲಾಗಿದೆ.

ಉಡುಪಿ ಜಿಲ್ಲಾ ವಿದ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷರಾಗಿ ಎಲ್‌ಸ್ಟನ್ ನೊರೊನ್ಹಾ ಮೂಡುಬೆಳ್ಳೆ ಇವರನ್ನು ನ್ಯಾಷನಲ್ ಕಾಂಗ್ರೆಸ್ ಬ್ರಿಗೇಡ್ ರಾಜ್ಯಾಧ್ಯಕ್ಷರಾದ ರಂಜಿತ್ ಮತ್ತು ಮತ್ತು ದಕ್ಷಿಣ ಭಾರತದ ನ್ಯಾಷನಲ್ ಕಾಂಗ್ರೆಸ್ ಬ್ರಿಗೇಡ್‌ನ ಉಸ್ತುವಾರಿಯಾಗಿರುವ ಎಂಡಿ ಫಾರೂಕ್ ಅನುಮತಿ ಮೇರೆಗೆ ನ್ಯಾಷನಲ್ ಕಾಂಗ್ರೆಸ್ ಬ್ರಿಗೇಡ್ ಉಡುಪಿ ಜಿಲ್ಲಾಧ್ಯಕ್ಷ ಸ್ಟೀವನ್ ಕುಲಾಸೊ ನೇಮಕ ಮಾಡಿದ್ದಾರೆ.

ಎಲ್‌ಸ್ಟನ್ ನೊರೊನ್ಹಾ ಮೂಡುಬೆಳ್ಳೆ ಅವರು ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದು, ಸಮಾಜಸೇವೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ವಯೋವೃದ್ಧರು, ಅಸಹಾಯಕರನ್ನು ಕಂಡರೆ ಅವರಿಗೆ ವಿಶೇಷ ಪ್ರೀತಿ.

‘ನ್ಯಾಷನಲ್ ಕಾಂಗ್ರೆಸ್ ಬ್ರಿಗೇಡ್‘ ವಿದ್ಯಾರ್ಥಿ ಸಂಘಟನೆ ಮುಂದಿನ ಚುನಾವಣೆಗೆ ಸಜ್ಜಾಗುವ ನಿಟ್ಟಿನಲ್ಲಿ ಸಂಘಟನೆಯಲ್ಲಿ ನಿರತರಾಗಿದ್ದು ‘ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಿದೆ. ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದ ನಾಲ್ಕು ವರ್ಷಗಳ ಸಾಧನೆಗಳನ್ನು ಜನರಿಗೆ ತಿಳಿಸುವುದು ಇದರ ಉದ್ದೇಶ.

ಉಡುಪಿ ಜಿಲ್ಲಾ ವಿದ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡ ಎಲ್‌ಸ್ಟನ್ ಅವರು ಮೂಡುಬೆಳ್ಳೆ ಸಂತ ಲಾರೆನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ, ಅಂತರಾಷ್ಟ್ರೀಯ ಮಟ್ಟದ ಸಂಘಟನೆ ‘ವೈಸಿಎಸ್’ ಇದರ ಮೂಡುಬೆಳ್ಳೆ ಚರ್ಚ್ ಘಟಕದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇಂದು ಹೆಚ್ಚು ಓದಿದ ಸುದ್ದಿಗಳು
►►ಬಳ್ಳಾರಿ ಬಿಜೆಪಿ ಕಚೇರಿ ಎದುರೇ ಟಿಪ್ಪು ಜಯಂತಿ:
http://bit.ly/2zCXasp
►►ಟಿಪ್ಪು ಜಯಂತಿಗೆ ಹಾಜರಾಗದ ಉಸ್ತುವಾರಿ ಪ್ರಮೋದ್ ಮಧ್ವರಾಜ್: http://bit.ly/2AzsUi0
►►ಉಡುಪಿ: ಟಿಪ್ಪು ಜಯಂತಿ ವಿರೋಧಿಸಿ ಬಿಜೆಪಿ ಪ್ರತಿಭಟನೆ http://bit.ly/2hizWPD
►►ಕಾರವಾರ: ಟಿಪ್ಪು ಜಯಂತಿ ವಿರೋಧಿಸಿ ಹಿಂಜಾವೇ ಪ್ರತಿಭಟನೆ http://bit.ly/2ht1JRb
►►ಇತಿಹಾಸವನ್ನೇ ಸೃಷ್ಠಿಸಿದ ಟಿಪ್ಪು ಹೆಸರು ಕೆಡಿಸಲಾಗುತ್ತಿದೆ: ಸಚಿವ ರಮಾನಾಥ ರೈ http://bit.ly/2hZD3Nn
►►ಟಿಪ್ಪು ಜಯಂತಿ ಉದ್ಘಾಟಿಸಿದ ಬಿಜೆಪಿ ಶಾಸಕ ಆನಂದ್ ಸಿಂಗ್ http://bit.ly/2Aq5fj5
►►ಟಿಪ್ಪು ಜಯಂತಿ ವಿರೋಧ: ಶಾಸಕ ಅಪ್ಪಚ್ಚು ರಂಜನ್ ಪೊಲೀಸ್ ವಶ http://bit.ly/2zLZ64E
►►ಕೊಡವರು, ಕ್ರೈಸ್ತರಿಂದ ಟಿಪ್ಪು ಜಯಂತಿ ವಿರೋಧ: ಮಾಳವಿಕಾ ಅವಿನಾಶ್ http://bit.ly/2ztTkn9
►►ಟಿಪ್ಪು ಜಯಂತಿ ಹಿನ್ನೆಲೆ: ಜಿಲ್ಲೆಯಾದ್ಯಂತ ಸೆಕ್ಷನ್ 144: http://bit.ly/2yzutiu

Related Tags: Kannada News, Karnataka News, Coastal Karnataka News, Karavali News, Karavali Karnataka, Latest Kannada News, ಕಾಂಗ್ರೆಸ್ ವಿದ್ಯಾರ್ಥಿ ಬ್ರಿಗೇಡ್ ಜಿಲ್ಲಾಧ್ಯಕ್ಷರಾಗಿ ಎಲ್‌ಸ್ಟನ್ ನೊರೊನ್ಹಾ , ಕರಾವಳಿ ಸುದ್ದಿ, ಕರಾವಳಿ ಕರ್ನಾಟಕ ಸುದ್ದಿ
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ