ಚಿತ್ರಕೂಟ್ ವಿಧಾನಸಭಾ ಚುನಾವಣೆ. ಕಾಂಗ್ರೆಸ್‌ಗೆ ಭರ್ಜರಿ ಜಯ. ಬಿಜೆಪಿಗೆ ಆಘಾತ

ಕರಾವಳಿ ಕರ್ನಾಟಕ ವರದಿ

ಭೋಪಾಲ್:
ಚಿತ್ರಕೂಟ ವಿಧಾನಸಭಾ ಕ್ಷೇತ್ರಕ್ಕೆ ನಡೆದಿದ್ದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ನಿಲಾಂಶು ಚತುರ್ವೇದಿ ಅವರು ಬಿಜೆಪಿಯ ಶಂಕರ್ ದಯಾಳ್ ತ್ರಿಪಾಠಿ ವಿರುದ್ಧ 14,333 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ.

ಚತುರ್ವೇದಿ ಒಟ್ಟು 66,810 ಮತಗಳನ್ನು ಗಳಿಸಿದ್ದರೆ, ತ್ರಿಪಾಠಿಗೆ 52,677 ಮತಗಳು ದೊರೆತಿವೆ. ನವೆಂಬರ್‌ 9ರಂದು ನಡೆದಿದ್ದ ಉಪಚುನಾವಣೆಯಲ್ಲಿ ಶೇ. 65ರಷ್ಟು ಮತದಾನವಾಗಿತ್ತು.

2013ರ ವಿಧಾನಸಭೆ ಚುನಾವಣೆಯಲ್ಲೂ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪ್ರೇಮ್‌ ಸಿಂಗ್ ಜಯಗಳಿಸಿದ್ದರು. ಅವರ ನಿಧನದಿಂದಾಗಿ ಸ್ಥಾನ ತೆರವಾಗಿತ್ತು. 2013ರ ಚುನಾವಣೆಯಲ್ಲಿ ಪ್ರೇಮ್‌ ಸಿಂಗ್ ಅವರು 10,970 ಮತಗಳ ಅಂತರದಿಂದ ಜಯಗಳಿಸಿದ್ದರು.

2018ರಲ್ಲಿ ಮಧ್ಯಪ್ರದೇಶದಲ್ಲಿ ವಿಧಾನ್ಸಭಾ ಚುನಾವಣೆ ನಡೆಯಲಿದ್ದು ಕಾಂಗ್ರೆಸ್‌ನ ಈ ವಿಜಯ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಶಕ್ತಿ ತಂದುಕೊಟ್ಟಿದೆ ಎನ್ನಲಾಗುತ್ತಿದೆ. ಇನ್ನೊಂದೆಡೆ ಬಿಜೆಪಿ ಬರುವ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರ ಉಳಿಸಿಕೊಳ್ಳಲು ಈಗಾಗಲೆ ಕಸರತ್ತು ನಡೆಸಿದ್ದು ಈ ಸೋಲು ಬಿಜೆಪಿಗೆ ಹಿನ್ನಡೆ ಎಂದು ವ್ಯಾಖ್ಯಾನಿಸಲಾಗುತ್ತಿದೆ.

ಬಿಜೆಪಿಯಲ್ಲಿಯೇ ಮುಖ್ಯಮಂತ್ರಿ ಶಿವರಾಜ್ ಚೌಹಾನ್ ವಿರುದ್ಧ ಅಸಮಾಧಾನದ ಅಲೆ ಎದ್ದಿದ್ದು ಪಕ್ಷಕ್ಕೆ ಮುಂದಿನ ದಿನಗಳಲ್ಲಿ ಆತಂಕ ಎದುರಾಗಲಿದೆ.

ಚಿತ್ರಕೂಟ್ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಶಿವರಾಜ್ ಚೌಹಾನ್ ಸ್ವತಃ ಪ್ರಚಾರ ಮಾಡಿದ್ದು ರಾತ್ರಿ ವಾಸ್ತವ್ಯವನ್ನೂ ಹೂಡಿದ್ದರು. ಕ್ಷೇತ್ರಕ್ಕೆ ವಿಶೇಷ ಸವಲತ್ತು, ಅನುದಾನ ನೀಡುವ ಭರವಸೆ ನೀಡಿದ್ದರು. ಆದರೂ ಬಿಜೆಪಿ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಗಿಲ್ಲ

ಇಂದು ಹೆಚ್ಚು ಓದಿದ ಸುದ್ದಿಗಳು
►►'ಗೋ ರಕ್ಷಕ' ದಳದಿಂದ ಮತ್ತೋರ್ವ ವ್ಯಾಪಾರಿಯ ಕಗ್ಗೊಲೆ:
http://bit.ly/2AzSFOe
►►ಹೆಲ್ಮೆಟ್ ಇಲ್ಲದೆ ಬೈಕ್ ಚಾಲನೆ: ಪೊಲೀಸರಿಗೆ ದಂಡ ತೆತ್ತ ಸಚಿವ ಪ್ರಮೋದ್ ಮಧ್ವರಾಜ್:  http://bit.ly/2zQvx1L
►►ಬಲವಂತದ ಮತಾಂತರ, ಮದುವೆ, ಐಸಿಸ್‌‌ಗೆ ಮಾರಾಟ ಯತ್ನ: ಯುವತಿ ಹೈಕೋರ್ಟ್‌ಗೆ: http://bit.ly/2zyNJfw
►►ಲಾರಿ- ರಿಕ್ಷಾ ನಡುವೆ ಅಪಘಾತ: ರಿಕ್ಷಾ ಚಾಲಕ ಮೃತ್ಯು: http://bit.ly/2zPwAiu
►►ಇಂಜಿನಿಯರಿಂಗ್ ವಿದ್ಯಾರ್ಥಿನಿ ಅತ್ಯಾಚಾರ ಯತ್ನ: ಆರೋಪಿಗೆ ಥಳಿತ: http://bit.ly/2yorwxd
►►ಲೋಕಸಭೆಗೆ ಮುತ್ತಿಗೆ ಹಾಕಲು ಯಡಿಯೂರಪ್ಪಗೆ ಸಿಎಂ ಸವಾಲು: http://bit.ly/2hkfHB5
►►ಶಾಸಕ ಮೊಯ್ದಿನ್ ಬಾವಾ ನಿಂದೆ: ಆರೋಪಿಗಳ ಸೆರೆ: http://bit.ly/2zuv98z
►►ಕಾಂಗ್ರೆಸ್ ವಿದ್ಯಾರ್ಥಿ ಬ್ರಿಗೇಡ್ ಜಿಲ್ಲಾಧ್ಯಕ್ಷರಾಗಿ ಎಲ್‌ಸ್ಟನ್ ನೊರೊನ್ಹಾ: http://bit.ly/2AyLruK
►►ಬಳ್ಳಾರಿ ಬಿಜೆಪಿ ಕಚೇರಿ ಎದುರೇ ಟಿಪ್ಪು ಜಯಂತಿ: http://bit.ly/2zCXasp
►►ಟಿಪ್ಪು ಜಯಂತಿಗೆ ಹಾಜರಾಗದ ಉಸ್ತುವಾರಿ ಪ್ರಮೋದ್ ಮಧ್ವರಾಜ್: http://bit.ly/2AzsUi0 ದಿದ್ದಾರೆ

Related Tags: Chitrakoot By-elections, Congress Win
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ