ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಮಸೂದೆ: ಸಿಎಂ ಸಂಧಾನಸಭೆ ವಿಫಲ

ಕರಾವಳಿ ಕರ್ನಾಟಕ ವರದಿ

ಬೆಳಗಾವಿ
: ಖಾಸಗಿ ಆಸ್ಪತ್ರೆಗಳ ಮೇಲೆ ನಿಯಂತ್ರಣ ಮಸೂದೆಗೆ ಸಂಬಂಧಿಸಿ  ಭಾರತೀಯ ವೈದ್ಯಕೀಯ ಸಂಘದ (ಐಎಂಎ) ರಾಜ್ಯ ಪದಾಧಿಕಾರಿಗಳ ಜೊತೆ ಮುಖ್ಯಮಂತ್ರಿ ಸೋಮವಾರ ನಡೆಸಿದ ಮಾತುಕತೆ ವಿಫಲವಾಗಿದೆ. 

ಐಎಂಎ ರಾಜ್ಯ ಘಟಕದ ಮುಖಂಡ ಡಾ. ರವೀಂದ್ರ ಮತ್ತು ಪದಾಧಿಕಾರಿಗಳ ಜೊತೆ ಮುಖ್ಯಮಂತ್ರಿ ಅರ್ಧ ಗಂಟೆ ನಡೆಸಿದ ಮಾತುಕತೆ ವಿಫಲವಾಯಿತು. ಪ್ರತಿಭಟನೆ ನಡೆಸದಂತೆ ಸಿದ್ದರಾಮಯ್ಯ ಮಾಡಿದ ಮನವಿಗೆ ಮನ್ನಣೆ ಸಿಗಲಿಲ್ಲ.

ಅಧಿವೇಶನದಲ್ಲಿ  ಮಂಡಿಸಲಿರುವ ಮಸೂದೆ ಕುರಿತು ಯಾವುದೇ ಭಯ ಬೇಡ. ವೈದ್ಯರಿಗೆ ತೊಂದರೆ ಅಥವಾ ಕಿರುಕುಳ ನೀಡಲು ಮಸೂದೆ ರೂಪಿಸಿಲ್ಲ ಎಂದೂ ಮನವರಿಕೆ ಮಾಡಲು ಸಿದ್ದರಾಮಯ್ಯ ಪ್ರಯತ್ನಿಸಿದರು.

್ಮಸೂದೆ ಮಂಡನೆಗೆ ಮುನ್ನ ಆರೋಗ್ಯ ಸಚಿವರು, ಐಎಂಎ ಪದಾಧಿಕಾರಿಗಳ ಜೊತೆ ಮತ್ತೊಂದು ಸುತ್ತಿನ ಸಮಾಲೋಚನೆ ನಡೆಸುತ್ತೇನ ಎಂದು ಸಿಎಂ ಭರವಸೆ ನೀಡಿದರು.

ಬಡವರಿಗೆ ಅನುಕೂಲ ಆಗಲಿ ಎಂಬ ಉದ್ದೇಶದಿಂದ ಕಾನೂನು ಜಾರಿಗೆ ತರಲು ಸರ್ಕಾರ ಮುಂದಾಗಿದೆ. ವೈದ್ಯರಲ್ಲಿ ಎಲ್ಲರೂ ಕೆಟ್ಟವರಲ್ಲ. ವೈದ್ಯರನ್ನು ನಿಯಂತ್ರಿಸುವ ಉದ್ದೇಶವೂ ನಮಗಿಲ್ಲ’ ಎಂದೂ ಅವರು ಹೇಳಿದರು.

ಮಸೂದೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ಶಾಸಕರು ಮತ್ತು ಸಚಿವರ ನಡುವೆಯೇ ಒಡಕು ಉಂಟಾಗಿದೆ. ಒಂದು ಗುಂಪು ಮಸೂದೆಯನ್ನು  ಪ್ರಬಲವಾಗಿ ವಿರೋಧಿಸುತ್ತಿದ್ದರೆ, ಮತ್ತೊಂದು ಗುಂಪು ಅದನ್ನು ಬಲವಾಗಿ ಬೆಂಬಲಿಸುತ್ತಿದೆ. ಯಾವುದೇ ಕಾರಣಕ್ಕೂ ಸದನದಲ್ಲಿ ಮಸೂದೆ ಮಂಡಿಸದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಕೆಲವು ಶಾಸಕರು, ಸಚಿವರು ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ.ಇಂದು ಹೆಚ್ಚು ಓದಿದ ಸುದ್ದಿಗಳು
►►ಕುಂದಾಪುರದಲ್ಲಿ ಪರಿವರ್ತನಾ ಯಾತ್ರೆ: ಬಿಜೆಪಿ ಬಣಗಳ ನಡುವೆ ಮಾರಾಮಾರಿ:
http://bit.ly/2AEusqZ
►►ಇರಾಕ್-ಇರಾನ್: 7.3 ತೀವ್ರತೆಯ ಭೂಕಂಪ, 129 ಸಾವು: http://bit.ly/2jnx88p
►►ಕಾಪು ಬೀಚ್‌ನಲ್ಲಿ ಆರಂಭಗೊಂಡಿದೆ ಸ್ಕೂಬಾ ಡೈವಿಂಗ್ ಸಾಹಸ ಜಲಕ್ರೀಡೆ: http://bit.ly/2zA9BHf
►►ಮೂಡುಬಿದಿರೆ ಕಂಬಳದಲ್ಲಿ ಪೆಟಾದಿಂದ ಹಿಂಸೆಯ ಆರೋಪ: http://bit.ly/2hoFkRm   ►►ಕುಂದಾಪುರ: ಬಿಜೆಪಿ ಪರಿವರ್ತನಾ ಯಾತ್ರೆಯಲ್ಲ, ಹಾಲಾಡಿ ಬಣದ ಶಕ್ತಿ ಪ್ರದರ್ಶನ ಜಾತ್ರೆ: http://bit.ly/2zGfaCd
►►ಚಿತ್ರಕೂಟ್ ವಿಧಾನಸಭಾ ಚುನಾವಣೆ. ಕಾಂಗ್ರೆಸ್‌ಗೆ ಭರ್ಜರಿ ಜಯ. ಬಿಜೆಪಿಗೆ ಆಘಾತ: http://bit.ly/2hrSaC3
►►ಮಾಧ್ಯಮಗಳ ಸೋಲು ಸರ್ವಾಧಿಕಾರದ ಗೆಲವು: http://bit.ly/2ADmiza
►►'ಗೋ ರಕ್ಷಕ' ದಳದಿಂದ ಮತ್ತೋರ್ವ ವ್ಯಾಪಾರಿಯ ಕಗ್ಗೊಲೆ: http://bit.ly/2AzSFOe
►►ಹೆಲ್ಮೆಟ್ ಇಲ್ಲದೆ ಬೈಕ್ ಚಾಲನೆ: ಪೊಲೀಸರಿಗೆ ದಂಡ ತೆತ್ತ ಸಚಿವ ಪ್ರಮೋದ್ ಮಧ್ವರಾಜ್:  http://bit.ly/2zQvx1L

Related Tags: Private Hospital, KPME Act, Karnataka Doctors
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ