'ಮೇರೆ ಪಾಸ್ ಮಾ ಹೈ' ಖ್ಯಾತಿಯ ಮೇರು ನಟ ಶಶಿ ಕಪೂರ್ ಇನ್ನಿಲ್ಲ

ಕರಾವಳಿ ಕರ್ನಾಟಕ ವರದಿ

ಮುಂಬೈ:
ಭಾರತೀಯ ಚಿತ್ರರಂಗದ ಹೆಸರಾಂತ ನಟ ಶಶಿ ಕಪೂರ್ ಮೃತಪಟ್ಟಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು.

160ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಶಶಿ ಕಪೂರ್ ಮೂರು ಬಾರಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಆಯ್ಕೆಯಾಗಿದ್ದರು. 2011ರಲ್ಲಿ ಪದ್ಮ ಭೂಷಣ ಪ್ರಶಸ್ತ್ರಿಗೆ ಭಾಜನರಾಗಿದ್ದ ಅವರು 2015ರಲ್ಲಿ ಭಾರತೀಯ ಚಲನಚಿತ್ರ ರಂಗದ ಅತ್ಯುನ್ನತ ಪ್ರಶಸ್ತಿಯಾದ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಪಾತ್ರರಾಗಿದ್ದರು.

ದೀವಾರ್, ಸತ್ಯಂ ಶಿವಂ ಸುಂದರಂ ಮತ್ತು ಕಭೀ ಕಭೀ ಮುಂತಾದ ಚಲನಚಿತ್ರಗಳಲ್ಲಿ ಶಶಿಕಪೂರ್ ಅವರ ಅಭಿನಯ ಜನಪ್ರಿಯವಾಗಿತ್ತು. 'ಮೇರೆ ಪಾಸ್ ಮಾ ಹೈ' ಎನ್ನುವ ಅವರ ಡೈಲಾಗ್ ಇಂದಿಗೂ ಜನಪ್ರಿಯವಾಗಿದೆ.

ವಯೋಸಹಜವಾದ ಕೆಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಶಶಿ ಕಪೂರ್ ಕಳೆದ ಎರಡು ದಶಕಗಳಿಂದ ನೇಪಥ್ಯಕ್ಕೆ ಸರಿದಿದ್ದರು. ಬೈಪಾಸ್ ಶಸ್ತ್ರ ಚಿಕಿತ್ಸೆಗೂ ಒಳಗಾಗಿದ್ದ ಅವರನ್ನು 2014ರಲ್ಲಿ ಎದೆಯ ಸೋಂಕಿಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

 ಶಶಿ ಕಪೂರ್ ಅವರು ಮೂರು ಮಕ್ಕಳನ್ನು - ಕುನಾಲ್, ಸಂಜನಾ ಮತ್ತು ಕರಣ್ ಕಪೂರ್ - ಅಗಲಿದ್ದಾರೆ.







ಇಂದು ಹೆಚ್ಚು ಓದಿದ ಹೆಚ್ಚು ಸುದ್ದಿಗಳು
►►ದೇವಾಲಯಕ್ಕೆ ಝಹೀರ್ ಖಾನ್ ದಂಪತಿ ಭೇಟಿ: 'ಘರ್ ವಾಪ್ಸಿ' ಎಂದು ಕಿಡಿಗೇಡಿಗಳಿಂದ ಪೋಸ್ಟ್:
http://bit.ly/2npw7hx
►►ಬೈಕ್‌ಗೆ ಲಾರಿ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು: http://bit.ly/2AqxPUC
►►ಸಂವಿಧಾನದ ಆಶಯದಂತೆ ಕೆಲಸ: ಸಂಸದ ಪ್ರತಾಪ್ ಸಿಂಹ ಟೀಕೆಗೆ ರವಿ ಚೆನ್ನಣ್ಣನವರ್ ಉತ್ತರ: http://bit.ly/2jdyKhS
►►ಹದಿಯಾ ಮದುವೆಗೆ ಮೊದಲೆ ಶೆಫಿನ್ ಜಹಾನ್‌ಗೆ ಉಗ್ರರ ಸಂಪರ್ಕ: ಎನ್‌ಐಎ: http://bit.ly/2iLmh8j
►►ಸ್ಕೂಬಾ ಡೈವಿಂಗ್ ವೇಳೆ ಶಾರ್ಕ್ ದಾಳಿ: ಅಮೇರಿಕದಲ್ಲಿ ಮಂಗಳೂರು ಮಹಿಳೆ ಸಾವು: http://bit.ly/2ATe4Gi
►►ಸಂಸದ ಪ್ರತಾಪ್ ಸಿಂಹ ವರ್ತನೆಗೆ ವ್ಯಾಪಕ ಟೀಕೆ: ಬಿಜೆಪಿ ಬಂದ್ ಕರೆ ವಾಪಸ್: http://bit.ly/2BwVX5y
►►ಮುಸ್ಲಿಮ್ ಹುಡುಗಿಯರ ಡ್ಯಾನ್ಸ್: ಜಗತ್ತೇ ಮುಳುಗಿತು ಎನ್ನುತ್ತಿದ್ದಾರೆ ಮೂಲಭೂತವಾದಿಗಳು!: http://bit.ly/2ATS5iD
►►ಉತ್ತರ ಪ್ರದೇಶದಲ್ಲಿ ಬಿಜೆಪಿ ನಿಜಕ್ಕೂ ಜಯಭೇರಿ ಬಾರಿಸಿದೆಯೆ? ಇಲ್ಲಿದೆ : http://bit.ly/2ApQMVJ
►►ಮಂಗಳೂರು ಮದುವೆಗೆ ಬಂದಳು ಕರಾವಳಿ ಚೆಲುವೆ ಐಶ್ವರ್ಯಾ ರೈ: http://bit.ly/2Ans5v5

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ