ದುರ್ಗಾಂಬಾ-ಕೆಎಸ್ಆರ್‌ಟಿಸಿ ಬಸ್‌ಗಳ ನಡುವೆ ಭೀಕರ ಅಪಘಾತ: ಮೂವರು ಮೃತ್ಯು

ಕರಾವಳಿ ಕರ್ನಾಟಕ ವರದಿ

ಹಾಸನ:
ಕೆಎಸ್‍ಆರ್‌ಟಿಸಿ ವೋಲ್ವೋ ಬಸ್ ಮತ್ತು ದುರ್ಗಾಂಬಾ ಬಸ್ ನಡುವೆ ಇಂದು ನಸುಕಿನ ಜಾವ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಆಲೂರು ತಾಲೂಕಿನ ಹೆದ್ದುರ್ಗೆ ಗ್ರಾಮದಲ್ಲಿ ಸಂಭವಿಸಿದೆ.

ಫಾತೀಮಾ(27), ಅಬ್ದುಲ್ ಸಲಾಂ(54) ಸೇರಿ ಮೂವರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಭೀಕರ ಅಪಘಾತದಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಹೆದ್ದುರ್ಗ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಂಚರಿಸುತ್ತಿದ್ದ ದುರ್ಗಾಂಬಾ ಬಸ್ ಮತ್ತು ಕೆ.ಎಸ್.ಆರ್.ಟಿ.ಸಿ. ವೋಲ್ವೋ ಬಸ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ.

ಪರಿಣಾಮ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಕೆಲಕಾಲ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಯಿತು.

ಸ್ಥಳಕ್ಕೆ ಆಲೂರು, ಸಕಲೇಶಪುರ ಪೊಲೀಸರು ಭೇಟಿ ನೀಡಿದ್ದು, ಸಂಚಾರ ಸುಗಮಗೊಳಿಸಲು ಹರಸಾಹಸ ಪಡುತ್ತಿದ್ದಾರೆ.



ಇಂದು ಹೆಚ್ಚು ಓದಿದ ಹೆಚ್ಚು ಸುದ್ದಿಗಳು
►►ಶರದ್ ಯಾದವ್, ಅಲಿ ಅನ್ಸಾರಿ ರಾಜ್ಯಸಭಾ ಸದಸ್ಯತ್ವ ರದ್ದು:
http://bit.ly/2ArshJV
►►ಕುಮಾರಣ್ಣ ಸಿಎಂ ಆಗುವ ತನಕ ಮುಂಡನ ಮಾಡಿಸಲ್ಲ: ಪೋಕಳೆ: http://bit.ly/2BELgi1
►►ಉಗ್ರ ಪ್ರತಿಭಟನೆಗೆ ಅಮಿತ್ ಷಾ ಸೂಚಿಸಿಲ್ಲ: ಪ್ರತಾಪ ಸಿಂಹ ಗಲಾಟೆಗೆ ಬಿಜೆಪಿ ಸ್ಪಷ್ಟನೆ: http://bit.ly/2A0ZwVk
►►'ಮೇರೆ ಪಾಸ್ ಮಾ ಹೈ' ಖ್ಯಾತಿಯ ಮೇರು ನಟ ಶಶಿ ಕಪೂರ್ ಇನ್ನಿಲ್ಲ http://bit.ly/2jKImAk
►►ದೇವಾಲಯಕ್ಕೆ ಝಹೀರ್ ಖಾನ್ ದಂಪತಿ ಭೇಟಿ: 'ಘರ್ ವಾಪ್ಸಿ' ಎಂದು ಕಿಡಿಗೇಡಿಗಳಿಂದ ಪೋಸ್ಟ್: http://bit.ly/2npw7hx
►►ಬೈಕ್ಗೆ ಲಾರಿ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು: http://bit.ly/2AqxPUC
►►ಸಂವಿಧಾನದ ಆಶಯದಂತೆ ಕೆಲಸ: ಸಂಸದ ಪ್ರತಾಪ್ ಸಿಂಹ ಟೀಕೆಗೆ ರವಿ ಚೆನ್ನಣ್ಣನವರ್ ಉತ್ತರ: http://bit.ly/2jdyKhS
►►ಹದಿಯಾ ಮದುವೆಗೆ ಮೊದಲೆ ಶೆಫಿನ್ ಜಹಾನ್ಗೆ ಉಗ್ರರ ಸಂಪರ್ಕ: ಎನ್ಐಎ: http://bit.ly/2iLmh8j
►►ಸ್ಕೂಬಾ ಡೈವಿಂಗ್ ವೇಳೆ ಶಾರ್ಕ್ ದಾಳಿ: ಅಮೇರಿಕದಲ್ಲಿ ಮಂಗಳೂರು ಮಹಿಳೆ ಸಾವು: http://bit.ly/2ATe4Gi

Related Tags: Hassan Bus Accident, Durgamba Bus, KSRTC Volvo, Sakleshpur Police, Kannada News, Karavalikarnataka News
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ