ಕೆಂಪಯ್ಯ ಸಲಹೆ ನೀಡಿದರೆ ತಪ್ಪೇನು? ಪ್ರತಾಪ ಸಿಂಹಗೆ ಸಿದ್ದರಾಮಯ್ಯ ಪ್ರಶ್ನೆ

ಕರಾವಳಿ ಕರ್ನಾಟಕ ವರದಿ

ಬೆಂಗಳೂರು:
ಗೃಹ ಇಲಾಖೆಯ ಸಲಹೆಗಾರರಾಗಿರುವ ಕೆಂಪಯ್ಯನವರು ಹುಣಸೂರಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮೈಸೂರು ಎಸ್ಪಿಯವರಿಗೆ ಸಲಹೆ ನೀಡಿದರೆ ತಪ್ಪೇನು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಹುಣುಸೂರು ಹನುಮ ಜಯಂತಿ ಘಟನೆಗೆ ಕೆಂಪಯ್ಯ ಕಾರಣ ಎಂದು ಪ್ರತಾಪ್ ಸಿಂಹ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಎಸ್.ಪಿ.ರವಿ ಚನ್ನಣ್ಣನವರ್ ಜೊತೆ ಕೆಂಪಯ್ಯ ಮಾತನಾಡಿದರೆ ತಪ್ಪೇನು. ಕೆಂಪಯ್ಯ ಗೃಹ ಇಲಾಖೆಯ ಸಲಹೆಗಾರರಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಿ ಎಂದು ಎಸ್ಪಿಯವರಿಗೆ ಹೇಳಿದರೆ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.

ಪ್ರತಾಪ ಸಿಂಹ ಅವರಿಗೆ ರಾಜಕೀಯದಲ್ಲಿ ಪ್ರಭುದ್ಧತೆ ಇಲ್ಲ. ಚುನಾಯಿತ ಪ್ರತಿನಿಧಿಯಾಗಿ ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕಾರ ನೀಡಬೇಕೆ ಹೊರತು ಅವರೇ ಶಾಂತಿ ಕದಡುವುದಲ್ಲ ತರವಲ್ಲ.

ಹನುಮ ಜಯಂತಿ ಮೆರವಣಿಗೆಗೆ ಕಳೆದ ವರ್ಷದಂತೆ ಪೊಲೀಸರು ಮಾರ್ಗ ನಿಗದಿ ಮಾಡಿದ್ದರು. ಅದನ್ನು ಬಿಟ್ಟು ಬೇರೆ ಮಾರ್ಗದಲ್ಲೆ ಮೆರವಣಿಗೆ ಸಾಗಬೇಕು ಎಂಬ ಪ್ರತಿಷ್ಠೆ ಏಕೆ ಬೇಕಿತ್ತು. ಶಾಂತಿ ಕಾಪಾಡಲು ಪೊಲೀಸರು ತಮ್ಮ ಕೆಲಸ ಮಾಡಿದ್ದಾರೆ. ಇದಕ್ಕೂ ಕೆಂಪಯ್ಯನವರಿಗೂ ಯಾವುದೇ ಸಂಬಂಧ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಂಪಯ್ಯ ಅವರನ್ನು ಸಮರ್ಥಿಸಿಕೊಂಡಿದ್ದಾರೆ.

ಮಂಗಳವಾರ ಪ್ರತಾಪ್ ಸಿಂಹ ಫೇಸ್‍ಬುಕ್ ಲೈವ್‍ನಲ್ಲಿ ನೀವು ಪೊಲೀಸ್ ಇಲಾಖೆಗೆ ನಿಷ್ಠರೋ, ಕೆಂಪಯ್ಯ ಅವರಿಗೆ ನಿಷ್ಠರೋ. ನಿಮ್ಮ ಮಾಸ್ಟರ್ ಯಾರು ಅಂತ ನನಗೆ ಗೊತ್ತಿದೆ. ಕರ್ತವ್ಯದ ಹೆಸರಿನಲ್ಲಿ ಜಿಲ್ಲಾಧಿಕಾರಿಗಳನ್ನು ಎಳೆದು ತರಬೇಡಿ ಎಂದು ಮೈಸೂರು ಎಸ್‍ಪಿ ರವಿಚನ್ನಣ್ಣನವರ್ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಇಂದು ಹೆಚ್ಚು ಓದಿದ ಹೆಚ್ಚು ಸುದ್ದಿಗಳು
►►ಮುಸ್ಲಿಮ್ ಯುವತಿಯರ ಡ್ಯಾನ್ಸ್‌ಗೆ ಬೆಂಬಲ ನೀಡಿದ ರೇಡಿಯೊ ಜಾಕಿಗೆ ಕೊಲೆ ಬೆದರಿಕೆ:
http://bit.ly/2BCuOyc
►►ನಿತ್ಯಾನಂದ ಭಕ್ತರಿಂದ ವಿಚಾರವಾದಿ ನರೇಂದ್ರ ನಾಯಕ್‌ಗೆ ಬೆದರಿಕೆ: http://bit.ly/2iqYMxg
►►ರಾಮ ಹುಟ್ಟಿದ್ದಕ್ಕೆ ಪುರಾವೆ ಇಲ್ಲ: ಸಿ. ಎಸ್. ದ್ವಾರಕನಾಥ್: http://bit.ly/2jijuQY
►►ರೈಲಿನಲ್ಲಿ ದರೋಡೆ: ಚಿನ್ನಾಭರಣ ಸಹಿತ ಆರೋಪಿಗಳ ಸೆರೆ: http://bit.ly/2B26jhH
►►ಭರ್ಜರಿಯಾಗಿ ಸಾಗಿದೆ ಜಿಗ್ನೇಶ್ ಪ್ರಚಾರ: ಸಾಥ್ ನೀಡಿದ್ದಾರೆ ದೇಶಾದ್ಯಂತದ 'ಸಂಗಾತಿಗಳು': http://bit.ly/2knfYYV
►►ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನದ ರಜೆ ರದ್ದು ಮಾಡಿದ ಯೋಗಿ ಸರ್ಕಾರ: http://bit.ly/2jV3Ees
►►ಸಮಾನ ನಾಗರಿಕ ಸಂಹಿತೆ ಜಾರಿ ಅಸಾಧ್ಯ: ಕಾನೂನು ಆಯೋಗದ ಮುಖ್ಯಸ್ಥ ನ್ಯಾ. ಚೌಹಾಣ್:  http://bit.ly/2A8H6lC
►►ಇಲೆಕ್ಟ್ರಾನಿಕ್ ಮತಯಂತ್ರ ಬಳಸಿದರೆ ಕರ್ನಾಟಕ ಚುನಾವಣೆಗೆ ಬಹಿಷ್ಕಾರ? http://bit.ly/2iT7qbN

Related Tags: Siddaramiah, Kempayya, Pratap Simha. Hunsur, Hanuma Jayanti
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ