ಸಿ.ಎಸ್. ದ್ವಾರಕನಾಥ್ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ದೂರು ದಾಖಲು

ಕರಾವಳಿ ಕರ್ನಾಟಕ ವರದಿ

ಬಂಟ್ವಾಳ:
ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಸಿ.ಎಸ್. ದ್ವಾರಕಾನಾಥ್ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಂಗಳೂರು ಪುರಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿಂದೂ ದೇವರ ಬಗ್ಗೆ ದ್ವಾರಕಾನಾಥ್ ಅವರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಶ್ರೀರಾಮನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ದ್ವಾರಕಾನಾಥ್ ಅವರು ಹಿಂದೂ ಧರ್ಮೀಯರ ಭಾವನೆಗಳಿಗೆ ಘಾಸಿ ಉಂಟುಮಾಡಿದ್ದಾರೆ.

ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಕಲ್ಲಡ್ಕದ ಗಣೇಶ್ ಶೆಟ್ಟಿ ಎಂಬವರು ಪೊಲೀಸರಿಗೆ ದೂರಿದ್ದರು. ಬಂಟ್ವಾಳ ಪೊಲೀಸರು ದೂರು ದಾಖಲಿಸಿದ್ದಾರೆ.

ಇತಿಹಾಸದಲ್ಲಿ ಶ್ರೀರಾಮ ಹುಟ್ಟಿದ್ದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಸಿ.ಎಸ್.ದ್ವಾರಕನಾಥ್ ಹೇಳಿದ್ದರು.

ಮಂಗಳೂರಿನ ಪುರಭವನದಲ್ಲಿ ನಡೆದ ‘ಬಾಬರಿ ಮಸೀದಿ ಧ್ವಂಸ’ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದ ದ್ವಾರಕನಾಥ್, ಇತಿಹಾಸದಲ್ಲಿ ಬುದ್ಧ, ಕ್ರೈಸ್ತ, ಪೈಗಂಬರ್ ಇರುವಿಕೆಗೆ ಸಾಕಷ್ಟು ಪುರಾವೆಗಳಿವೆ. ಆದರೆ ಶ್ರೀರಾಮ ಹುಟ್ಟಿರುವುದಕ್ಕೆ ಯಾವುದೇ ದಾಖಲೆಗಳು ಸಹ ಇಲ್ಲ. ನಮ್ಮ ತಾತನ ಹೆಸರು ಹೇಳಿ ಎಂದರೆ ಹೇಳಬಹುದು. ಅವರ ಅಪ್ಪನ ಹೆಸರು ಹೇಳಿ ಎಂದರೆ ಆಗುತ್ತಾ. ಆದರೆ 9 ಲಕ್ಷ ವರ್ಷಗಳ ಹಿಂದೆ ಇದ್ದ ವ್ಯಕ್ತಿಯ ಬಗ್ಗೆ ಮಾತನಾಡುತ್ತಾರೆ ಎಂದರೆ ಇದಕ್ಕೆ ಏನು ಹೇಳಬೇಕು ಗೊತ್ತಿಲ್ಲ ಎಂದು ಹೇಳಿದ್ದರು.

ನಮಗೆ ಜ್ಞಾನ ಬಂದ ನಂತರ ದಾಖಲಾತಿಗಳ ಪ್ರಕಾರ ನಾನು ಜಗತ್ತಿನಲ್ಲಿ ಮೂರು ವ್ಯಕ್ತಿಗಳನ್ನು ಗುರುತಿಸಬಹುದು. ಮೊದಲನೆಯದ್ದಾಗಿ ಬುದ್ದ. ಇವರು ಸುಮಾರು 2600 ವರ್ಷಗಳ ಹಿಂದೆ ಇದ್ದರು ಎಂಬುದಕ್ಕೆ ದಾಖಲಾತಿಗಳಿವೆ.

ಎರಡನೆಯದಾಗಿ ಜೀಸಸ್. ಇವರು ಸುಮಾರು 1600 ವರ್ಷಗಳ ಹಿಂದೆ ಇದ್ದರು, ಇದಕ್ಕೂ ಪುರಾವೆಗಳಿವೆ. ಇನ್ನು ಮೂರನೆಯದಾಗಿ ಪೈಗಂಬರ್. ಇವರು ಸುಮಾರು 600 ವರ್ಷಗಳ ಹಿಂದೆ ಇದ್ದರು ಎಂಬುವುದಕ್ಕೆ ದಾಖಲಾತಿಗಳಿವೆ. ಇವುಗಳನ್ನು ಹೊರತುಪಡಿಸಿದರೆ ಇನ್ನು ಯಾವ ದಾಖಲಾತಿಗಳೂ ವಿಜ್ಞಾನದ ಕಣ್ಣಿಗೆ ಸಿಗುತ್ತಿಲ್ಲ ಎಂದಿದ್ದಾರೆ.

ದ್ವಾರಕಾನಾಥ್ ಹೇಳಿಕೆಗೆ ಹಿಂದೂತ್ವ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಚರ್ಚೆ ಶುರುವಾಗಿದೆ.

ಇಂದು ಹೆಚ್ಚು ಓದಿದ ಹೆಚ್ಚು ಸುದ್ದಿಗಳು
►►ಕೆಂಪಯ್ಯ ಸಲಹೆ ನೀಡಿದರೆ ತಪ್ಪೇನು? ಪ್ರತಾಪ ಸಿಂಹಗೆ ಸಿದ್ದರಾಮಯ್ಯ ಪ್ರಶ್ನೆ:
http://bit.ly/2jkBCJR
►►ಮುಸ್ಲಿಮ್ ಯುವತಿಯರ ಡ್ಯಾನ್ಸ್‌ಗೆ ಬೆಂಬಲ ನೀಡಿದ ರೇಡಿಯೊ ಜಾಕಿಗೆ ಕೊಲೆ ಬೆದರಿಕೆ: http://bit.ly/2BCuOyc
►►ನಿತ್ಯಾನಂದ ಭಕ್ತರಿಂದ ವಿಚಾರವಾದಿ ನರೇಂದ್ರ ನಾಯಕ್‌ಗೆ ಬೆದರಿಕೆ: http://bit.ly/2iqYMxg
►►ರಾಮ ಹುಟ್ಟಿದ್ದಕ್ಕೆ ಪುರಾವೆ ಇಲ್ಲ: ಸಿ. ಎಸ್. ದ್ವಾರಕನಾಥ್: http://bit.ly/2jijuQY
►►ರೈಲಿನಲ್ಲಿ ದರೋಡೆ: ಚಿನ್ನಾಭರಣ ಸಹಿತ ಆರೋಪಿಗಳ ಸೆರೆ: http://bit.ly/2B26jhH
►►ಭರ್ಜರಿಯಾಗಿ ಸಾಗಿದೆ ಜಿಗ್ನೇಶ್ ಪ್ರಚಾರ: ಸಾಥ್ ನೀಡಿದ್ದಾರೆ ದೇಶಾದ್ಯಂತದ 'ಸಂಗಾತಿಗಳು': http://bit.ly/2knfYYV
►►ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನದ ರಜೆ ರದ್ದು ಮಾಡಿದ ಯೋಗಿ ಸರ್ಕಾರ: http://bit.ly/2jV3Ees
►►ಸಮಾನ ನಾಗರಿಕ ಸಂಹಿತೆ ಜಾರಿ ಅಸಾಧ್ಯ: ಕಾನೂನು ಆಯೋಗದ ಮುಖ್ಯಸ್ಥ ನ್ಯಾ. ಚೌಹಾಣ್:  http://bit.ly/2A8H6lC
►►ಇಲೆಕ್ಟ್ರಾನಿಕ್ ಮತಯಂತ್ರ ಬಳಸಿದರೆ ಕರ್ನಾಟಕ ಚುನಾವಣೆಗೆ ಬಹಿಷ್ಕಾರ? http://bit.ly/2iT7qbN

Related Tags: C. S. Dwarakanath, Shri Rama, Mangalore, Bantal Police, Babri Masjid, Lecture, Kannada News, Karnataka News, Coastal Karnataka News, Karavali News, Karavali Karnataka, Latest Kannada News, ಕರಾವಳಿ ಸುದ್ದಿ, ಕರಾವಳಿ ಕರ್ನಾಟಕ ಸುದ್ದಿ
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ