ಬಿಜೆಪಿ ಚುನಾವಣಾ ಪ್ರಚಾರ ರಾಜ್ಯದಲ್ಲಿ ಕೋಮುಸಾಮರಸ್ಯ ಕದಡದಿರಲಿ: ಸಿದ್ಧರಾಮಯ್ಯ

ರವಿತೇಜ ಕಾರವಾರ/ಕರಾವಳಿ ಕರ್ನಾಟಕ ವರದಿ

ಕಾರವಾರ:
ಚುನಾವಣಾ ಪ್ರಚಾರಕ್ಕಾಗಿ ರಾಜ್ಯಕ್ಕೆ ಬರಲಿರುವ ಪ್ರಧಾನಿ ಮೋದಿ ಹಾಗೂ ಅಮಿತ್ ಷಾ ರಾಜ್ಯದಲ್ಲಿ ಕೋಮು ಸೌಹಾರ್ದ ಕದಡುವ ಕಾರ್ಯವನ್ನು ಯಾವುದೇ ಕಾರಣಕ್ಕೂ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.

ಸರ್ಕಾರದ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಉತ್ತರ ಕನ್ನಡದಲ್ಲಿ 2 ದಿನಗಳ ಕಾಲ ಜಿಲ್ಲಾ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಭಟ್ಕಳದ ಹ್ಯಾಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯದಲ್ಲಿ ಪ್ರಚಾರಕ್ಕೆ ಪ್ರಧಾನಿ ಮೋದಿ ಅಥವಾ ಬಿಜೆಪಿಯ ರಾಜ್ಯಾಧ್ಯಕ್ಷ ಅಮಿತ್ ಷಾ ಬರಲಿ ನಮ್ಮ ಅಭ್ಯಂತರವಿಲ್ಲ. ಆದರೆ ರಾಜ್ಯದ ಕೋಮು ಸಾಮರಸ್ಯ ಕದಡುವ ಕೆಲಸ ಮಾತ್ರವಾಗಬಾರದು ಎಂದರು.

ಮಾತೃಪೂರ್ಣ ಯೋಜನೆಗೆ ಕರಾವಳಿ ಹಾಗೂ ಮಲೆನಾಡಿನ ಕೆಲ ಭಾಗಗಳಲ್ಲಿ ಮಾತ್ರ ವಿರೋಧ ವ್ಯಕ್ತವಾಗಿದೆ. ಈ ಭಾಗಗಳಲ್ಲಿ ದೂರದ ಊರುಗಳಿಂದ ಅಂಗನವಾಡಿ ಕೇಂದ್ರಗಳಿಗೆ ಬರಬೇಕಾಗಿರುವುದರಿಂದ ಇಲ್ಲಿ ಕೆಲವರಿಗೆ ಯೋಜನೆ ಲಾಭ ತಲುಪುತ್ತಿಲ್ಲ. ಆದರೆ ಈ ಬಗ್ಗೆ ಸಚಿವೆ ಉಮಾಶ್ರಿ ಅವರು ಸಭೆ ನಡೆಸಿದ್ದು, ಜಿಲ್ಲಾಧಿಕಾರಿ ಪ್ರಸ್ತಾವನೆ ನೀಡಿದ್ದಾರೆ. ಎಲ್ಲಿ ಸಾಧ್ಯವಿಲ್ಲವೋ ಅಂತಹ ಭಾಗಗಳಲ್ಲಿ ಪರ್ಯಾಯ ವ್ಯವಸ್ಥೆಯಾಗಿ ಮೊಬೈಲ್ ವ್ಯವಸ್ಥೆ ಅಳವಡಿಸುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಹೇಳಿದರು.

ದೇವಾಲಯಗಳಲ್ಲಿ ದಲಿತ ಅರ್ಚಕರ ನೇಮಕಕ್ಕೆ ಸಂಬಂಧಿಸಿದಂತೆ ಯಾವುದೇ ವಿಶೇಷ ಕಾನೂನುಗಳಿಲ್ಲ. ಆದರೆ ನಾರಾಯಣ ಗುರು ಅವರು ಹೇಳಿದ ದಾರಿಯಲ್ಲಿ ನಾವು ಸಾಗುತ್ತಾ ಇದ್ದೇವೆ. ಯಾರೂ ಕೂಡಾ ದೇವಸ್ಥಾನ ನಿರ್ಮಿಸಿಕೊಂಡು ತಾವೇ ಅರ್ಚಕರಾಗಬಹುದು ಎಂದರು.


ರಾಜಕೀಯ ಕಾರ್ಯದರ್ಶಿಗಳ ನೇಮಕಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ದೇವೇಗೌಡರು ಮಾಡಿರುವ ಟೀಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಇವೆಲ್ಲಾ ರಾಜಕೀಯ ನೇಮಕಗಳಾಗಿವೆ. ದೆಹಲಿಯಂಥ ಸಣ್ಣ ರಾಜ್ಯದಲ್ಲೂ ಕೂಡಾ ರಾಜಕೀಯ ಕಾರ್ಯದರ್ಶಿಗಳು ಇದ್ದಾರೆ ಎಂದರು.

ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ವಿ.ದೇಶಪಾಂಡೆ, ಶಾಸಕ ಮಂಕಾಳು ವೈದ್ಯ ಮುಂತಾದವರು ಇದ್ದರು.

ಇಂದು ಹೆಚ್ಚು ಓದಿದ ಹೆಚ್ಚು ಸುದ್ದಿಗಳು
►►ಸಿ.ಎಸ್. ದ್ವಾರಕನಾಥ್ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ದೂರು ದಾಖಲು:
http://bit.ly/2AzTJTy
►►ಕೆಂಪಯ್ಯ ಸಲಹೆ ನೀಡಿದರೆ ತಪ್ಪೇನು? ಪ್ರತಾಪ ಸಿಂಹಗೆ ಸಿದ್ದರಾಮಯ್ಯ ಪ್ರಶ್ನೆ: http://bit.ly/2jkBCJR
►►ಮುಸ್ಲಿಮ್ ಯುವತಿಯರ ಡ್ಯಾನ್ಸ್‌ಗೆ ಬೆಂಬಲ ನೀಡಿದ ರೇಡಿಯೊ ಜಾಕಿಗೆ ಕೊಲೆ ಬೆದರಿಕೆ: http://bit.ly/2BCuOyc
►►ನಿತ್ಯಾನಂದ ಭಕ್ತರಿಂದ ವಿಚಾರವಾದಿ ನರೇಂದ್ರ ನಾಯಕ್‌ಗೆ ಬೆದರಿಕೆ: http://bit.ly/2iqYMxg
►►ರಾಮ ಹುಟ್ಟಿದ್ದಕ್ಕೆ ಪುರಾವೆ ಇಲ್ಲ: ಸಿ. ಎಸ್. ದ್ವಾರಕನಾಥ್: http://bit.ly/2jijuQY
►►ರೈಲಿನಲ್ಲಿ ದರೋಡೆ: ಚಿನ್ನಾಭರಣ ಸಹಿತ ಆರೋಪಿಗಳ ಸೆರೆ: http://bit.ly/2B26jhH
►►ಭರ್ಜರಿಯಾಗಿ ಸಾಗಿದೆ ಜಿಗ್ನೇಶ್ ಪ್ರಚಾರ: ಸಾಥ್ ನೀಡಿದ್ದಾರೆ ದೇಶಾದ್ಯಂತದ 'ಸಂಗಾತಿಗಳು': http://bit.ly/2knfYYV
►►ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನದ ರಜೆ ರದ್ದು ಮಾಡಿದ ಯೋಗಿ ಸರ್ಕಾರ: http://bit.ly/2jV3Ees
►►ಸಮಾನ ನಾಗರಿಕ ಸಂಹಿತೆ ಜಾರಿ ಅಸಾಧ್ಯ: ಕಾನೂನು ಆಯೋಗದ ಮುಖ್ಯಸ್ಥ ನ್ಯಾ. ಚೌಹಾಣ್:  http://bit.ly/2A8H6lC
►►ಇಲೆಕ್ಟ್ರಾನಿಕ್ ಮತಯಂತ್ರ ಬಳಸಿದರೆ ಕರ್ನಾಟಕ ಚುನಾವಣೆಗೆ ಬಹಿಷ್ಕಾರ? http://bit.ly/2iT7qbN

Related Tags: Siddaramiah, Uttara Kannada, Karwar News, Kannada News, Karnataka News, Coastal Karnataka News, Karavali News, Karavali Karnataka, Latest Kannada News, ಕರಾವಳಿ ಸುದ್ದಿ, ಕರಾವಳಿ ಕರ್ನಾಟಕ ಸುದ್ದಿ
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ