ಪತ್ರಕರ್ತ ರವಿ ಬೆಳಗೆರೆಗೆ ಶಿಕ್ಷೆ ಜಾರಿಗೆ ಹೈಕೋರ್ಟ್ ತಡೆ

ಕರಾವಳಿ ಕರ್ನಾಟಕ ವರದಿ

ಬೆಂಗಳೂರು:
ಶಾಸಕರ ಹಕ್ಕು ಚ್ಯುತಿ ಪ್ರಕರಣದಲ್ಲಿ ಪತ್ರಕರ್ತರಾದ ರವಿ ಬೆಳಗೆರೆ ಹಾಗೂ ಅನಿಲ್ ರಾಜ್ ಅವರಿಗೆ ಹಕ್ಕು ಬಾಧ್ಯತಾ ಸಮಿತಿ ವಿಧಿಸಿರುವ ಒಂದು ವರ್ಷದ ಜೈಲು ಶಿಕ್ಷೆ ಮತ್ತು ತಲಾ 10 ಸಾವಿರ ರೂ. ದಂಡ ಆದೇಶ ಜಾರಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

‘ಹಾಯ್ ಬೆಂಗಳೂರ್’ ಸಂಪಾದಕ ರವಿ ಬೆಳಗೆರೆ ಮತ್ತು ‘ಯಲಹಂಕ ವಾಯ್ಸ್’ ಸಂಪಾದಕ ಅನಿಲ್ ರಾಜ್ ಅವರಿಗೆ ಶಿಕ್ಷೆ ಮತ್ತು ದಂಡ ಜಾರಿಗೊಳಿಸುವಂತೆ ವಿಧಾನಸಭೆ ಸಚಿವಾಲಯ ಪೊಲೀಸ್ ಇಲಾಖೆಗೆ ಜೂನ್ ತಿಂಗಳಲ್ಲಿ ಆದೇಶ ನೀಡಿತ್ತು.

ಸದನವು ಹಕ್ಕು ಬಾಧ್ಯತೆ ಸಮಿತಿಯ ವರದಿಯನ್ನು ಅಂಗೀಕರಿಸಿ ಶಿಕ್ಷೆ ಜಾರಿಗೊಳಿಸಲು ನಿರ್ಣಯ ತೆಗೆದುಕೊಂಡಿದ್ದ ಹಿನ್ನೆಲೆಯಲ್ಲಿ ಪತ್ರಕರ್ತರು ಹೈಕೋರ್ಟ್ ಮೊರೆ ಹೋಗಿದ್ದರು. ಪತ್ರಕರ್ತರ ಬಗ್ಗೆ ಸ್ವಲ್ಪ ಉದಾರತೆ ತೋರಿಸಿ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿತ್ತು.

ತಮ್ಮ ವಿರುದ್ಧ ಆರೋಪಗಳು ಶಾಸಕರ ಹಕ್ಕು ಚ್ಯುತಿ ವ್ಯಾಪ್ತಿಗೆ ಒಳಪಡುವುದಿಲ್ಲ. ಹೈಕೋರ್ಟ್ ನಿರ್ದೇಶನದಂತೆ ಮತ್ತೂಮ್ಮೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದರೂ ಸಮಿತಿ ವಾದ ಮಂಡನೆಗೆ ಅವಕಾಶ ನೀಡದೇ ಬಂಧಿಸುವಂತೆ ಪೊಲೀಸರಿಗೆ ನಿರ್ದೇಶಿಸಲಾಗಿದೆ. ಹಕ್ಕುಭಾದ್ಯತಾ ಸಮಿತಿಯ ಆದೇಶ ರದ್ದುಗೊಳಿಸುವಂತೆ ಪತ್ರಕರ್ತರು ಕೋರ್ಟ್ಗೆ ಮನವಿ ಮಾಡಿದ್ದರು.

ಹಕ್ಕುಭಾದ್ಯತಾ ಸಮಿತಿಯ ಆದೇಶ ರದ್ದುಗೊಳಿಸುವಂತೆ ಕೋರಿ ರವಿ ಬೆಳಗೆರೆ ಹಾಗೂ ಅನಿಲ್ ರಾಜ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎ.ಎಸ್ ಬೋಪಣ್ಣ ನಡೆಸಿದ್ದು, ಪ್ರಕರಣ ಕೋರ್ಟ್ನಲ್ಲಿ ವಿಚಾರಣೆ ಹಂತದಲ್ಲಿರುವುದರಿಂದ ಈ ಇಬ್ಬರು ಸಂಪಾದಕರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುವುದಾಗಲಿ ಅಥವಾ ಬಂಧಿಸುವುದಾಗಲಿ ರಾಜ್ಯ ಸರ್ಕಾರ ಮಾಡಬಾರದು ಎಂದು ಹೇಳಿದ್ದನ್ನು ಸ್ಮರಿಸಬಹುದು.

ಇಂದು ಹೆಚ್ಚು ಓದಿದ ಹೆಚ್ಚು ಸುದ್ದಿಗಳು
►►ರಾಜಕಾರಣದಲ್ಲಿ ಧರ್ಮ ಪರಿಪಾಲನೆ ಆಗಬೇಕು. ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡಬಾರದು: ಸಿದ್ದರಾಮಯ್ಯ:
http://bit.ly/2nzI9VC
►►ನೌಕಾಪಡೆ ಅಧಿಕಾರಿಗಳಿಗೆ ಅಗೌರವ ತೋರಿದರೆ ರಕ್ಷಣಾ ಮಂತ್ರಿ?: http://bit.ly/2jj8inh
►►ಬಿಜೆಪಿ ಚುನಾವಣಾ ಪ್ರಚಾರ ರಾಜ್ಯದಲ್ಲಿ ಕೋಮುಸಾಮರಸ್ಯ ಕದಡದಿರಲಿ: ಸಿದ್ಧರಾಮಯ್ಯ: http://bit.ly/2BCCiB4
►►ಸಿ.ಎಸ್. ದ್ವಾರಕನಾಥ್ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ದೂರು ದಾಖಲು: http://bit.ly/2AzTJTy
►►ಕೆಂಪಯ್ಯ ಸಲಹೆ ನೀಡಿದರೆ ತಪ್ಪೇನು? ಪ್ರತಾಪ ಸಿಂಹಗೆ ಸಿದ್ದರಾಮಯ್ಯ ಪ್ರಶ್ನೆ: http://bit.ly/2jkBCJR
►►ಮುಸ್ಲಿಮ್ ಯುವತಿಯರ ಡ್ಯಾನ್ಸ್‌ಗೆ ಬೆಂಬಲ ನೀಡಿದ ರೇಡಿಯೊ ಜಾಕಿಗೆ ಕೊಲೆ ಬೆದರಿಕೆ: http://bit.ly/2BCuOyc
►►ನಿತ್ಯಾನಂದ ಭಕ್ತರಿಂದ ವಿಚಾರವಾದಿ ನರೇಂದ್ರ ನಾಯಕ್‌ಗೆ ಬೆದರಿಕೆ: http://bit.ly/2iqYMxg
►►ರಾಮ ಹುಟ್ಟಿದ್ದಕ್ಕೆ ಪುರಾವೆ ಇಲ್ಲ: ಸಿ. ಎಸ್. ದ್ವಾರಕನಾಥ್: http://bit.ly/2jijuQY
►►ರೈಲಿನಲ್ಲಿ ದರೋಡೆ: ಚಿನ್ನಾಭರಣ ಸಹಿತ ಆರೋಪಿಗಳ ಸೆರೆ: http://bit.ly/2B26jhH
►►ಭರ್ಜರಿಯಾಗಿ ಸಾಗಿದೆ ಜಿಗ್ನೇಶ್ ಪ್ರಚಾರ: ಸಾಥ್ ನೀಡಿದ್ದಾರೆ ದೇಶಾದ್ಯಂತದ 'ಸಂಗಾತಿಗಳು': http://bit.ly/2knfYYV
►►ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನದ ರಜೆ ರದ್ದು ಮಾಡಿದ ಯೋಗಿ ಸರ್ಕಾರ: http://bit.ly/2jV3Ees

Related Tags: Justice A S Bopanna, Ravi Belagere, Anilraj, Punishment to Journalists, Kannada News, Karnataka News, Karavali Karnataka, Latest Kannada News, ರವಿ ಬೆಳಗರೆ, ‘ಹಾಯ್ ಬೆಂಗಳೂರ್’, ‘ಯಲಹಂಕ ವಾಯ್ಸ್’ ಅನಿಲ್ ರಾಜ್, ಕರಾವಳಿ ಕರ್ನಾಟಕ ಸುದ್ದಿ
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ