ಉ.ಕ. ಜಿಲ್ಲೆಗೆ ಸಿಎಂ ಭೇಟಿ ವೇಳೆ ಹೊನ್ನಾವರದಲ್ಲಿ ಕೋಮು ಸಂಘರ್ಷ

ಕರಾವಳಿ ಕರ್ನಾಟಕ ವರದಿ

ಹೊನ್ನಾವರ:
ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಕೋಮು ಘರ್ಷಣೆ ನಡೆದಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ವರದಿಯಾಗಿದೆ. ಲಾಠಿ ಪ್ರಹಾರಗೈದ ಪೊಲೀಸರು ಹತ್ತಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದು ಗಲಭೆಯನ್ನು ನಿಯಂತ್ರಿಸಿದ್ದಾರೆ.

ದ್ವಿಚಕ್ರ ವಾಹನ ಮತ್ತು ಆಟೋ ಢಿಕ್ಕಿ ಪ್ರಕರಣಕ್ಕೆ ಕೋಮುಬಣ್ಣ ಬಂದಿದ್ದು, ಎರಡು ಕೋಮುಗಳ ಯುವಕರು ಕಲ್ಲೆಸೆದು, ದೊಣ್ಣೆಯಿಂದ ಹೊಡೆದಾಡಿಕೊಂಡ ಘಟನೆ ಬಸ್ ನಿಲ್ದಾಣದಲ್ಲಿ ನಡೆದಿದೆ.

ಶರತ್ ಮಹಾಲೆ ಮತ್ತು ನರಸಿಂಹ ಮೇಸ್ತ ಎಂಬವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಎರಡು ಟೆಂಪೋಗಳ ಗಾಜುಗಳು ಕಲ್ಲೆಸೆತದಿಂದ ಪುಡಿಯಾಗಿವೆ. ಬಸ್ ನಿಲ್ದಾಣ ಹಾಗೂ ರಾಷ್ಟ್ರೀಯ ಹೆದ್ದಾರಿ 66ರ ಬಳಿ ನಾಕಾಬಂದಿಯೊಂದಿಗೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ತಾಲೂಕಿನ  ಚಂದಾವರದಲ್ಲಿ ಧ್ವಜ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಗಲಭೆಯುಂಟಾಗಿ 27 ಮಂದಿ ಬಿಜೆಪಿ ಕಾರ್ಯಕರ್ತರನ್ನು ಇತ್ತೀಚೆಗೆ ಬಂಧಿಸಿದ್ದನ್ನು ಸ್ಮರಿಸಬಹುದು.

ಈದ್ ಮಿಲಾದ್ ಹಬ್ಬದ ತಯಾರಿ ಸಂಭ್ರಮದಲ್ಲಿ ಮುಸಲ್ಮಾನರಿರುವ ಸಂದರ್ಭದಲ್ಲೇ ಎರಡು ಕೋಮುಗಳ ನಡುವಿನ ಸೌಹಾರ್ದತೆ ಕದಡಿತ್ತು.

ಇಂದು ಹೆಚ್ಚು ಓದಿದ ಹೆಚ್ಚು ಸುದ್ದಿಗಳು
►►ಬಸ್-ಕಂಟೈನರ್ ಮುಖಾಮುಖಿ ಢಿಕ್ಕಿ: ಮಹಿಳೆ ಮೃತ್ಯು:
http://bit.ly/2BFlTf6
►►ಪ್ರಚಾರಕ್ಕೆ ಮೋದಿ ಬಂದರೂ ಕರ್ನಾಟಕದಲ್ಲಿ ಬಿಜೆಪಿ ಗೆಲ್ಲಲ್ಲ: ಸಿದ್ದರಾಮಯ್ಯ: http://bit.ly/2ivkmRr
►►ಪತ್ರಕರ್ತ ರವಿ ಬೆಳಗೆರೆಗೆ ಶಿಕ್ಷೆ ಜಾರಿಗೆ ಹೈಕೋರ್ಟ್ ತಡೆ: http://bit.ly/2B4G9L6
►►ರಾಜಕಾರಣದಲ್ಲಿ ಧರ್ಮ ಪರಿಪಾಲನೆ ಆಗಬೇಕು. ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡಬಾರದು: ಸಿದ್ದರಾಮಯ್ಯ: http://bit.ly/2nzI9VC
►►ನೌಕಾಪಡೆ ಅಧಿಕಾರಿಗಳಿಗೆ ಅಗೌರವ ತೋರಿದರೆ ರಕ್ಷಣಾ ಮಂತ್ರಿ?: http://bit.ly/2jj8inh
►►ಬಿಜೆಪಿ ಚುನಾವಣಾ ಪ್ರಚಾರ ರಾಜ್ಯದಲ್ಲಿ ಕೋಮುಸಾಮರಸ್ಯ ಕದಡದಿರಲಿ: ಸಿದ್ಧರಾಮಯ್ಯ: http://bit.ly/2BCCiB4
►►ಸಿ.ಎಸ್. ದ್ವಾರಕನಾಥ್ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ದೂರು ದಾಖಲು: http://bit.ly/2AzTJTy
►►ಕೆಂಪಯ್ಯ ಸಲಹೆ ನೀಡಿದರೆ ತಪ್ಪೇನು? ಪ್ರತಾಪ ಸಿಂಹಗೆ ಸಿದ್ದರಾಮಯ್ಯ ಪ್ರಶ್ನೆ: http://bit.ly/2jkBCJR
►►ಮುಸ್ಲಿಮ್ ಯುವತಿಯರ ಡ್ಯಾನ್ಸ್‌ಗೆ ಬೆಂಬಲ ನೀಡಿದ ರೇಡಿಯೊ ಜಾಕಿಗೆ ಕೊಲೆ ಬೆದರಿಕೆ: http://bit.ly/2BCuOyc

Related Tags: Siddaramaiah Honnavar Visit, Kannada News, Communal Clashes, Karnataka News, Coastal Karnataka News, Karavali News, Karavali Karnataka, Latest Kannada News, ಕರಾವಳಿ ಸುದ್ದಿ, ಕರಾವಳಿ ಕರ್ನಾಟಕ ಸುದ್ದಿ
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ