ಗುಜರಾತ್ ಚುನಾವಣೆ: ಎಲ್ಲ ಸಮೀಕ್ಷೆಗಳಲ್ಲೂ ಬಿಜೆಪಿಗೆ ಅಧಿಕಾರ

ಕರಾವಳಿ ಕರ್ನಾಟಕ ವರದಿ

ನವದೆಹಲಿ:
ಗುಜರಾತ್ ಚುನಾವಣೆಯ ಮೊದಲ ಹಂತಕ್ಕೆ ಇನ್ನು ಎರಡೇ ದಿನಗಳು ಬಾಕಿ ಇದ್ದು ಕೊನೆಯ ಚುನಾವಣಾ ಸಮೀಕ್ಷೆಗಳು ಗುಜರಾತ್‌ನಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರುತ್ತದೆ ಎಂದು ಬಿಂಬಿಸಿವೆ.

182 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ 105 ಸ್ಥಾನಗಳನ್ನು ಗಳಿಸಬಹುದು ಎಂಬುದು ಈ ಸಮೀಕ್ಷೆಗಳ ಸರಾಸರಿ ಲೆಕ್ಕಚಾರವಾಗಿದೆ. ಅಧಿಕಾರಕ್ಕೆ ಬರಬೇಕಾದರೆ ಮ್ಯಾಜಿಕ್ ಸಂಕ್ಯೆ 92 ಆಗಿದ್ದು ಬಿಜೆಪಿ ಯಾವುದೇ ತೊಂದರೆ ಇಲ್ಲದೆ ಈ ಸಂಖ್ಯೆಯನ್ನು ದಾಟುತ್ತದೆ ಎಂದು ಸಮೀಕ್ಷೆಗಳು ಹೇಳಿವೆ.

ಕಾಂಗ್ರೆಸ್ ಪಕ್ಷ ಈ ಬಾರಿ ತನ್ನ ಸ್ಥಿತಿಯನ್ನು ಗುಜರಾತ್‌ನಲ್ಲಿ ಸುಧಾರಿಸಿಕೊಂಡಿರುವುದು ಪ್ರಚಾರದ ಅಬ್ಬರದಲ್ಲೇ ಕಾಣಸಿಗುತ್ತಿದೆ. ರಾಜ್ಯದಲ್ಲಿ ಪಕ್ಷದ ಬಲವೂ ಹೆಚ್ಚಿದೆ.

ಕಳೆದ ವಿಧಾನಸಭಾ ಚುನಾವಣೆ ಮತ್ತು ಲೋಕಸಭಾ ಚುನಾವಣೆಗಳ ವೇಳೆ ಕಾಂಗ್ರೆಸ್ ಗಳಿಸಿದ ಮತಗಳಿಗಿಂತ ಶೇಕಡಾವಾರು ಮತಗಳಿಕೆ ಪ್ರಮಾಣವೂ ಈ ಬಾರಿ ಹೆಚ್ಚಾಗಲಿದೆ. ಆದರೆ ಮತಗಳಿಕೆಯ ಪ್ರಮಾಣ ಹೆಚ್ಚಳವಾದರೂ ಅದು ಹೆಚ್ಚು ಸ್ಥಾನಗಳನ್ನು ಗಳಿಸುವಲ್ಲಿ ರೂಪಾಂತರವಾಗುವುದೇ ಎಂಬುದು ಅನುಮಾನ.

ಇಂಡಿಯಾ ಟಿವಿ ಸಮೀಕ್ಷೆಯಲ್ಲಿ ಬಿಜೆಪಿಗೆ 106-116, ಕಾಂಗ್ರೆಸ್ 63-73 ಮತ್ತು ಇತರರು 2-4 ಸ್ಥಾನಗಳನ್ನು ಗೆಲ್ಲಬಹುದು ಎಂದು ಹೇಳಲಾಗಿದೆ. ಟೈಮ್ಸ್ ನೌ ಸಮೀಕ್ಷೆ ಬಿಜೆಪಿ 111, ಕಾಂಗ್ರೆಸ್ 68, ಇತರರು 3 ಸ್ಥಾನಗಳನ್ನು ಗೆಲ್ಲುತ್ತಾರೆ ಎಂದಿದೆ.

ಎಬಿಪಿ-ಸಿಎಸ್‌ಡಿಎಸ್ ಸಮೀಕ್ಷೆ ಬಿಜೆಪಿಗೆ 91-99, ಕಾಂಗ್ರೆಸ್ 78-86 ಮತ್ತು ಇತರರು 3-7 ಸ್ಥಾನಗಳಲ್ಲಿ ಯಶಸ್ಸು ಸಿಗಲಿದೆ ಎಂದು ಹೇಳಲಾಗಿದೆ. ಎಬಿಪಿ-ಸಿಎಸ್‌ಡಿಎಸ್ ಸಮೀಕ್ಷೆ ಯ ಪ್ರಕಾರ ರಾಜ್ಯದಲ್ಲಿ  ಕಾಂಗ್ರೆಸ್ ಮತ್ತು ಬಿಜೆಪಿ ಗಳಿಸುವ ಮತಗಳ ಪ್ರಮಾಣ ಸಮಾನವಾಗಿ 43% ಇರಲಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ರಾಜ್ಯದಲ್ಲಿ ವ್ಯಾಪಕ ಪ್ರಚಾರದಲ್ಲಿ ತೊಡಗಿದ್ದಾರೆ. ಅಯೋಧ್ಯೆಯ ರಾಮ ಮಂದಿರ ಸೇರಿದಂತೆ ಹಲವಾರು ವಿಷಯಗಳ ಕುರಿತು ಪರಸ್ಪರ ಆರೋಪ ಪ್ರತ್ಯಾರೋಪಗಳಲ್ಲಿ ಚುನಾವಣಾ ಕಣ ರಂಗೇರಿದೆ,

ಇಂದು ಹೆಚ್ಚು ಓದಿದ ಹೆಚ್ಚು ಸುದ್ದಿಗಳು
►►ಉ.ಕ. ಜಿಲ್ಲೆಗೆ ಸಿಎಂ ಭೇಟಿ ವೇಳೆ ಹೊನ್ನಾವರದಲ್ಲಿ ಕೋಮು ಸಂಘರ್ಷ:
http://bit.ly/2BIdZln
►►ಬಸ್-ಕಂಟೈನರ್ ಮುಖಾಮುಖಿ ಢಿಕ್ಕಿ: ಮಹಿಳೆ ಮೃತ್ಯು: http://bit.ly/2BFlTf6
►►ಪ್ರಚಾರಕ್ಕೆ ಮೋದಿ ಬಂದರೂ ಕರ್ನಾಟಕದಲ್ಲಿ ಬಿಜೆಪಿ ಗೆಲ್ಲಲ್ಲ: ಸಿದ್ದರಾಮಯ್ಯ: http://bit.ly/2ivkmRr
►►ಪತ್ರಕರ್ತ ರವಿ ಬೆಳಗೆರೆಗೆ ಶಿಕ್ಷೆ ಜಾರಿಗೆ ಹೈಕೋರ್ಟ್ ತಡೆ: http://bit.ly/2B4G9L6
►►ರಾಜಕಾರಣದಲ್ಲಿ ಧರ್ಮ ಪರಿಪಾಲನೆ ಆಗಬೇಕು. ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡಬಾರದು: ಸಿದ್ದರಾಮಯ್ಯ: http://bit.ly/2nzI9VC
►►ನೌಕಾಪಡೆ ಅಧಿಕಾರಿಗಳಿಗೆ ಅಗೌರವ ತೋರಿದರೆ ರಕ್ಷಣಾ ಮಂತ್ರಿ?: http://bit.ly/2jj8inh
►►ಬಿಜೆಪಿ ಚುನಾವಣಾ ಪ್ರಚಾರ ರಾಜ್ಯದಲ್ಲಿ ಕೋಮುಸಾಮರಸ್ಯ ಕದಡದಿರಲಿ: ಸಿದ್ಧರಾಮಯ್ಯ: http://bit.ly/2BCCiB4
►►ಸಿ.ಎಸ್. ದ್ವಾರಕನಾಥ್ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ದೂರು ದಾಖಲು: http://bit.ly/2AzTJTy
►►ಕೆಂಪಯ್ಯ ಸಲಹೆ ನೀಡಿದರೆ ತಪ್ಪೇನು? ಪ್ರತಾಪ ಸಿಂಹಗೆ ಸಿದ್ದರಾಮಯ್ಯ ಪ್ರಶ್ನೆ: http://bit.ly/2jkBCJR
►►ಮುಸ್ಲಿಮ್ ಯುವತಿಯರ ಡ್ಯಾನ್ಸ್‌ಗೆ ಬೆಂಬಲ ನೀಡಿದ ರೇಡಿಯೊ ಜಾಕಿಗೆ ಕೊಲೆ ಬೆದರಿಕೆ: http://bit.ly/2BCuOyc

Related Tags: Gujarat Elections, BJP Victory, Opinion Polls
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ