ಉತ್ತರ ಪ್ರದೇಶ: ಠೇವಣಿ ಕಳೆದುಕೊಂಡಿದ್ದಾರೆ 50 ಶೇಕಡಾ ಬಿಜೆಪಿ ಅಭ್ಯರ್ಥಿಗಳು
ಉತ್ತರ ಪ್ರದೇಶದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ್ದೇವೆ ಎಂದು ಬೀಗುತ್ತಿರುವ ಬಿಜೆಪಿ ರಾಜ್ಯದ ಅರ್ಧಕ್ಕರ್ಧ ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡಿದೆ

ಕರಾವಳಿ ಕರ್ನಾಟಕ ವರದಿ

ಲಕ್ನೊ:
ಉತ್ತರ ಪ್ರದೇಶದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ್ದೇವೆ ಎಂದು ಬೀಗುತ್ತಿರುವ ಬಿಜೆಪಿ ರಾಜ್ಯದ ಅರ್ಧಕ್ಕರ್ಧ ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡಿದೆ ಎಂಬ ಮಾಹಿತಿ ಇದೀಗ ಬಹಿರಂಗಗೊಂಡಿದೆ. ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ 50 ಶೇಕಡಾ ಬಿಜೆಪಿ ಅಭ್ಯರ್ಥಿಗಳು ಹೀನಾಯವಾಗಿ ಸೋತಿದ್ದು ಡೆಪಾಸಿಟ್ ಉಳಿಸಿಕೊಳ್ಳಲೂ ವಿಫಲರಾಗಿದ್ದಾರೆ.

ಬಿಜೆಪಿ ರಾಜ್ಯದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಒಟ್ಟು 2,366 ಕ್ಷೇತ್ರಗಳಲ್ಲಿ ವಿಜಯ ಸಾಧಿಸಿದೆ. ಆದರೆ ಅದೇ ಸಂದರ್ಭದಲ್ಲಿ ಬಿಜೆಪಿಯ 3,656 ಅಭ್ಯರ್ಥಿಗಳು ಠೇವಣಿಯನ್ನೂ ಉಳಿಸಿಕೊಳ್ಳಲಾಗದಷ್ಟು ಹೀನಾಯವಾಗಿ ಸೋತಿದ್ದಾರೆ. ರಾಜ್ಯದಲ್ಲಿ ಅತ್ಯಂತ ಹೆಚ್ಚು ಅಭ್ಯರ್ಥಿಗಳನ್ನು ಬಿಜೆಪಿ ಕಣಕ್ಕಿಳಿಸಿತ್ತು. ಒಟ್ಟು 12,644 ಸ್ಥಾನಗಳ ಪೈಕಿ 8,038 ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಕಣಕ್ಕೆ ಇಳಿದಿದ್ದರು.

ಉತ್ತರ ಪ್ರದೇಶದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ವಿರೋಧ ಪಕ್ಷಗಳನ್ನು ಧೂಳೀಪಟಗೊಳಿಸಿ ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದ ಬಿಜೆಪಿಗೆ ಈ ಚುನಾವಣಾ ಪಲಿತಾಂಶ ಶಾಕ್ ನೀಡಿದೆ.

ನಗರಪಾಲಿಕೆಗಳ ಪೈಕಿ 16ರಲ್ಲಿ 14 ಪಾಲಿಕೆಗಳನ್ನು ಗೆದ್ದು ಖುಷಿಯಲ್ಲಿದ್ದ ಬಿಜೆಪಿ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ತೀರಾ ಹಿನ್ನಡೆ ಕಂಡಿತ್ತು. ಬಿಜೆಪಿ ನಗರ ಪಂಚಾಯತ್ ಮತ್ತು ನಗರ ಪರಿಷತ್‌ಗಳಲ್ಲಿ ತೀರಾ ಕುಸಿತ ಕಂಡಿತ್ತು.

ಸರಳ ಲೆಕ್ಕಾಚಾರ ನೋಡಿದರೆ ಬಿಜೆಪಿ ಈ ಚುನಾವಣೆಯಲ್ಲಿ ತೀರಾ ಕಳಪೆ ಸಾಧನೆ ಮಾಡಿದೆ. ನಗರ ಪಾಲಿಕೆ, ನಗರ ಪರಿಷದ್ ಮತ್ತು ನಗರ ಪಂಚಾಯತ್ ಸೇರಿಸಿ ಒಟ್ಟು 12,644 ಸ್ಥಾನಗಳ ಪೈಕಿ ಬಿಜೆಪಿ ಕೇವಲ 2366 ಸ್ಥಾನಗಳಲ್ಲಿ ವಿಜಯ ಸಾಧಿಸಿದೆ. ಇತರ 10,278 ಸ್ಥಾನಗಳಲ್ಲಿ ಬಿಜೆಪಿಯೇತರ ಪಕ್ಷಗಳು ಮತ್ತು ಪಕ್ಷೇತರ ಅಭ್ಯರ್ಥಿಗಳು ಗೆದ್ದಿದ್ದಾರೆ.  ಅರ್ಥಾತ್ ಬಿಜೆಪಿ ಕೇವಲ 18 ಶೇಕಡಾ ಸ್ಥಾನಗಳಲ್ಲಿ ಮಾತ್ರ ವಿಜಯ ಸಾಧಿಸಲು ಸಾಧ್ಯವಾಗಿದೆ.ಇದನ್ನೂ ಓದಿ:
►►ಉತ್ತರ ಪ್ರದೇಶದಲ್ಲಿ ಬಿಜೆಪಿ ನಿಜಕ್ಕೂ ಜಯಭೇರಿ ಬಾರಿಸಿದೆಯೆ? ಇಲ್ಲಿದೆ ನೈಜ ಚಿತ್ರಣ: http://bit.ly/2ApQMVJ

ಇಂದು ಹೆಚ್ಚು ಓದಿದ ಹೆಚ್ಚು ಸುದ್ದಿಗಳು
►►ಬಾಬರಿ ಮಸೀದಿ ಬೀಳುವಾಗ ಸಂಭ್ರಮಿಸಿದ್ದಕ್ಕೆ ಒಬ್ಬನಿಗೆ ಕಪಾಳಕ್ಕೆ ಹೊಡೆದಿದ್ದೆ: ಪೇಜಾವರ ಸ್ವಾಮಿ:
http://bit.ly/2nzXq8Z
►►ಗುಜರಾತ್ ಚುನಾವಣೆ: ಎಲ್ಲ ಸಮೀಕ್ಷೆಗಳಲ್ಲೂ ಬಿಜೆಪಿಗೆ ಅಧಿಕಾರ: http://bit.ly/2k4f5kn
►►ಉ.ಕ. ಜಿಲ್ಲೆಗೆ ಸಿಎಂ ಭೇಟಿ ವೇಳೆ ಹೊನ್ನಾವರದಲ್ಲಿ ಕೋಮು ಸಂಘರ್ಷ: http://bit.ly/2BIdZln
►►ಬಸ್-ಕಂಟೈನರ್ ಮುಖಾಮುಖಿ ಢಿಕ್ಕಿ: ಮಹಿಳೆ ಮೃತ್ಯು: http://bit.ly/2BFlTf6
►►ಪ್ರಚಾರಕ್ಕೆ ಮೋದಿ ಬಂದರೂ ಕರ್ನಾಟಕದಲ್ಲಿ ಬಿಜೆಪಿ ಗೆಲ್ಲಲ್ಲ: ಸಿದ್ದರಾಮಯ್ಯ: http://bit.ly/2ivkmRr
►►ಪತ್ರಕರ್ತ ರವಿ ಬೆಳಗೆರೆಗೆ ಶಿಕ್ಷೆ ಜಾರಿಗೆ ಹೈಕೋರ್ಟ್ ತಡೆ: http://bit.ly/2B4G9L6
►►ರಾಜಕಾರಣದಲ್ಲಿ ಧರ್ಮ ಪರಿಪಾಲನೆ ಆಗಬೇಕು. ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡಬಾರದು: ಸಿದ್ದರಾಮಯ್ಯ: http://bit.ly/2nzI9VC
►►ನೌಕಾಪಡೆ ಅಧಿಕಾರಿಗಳಿಗೆ ಅಗೌರವ ತೋರಿದರೆ ರಕ್ಷಣಾ ಮಂತ್ರಿ?: http://bit.ly/2jj8inh
►►ಬಿಜೆಪಿ ಚುನಾವಣಾ ಪ್ರಚಾರ ರಾಜ್ಯದಲ್ಲಿ ಕೋಮುಸಾಮರಸ್ಯ ಕದಡದಿರಲಿ: ಸಿದ್ಧರಾಮಯ್ಯ: http://bit.ly/2BCCiB4

Related Tags: Uttara Pradesh Local Body Elections, BJP, Vote, Kannada News, Karavalikarnataka News
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ