ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌: ಎರಡನೇ ಸ್ಥಾನಕ್ಕೆ ಜಿಗಿದ ಕ್ಯಾಪ್ಟನ್ ಕೊಹ್ಲಿ

ಕರಾವಳಿ ಕರ್ನಾಟಕ ವರದಿ

ದುಬೈ:
ಐಸಿಸಿ ಬಿಡುಗಡೆ ಮಾಡಿದ ನೂತನ ಟೆಸ್ಟ್ ಬ್ಯಾಟಿಂಗ್ ರ‍್ಯಾಂಕಿಂಗ್‌ನಲ್ಲಿ ಲಂಕಾ ಸರಣಿಯಲ್ಲಿ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಎರಡನೇ ಸ್ಥಾನಕ್ಕೆ ಭಡ್ತಿ ಪಡೆದಿದ್ದಾರೆ.

ಲಂಕಾ ವಿರುದ್ಧದ 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಒಟ್ಟು 610 ರನ್ ಕಲೆಹಾಕಿದ್ದ ಕೊಹ್ಲಿ ಇದೀಗ ಡೇವಿಡ್ ವಾರ್ನರ್ ಹಾಗೂ ಕೇನ್ ವಿಲಿಯಮ್ಸನ್ ಅವರನ್ನು ಹಿಂದಿಕ್ಕಿ 2ನೇ ಸ್ಥಾನಕ್ಕೇರಿದ್ದು, ನಂ.1 ಸ್ಥಾನದಲ್ಲಿ ಆಸೀಸ್ ನಾಯಕ ಸ್ಟೀವ್ ಸ್ಮಿತ್ ಭದ್ರವಾಗಿದ್ದಾರೆ.

ಇನ್ನು ಬೌಲರ್‌ಗಳ ಪಟ್ಟಿಯಲ್ಲಿ ರವೀಂದ್ರ ಜಡೇಜಾ 3ನೇ ಸ್ಥಾನಕ್ಕೆ ಕುಸಿದಿದ್ದರೆ, ಅಶ್ವಿನ್ 4ನೇ ಸ್ಥಾನದಲ್ಲಿದ್ದಾರೆ. ಹಾಗೆಯೇ ಆಲ್‌ರೌಂಡರ್ ಪಟ್ಟಿಯಲ್ಲಿ ಜಡೇಜಾ 2ನೇ ಸ್ಥಾನದಲ್ಲೇ ಭದ್ರವಾಗಿದ್ದರೆ, ಒಂದು ಸ್ಥಾನ ಕುಸಿದಿರುವ ಅಶ್ವಿನ್ 4ನೇ ಸ್ಥಾನದಲ್ಲಿದ್ದಾರೆ.

ಈಗಾಗಲೇ ಟಿ20 ಹಾಗೂ ಏಕದಿನ ಕ್ರಿಕೆಟ್‌ನಲ್ಲಿ ನಂ.1 ಸ್ಥಾನದಲ್ಲಿರುವ ಕೊಹ್ಲಿ, ಮುಂದಿನ ವರ್ಷ ಮೂರೂ ಮಾದರಿಯ ಕ್ರಿಕೆಟ್‌ನಲ್ಲಿ ನಂ.1 ಸ್ಥಾನಕ್ಕೇರುವ ಅವಕಾಶವಿದೆ. 2005-06ರಲ್ಲಿ ರಿಕಿ ಪಾಂಟಿಂಗ್ ಮೂರು ಮಾದರಿಯಲ್ಲಿಯೂ ನಂ.1 ಸ್ಥಾನಕ್ಕೇರಿದ ಏಕೈಕ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.
ಇಂದು ಹೆಚ್ಚು ಓದಿದ ಹೆಚ್ಚು ಸುದ್ದಿಗಳು
►►ಬಸ್-ಟ್ರ್ಯಾಕ್ಟರ್ ಢಿಕ್ಕಿ: ಓರ್ವನಿಗೆ ಗಾಯ:
http://bit.ly/2B0lhnU
►►ಗಣೇಶಪೇಟೆ ಪಾಕಿಸ್ತಾನಕ್ಕೆ ಹೋಲಿಕೆ: ಮೌಲ್ವಿ ಬಂಧನ: http://bit.ly/2ksEUhR
►►ಉತ್ತರ ಪ್ರದೇಶ: ಠೇವಣಿ ಕಳೆದುಕೊಂಡಿದ್ದಾರೆ 50 ಶೇಕಡಾ ಬಿಜೆಪಿ ಅಭ್ಯರ್ಥಿಗಳು: http://bit.ly/2k3o7he
►►ಬಾಬರಿ ಮಸೀದಿ ಬೀಳುವಾಗ ಸಂಭ್ರಮಿಸಿದ್ದಕ್ಕೆ ಒಬ್ಬನಿಗೆ ಕಪಾಳಕ್ಕೆ ಹೊಡೆದಿದ್ದೆ: ಪೇಜಾವರ ಸ್ವಾಮಿ: http://bit.ly/2nzXq8Z
►►ಗುಜರಾತ್ ಚುನಾವಣೆ: ಎಲ್ಲ ಸಮೀಕ್ಷೆಗಳಲ್ಲೂ ಬಿಜೆಪಿಗೆ ಅಧಿಕಾರ: http://bit.ly/2k4f5kn
►►ಉ.ಕ. ಜಿಲ್ಲೆಗೆ ಸಿಎಂ ಭೇಟಿ ವೇಳೆ ಹೊನ್ನಾವರದಲ್ಲಿ ಕೋಮು ಸಂಘರ್ಷ: http://bit.ly/2BIdZln
►►ಬಸ್-ಕಂಟೈನರ್ ಮುಖಾಮುಖಿ ಢಿಕ್ಕಿ: ಮಹಿಳೆ ಮೃತ್ಯು: http://bit.ly/2BFlTf6
►►ಪ್ರಚಾರಕ್ಕೆ ಮೋದಿ ಬಂದರೂ ಕರ್ನಾಟಕದಲ್ಲಿ ಬಿಜೆಪಿ ಗೆಲ್ಲಲ್ಲ: ಸಿದ್ದರಾಮಯ್ಯ: http://bit.ly/2ivkmRr

Related Tags: Virat Kohli, Second in ICC Test Rankings, Sports News, Cricket News, Kannada News, Karavalikarnataka News
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ