ಶಿರಸಿ ಗಲಭೆಕೋರರಿಗೆ ಜಾಮೀನು: ಸಾಕಾ ಬೇಕಾ ತಪರಾಕಿ ಸಿದ್ದರಾಮಯ್ಯನವರೇ ಎಂದ ಸಚಿವ ಹೆಗಡೆ

ಕರಾವಳಿ ಕರ್ನಾಟಕ ವರದಿ

ಬೆಂಗಳೂರು:
ಪರೇಶ್‌ ಮೇಸ್ತ ಕೊಲೆ ಪ್ರಕರಣದ ಬಳಿಕ ಉ.ಕ ಜಿಲ್ಲೆಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ ಧಾರವಾಡ ಕಾರಾಗೃಹಕ್ಕೆ ಕಳುಹಿಸಲಾಗಿದ್ದ 62 ಜನರಿಗೆ ಕೋರ್ಟ್ ಮಧ್ಯಾಂತರ ಜಾಮೀನು ನೀಡಿದ ಬೆನ್ನಲ್ಲೇ ಕೇಂದ್ರ ಸಚಿವ ಅನಂತ್‌ ಕುಮಾರ್‌ ಹೆಗಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಈ ಕುರಿತು ಫೇಸ್‌ಬುಕ್‌ ಪೋಸ್ಟ್‌ನಲ್ಲಿ ಆಕ್ರೋಶ ಹೊರಗೆಡವಿದ ಸಚಿವ ಹೆಗಡೆ, ಸಾಕಾ ಬೇಕಾ ತಪರಾಕಿ ಸಿದ್ದರಾಮಯ್ಯನವರೇ!! ನಿಂಬಾಳ್ಕರ್, ರಾಮ ಲಿಂಗಾರೆಡ್ಡಿ ಹಾಗೂ ಕೆಂಪಯ್ಯನಂತಹ ಜನರಿದ್ದರೆ ಮುಂದಿದೆ ನೋಡಿ ಇನ್ನು ದೊಡ್ಡ ಶಿರಸಿಯ ಮಾರಿಕಾಂಬಾ ಹಬ್ಬ! ಎಂದು ಬರೆದುಕೊಂಡಿದ್ದಾರೆ.

ಸಚಿವ ಅನಂತ ಹೆಗಡೆ ಪೋಸ್ಟ್‌ನಲ್ಲೇನಿದೆ?
"ಸಾಕಾ ಬೇಕಾ ತಪರಾಕಿ ಸಿದ್ದರಾಮಯ್ಯನವರೇ!! ನಿಂಬಾಳ್ಕರ್, ರಾಮ ಲಿಂಗಾರೆಡ್ಡಿ ಹಾಗೂ ಕೆಂಪಯ್ಯನಂತಹ ಜನರಿದ್ದರೆ ಮುಂದಿದೆ ನೋಡಿ ಇನ್ನು ದೊಡ್ಡ ಶಿರಸಿಯ ಮಾರಿಕಾಂಬಾ ಹಬ್ಬ! ಶಿರಸಿಯಲ್ಲಿ ಮೊನ್ನೆಯ ದಿನ ಪೊಲೀಸ್ ಪ್ರೇರಿತ ಗಲಭೆಯಲ್ಲಿ ಬಂಧಿತರಾಗಿದ್ದ 62 ಮಂದಿ ಮುಗ್ಧರನ್ನು ಶಿರಸಿ ನ್ಯಾಯಾಲಯ ಇಂದು ಜಾಮೀನು ಪಡೆದು ಬಿಡುಗಡೆಗೆ ಆದೇಶಿಸಿದೆ.

ಕೇವಲ ಒಂದೂವರೆ ದಿನದಲ್ಲಿ ಬಿಡುಗಡೆ ಆದೇಶ ಪಡೆದ ಕ್ರಮವು ಐತಿಹಾಸಿಕವಾಗಿದ್ದು, ಈ ತೀರ್ಪು ಪೊಲೀಸ್ ಸಮವಸ್ತ್ರದಲ್ಲಿ ದಾದಾಗಿರಿ ಮಾಡಲು ಹೊರಟಿದ್ದ ನಿಂಬಾಳ್ಕರ್ ಎಂಬ ಹುಂಬ ಅಧಿಕಾರಿಗೆ ತೀವ್ರವಾದ ಕಪಾಳ ಮೋಕ್ಷವಾಗಿದೆ.

ಸೆಕ್ಷನ್ 307  ಅನ್ನು ಮನಬಂದಂತೆ ಜರುಗಿಸಿ ವಿಕೃತ ಪಭುತ್ವ ಸಾಧಿಸಲು ಹೊರಟರೆ, ಈ ದೇಶದ ಕಾನೂನು ಸುಮ್ಮನೆ ಕೂರುವುದಿಲ್ಲ ಎಂದು ಇಂದಿನ ನ್ಯಾಯಾಲಯದ ತೀರ್ಮಾನ ಸ್ಪಷ್ಟವಾಗಿ ತಿಳಿಸಿದೆ.

ಇದು ಪ್ರಜಾಪ್ರಭುತ್ವದ ವಿಜಯ!: ಸಿದ್ಧರಾಮಯ್ಯನವರೇ ನಿಮ್ಮ ಮುಖವನ್ನು ಮತ್ತೊಮ್ಮೆ ಕನ್ನಡಿ ಮುಂದೆ ನೋಡಿಕೊಳ್ಳಿ! ನಿಮ್ಮ ಒಡ್ಡೋಲಗದ ಸಹೋದ್ಯೋಗಿಗಳು ಸಹ ನಿಮ್ಮನ್ನು ನಡು ನೀರಿನಲ್ಲಿ ಕೈ ಬಿಟ್ಟು ಹೋಗುವ ದಿನ ದೂರವಿಲ್ಲ.

ವಿದ್ರೋಹಿಗಳ ಬೆಂಬಲಕ್ಕೆ ನಿಂತು ದೇಶಭಕ್ತರನ್ನು ಸದೆಬಡಿಯುವ ನಿಮ್ಮ ಯೋಜನೆಗೆ, ನಿಮ್ಮ ಅಮೂಲ್ಯ ಸಲಹೆಗಾರ ನಾಗಲಿ ಅಥವಾ ನಾಲಾಯಕ್ ಗೃಹ ಮಂತ್ರಿಯಾಗಲಿ ಇನ್ನೇನು ತಾನೇ ಕಿಸಿಯಲು ಸಾಧ್ಯ? ನಮ್ಮ ಹೋರಾ ಟಕ್ಕೆ ಇಂದಿನ ಈ ತೀರ್ಪು ಬಹು ದೊಡ್ಡ ನೈತಿಕ ಬೆಂಬಲ ನೀಡಿ ಹೋರಾಟದ ಕಿಚ್ಚನ್ನು ಇನ್ನಷ್ಟು ಹೆಚ್ಚಿಸಿದೆ.

ಬರುವ ದಿನಗಳಲ್ಲಿ ಹೋರಾಟ ತೀವ್ರಗೊಳ್ಳಲಿದ್ದು ಕೋಮುವಾದಿ, ಜಾತಿ ವಾದಿ ಹುಂಬ ಸರ್ಕಾರವಲ್ಲದೆ, ದೇಶದೊಳಗೆ ಇರುವ ವಿದ್ರೋಹಿಗಳಿಗೆ ಸಹ ನಮ್ಮ ಸಂಘಟಿತ ರುಚಿ ತೋರಿಸಲಿದ್ದೇವೆ. ಹುಂಬ ಧೈರ್ಯವಿದ್ದರೆ ಎದುರಿಸಲಿ! ನ್ಯಾಯಾಲಯದಲ್ಲಿ ನಮ್ಮ ದೇಶಭಕ್ತರ ಪರವಾಗಿ ವಾದಿಸಿ ನ್ಯಾಯ ದೊರೆಕಿಸಿಕೊಟ್ಟ ಅಷ್ಟು ವಕೀಲ- ವೃಂದದವರಿಗೆ ನನ್ನ ಬಹುದೊಡ್ಡ ಧನ್ಯವಾದಗಳು" ಎಂದು ಅನಂತ್ ಕುಮಾರ್ ಹೆಗಡೆ ಬರೆದುಕೊಂಡಿದ್ದಾರೆ.

ಇದನ್ನೂ ಓದಿ:
►►ಉತ್ತರ ಕನ್ನಡ ಗಲಭೆ: ಸೋಷಿಯಲ್ ಮೀಡಿಯಾ ಮೇಲೆ ನಿಗಾ. 106 ಪ್ರಕರಣ ದಾಖಲು:
http://bit.ly/2AH3CSY
►►ಹೊನ್ನಾವರ ಗ್ರಾಮಾಂತರದಲ್ಲಿ ಶಾಲಾ ಬಾಲಕಿಗೆ ಚೂರಿ ಇರಿತ: http://bit.ly/2jTTyeV
►►ಪರೇಶ್ ಮೇಸ್ತ ಸಾವು: ಸಂಘಪರಿವಾರದ ಡೆಡ್ ಬಾಡಿ ಪಾಲಿಟಿಕ್ಸ್‌ನ ಮುಂದುವರಿದ ಭಾಗ: http://bit.ly/2nTaUNe
►►ಪರೇಶ್ ಸಾವಿನ ತನಿಖೆ ಸಿಬಿಐಗೆ. ರಾಜ್ಯ ಸರ್ಕಾರದಿಂದ ಸಿಬಿಐಗೆ ಪತ್ರ: http://bit.ly/2ksAeEP
►►ಪರೇಶ್ ಮೇಸ್ತ ಸಾವು: ಉ.ಕ ಜಿಲ್ಲೆಯಾದ್ಯಂತ ಪ್ರತಿಭಟನೆ. ಐಜಿಪಿ ವಾಹನಕ್ಕೆ ಬೆಂಕಿ: http://bit.ly/2B5rrmo
►►ಪರೇಶ್ ಮೇಸ್ತ ಸಾವು: ಶಿರಸಿಯಲ್ಲಿ ಪ್ರತಿಭಟನೆ ವೇಳೆ ಹಿಂಸಾಚಾರ: http://bit.ly/2BEeqkv
►►ಪರೇಶ್ ಮೇಸ್ತ ಸಾವು: ಸಿಎಂ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ: http://bit.ly/2BNSKyA
►►ಪರೇಶ್ ಹತ್ಯೆ ಮುಚ್ಚಿ ಹಾಕಲು ಕಾಂಗ್ರೆಸ್ ಸರ್ಕಾರ ಯತ್ನ: ಹೆಗಡೆ: http://bit.ly/2AfXqNn
►►ಉತ್ತರ ಕನ್ನಡ: ಪ್ರಜ್ಞಾವಂತರ ಜಿಲ್ಲೆ ಪ್ರಜ್ಞೆ ತಪ್ಪುತ್ತಿದೆಯೇ? ಪ್ರಜ್ಞೆ ತಪ್ಪಿಸಲಾಗುತ್ತಿದೆಯೇ: http://bit.ly/2iVvqay
►►ಕೋಮು ಸಂಘರ್ಷದ ಬಳಿಕ ಕಾಣೆಯಾಗಿದ್ದ ಯುವಕನ ಶವ ಪತ್ತೆ. ಸ್ಥಳದಲ್ಲಿ ಉದ್ವಿಗ್ನತೆ: http://bit.ly/2BiWCLN
►►ಉ.ಕ. ಜಿಲ್ಲೆಗೆ ಸಿಎಂ ಭೇಟಿ ವೇಳೆ ಹೊನ್ನಾವರದಲ್ಲಿ ಕೋಮು ಸಂಘರ್ಷ: http://bit.ly/2BIdZln
►►ನಾಪತ್ತೆಯಾದ ಅಬ್ದುಲ್ ಗಫೂರ್ ಪತ್ತೆ: ನೆರವಿಗೆ ಬಂದ ಬ್ರಾಹ್ಮಣ ಕುಟುಂಬ: http://bit.ly/2Bk4VXa

ಇಂದು ಹೆಚ್ಚು ಓದಿದ ಹೆಚ್ಚು ಸುದ್ದಿಗಳು
►►ಅಪಘಾತದಲ್ಲಿ ಮಿದುಳು ನಿಷ್ಕ್ರಿಯ: ಅಂಗಾಂಗ ದಾನದ ಮೂಲಕ ಐದು ಜೀವಗಳಿಗೆ ಜೀವಕೊಟ್ಟ 'ಕಸ್ತೂರಿ':
http://bit.ly/2ArqelT
►►ಲಾರಿ-ರಿಕ್ಷಾ ನಡುವೆ ಮುಖಾಮುಖಿ ಢಿಕ್ಕಿ: ಪ್ರಯಾಣಿಕ ಸಾವು, ಚಾಲಕ ಗಂಭೀರ: http://bit.ly/2j43Vvz
►►ಉತ್ತರ ಕನ್ನಡ ಗಲಭೆ: ಸೋಷಿಯಲ್ ಮೀಡಿಯಾ ಮೇಲೆ ನಿಗಾ. 106 ಪ್ರಕರಣ ದಾಖಲು: http://bit.ly/2AH3CSY
►►ಶರತ್ ಮಡಿವಾಳ ಮತ್ತು ಅಶ್ರಫ್ ಕುಟುಂಬಕ್ಕೆ ರಾಜ್ಯ ಸರ್ಕಾರದ 5 ಲಕ್ಷ ಪರಿಹಾರ: http://bit.ly/2j0CYZJ
►►ಹೊನ್ನಾವರ ಗ್ರಾಮಾಂತರದಲ್ಲಿ ಶಾಲಾ ಬಾಲಕಿಗೆ ಚೂರಿ ಇರಿತ: http://bit.ly/2jTTyeV
►►ನೀವು ಫಡ್ನವೀಸಾ ಅಥವಾ ಫೆರ್ನಾಂಡಿಸಾ? ಕ್ರಿಸ್‌ಮಸ್ ಕೂಟದಲ್ಲಿ ಪಾಲ್ಗೊಂಡ ಸಿಎಂ ಪತ್ನಿಗೆ ಪ್ರಶ್ನೆ: http://bit.ly/2j1HffB
►►ಮಂಗಳೂರು: ಹಿಂದೂ ಯುವತಿಯೊಂದಿಗಿದ್ದ ಯುವಕನಿಗೆ ಹಲ್ಲೆ: http://bit.ly/2C4CMQC
►►ಕತ್ತು ಕೊಯ್ದು ನಿವೃತ್ತ ಶಿಕ್ಷಕಿಯ ಕೊಲೆ: http://bit.ly/2iZXeKW
►►ಪರೇಶ್ ಸಾವಿನ ತನಿಖೆ ಸಿಬಿಐಗೆ. ರಾಜ್ಯ ಸರ್ಕಾರದಿಂದ ಸಿಬಿಐಗೆ ಪತ್ರ: http://bit.ly/2ksAeEP

Related Tags: Paresh Mesta Death, Sirsi Communal Clash, Accused Released, Sirsi Court, Bail, Siddaramiah, Anant Kumar Hegde
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ