ಕೇಂದ್ರದ ಅನುದಾನ ಕಾಂಗ್ರೆಸ್ ದುರುಪಯೋಗ ಮಾಡಿಕೊಂಡಿದೆ: ಅಮಿತ್ ಷಾ ಆರೋಪ

ಕರಾವಳಿ ಕರ್ನಾಟಕ ವರದಿ

ಹೊಳಲ್ಕೆರೆ:
ರಾಜ್ಯದ ವಿವಿಧ ಯೋಜನೆಗಳಿಗಾಗಿ ಕೇಂದ್ರ ಸರ್ಕಾರ ಒಟ್ಟು 2.19 ಲಕ್ಷ ಕೋಟಿ ನೀಡಿದೆ. ಕೇಂದ್ರದ ಮೋದಿ ಸರ್ಕಾರ ನೀಡಿರುವ ಅನುದಾನವನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ದುರುಪಯೋಗ ಮಾಡಿಕೊಂಡಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆರೋಪಿಸಿದ್ದಾರೆ. ಬುಧವಾರ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಅವರು ಮಾತನಾಡಿದರು 

ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರದ ಲೆಕ್ಕ ಕೇಳುತ್ತಾರೆ. ನಾನಿಂದು ಬಂದಿರುವುದು ಅದೇ ಲೆಕ್ಕ ಹೇಳಲು ಎಂದ ಅಮಿತ್ ಶಾ, ಕೇಂದ್ರದಿಂದ ರಾಜ್ಯಕ್ಕೆ ನೀಡಲಾಗಿರುವ ಎಲ್ಲಾ ಅನುದಾನಗಳ ಲೆಕ್ಕ ಒಪ್ಪಿಸಿದರು.

ಸಿದ್ದರಾಮಯ್ಯ ಅವರು ಕೇಂದ್ರದಿಂದ ಬಂದ ಅನುದಾನವನ್ನು ತಮ್ಮದೇ ಅನುದಾನ ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಉಜ್ವಲ ಗ್ಯಾಸ್ ಯೋಜನೆ, ಮುದ್ರಾ ಯೋಜನೆ, ಸ್ವಚ್ಛ ಭಾರತ ಅಭಿಯಾನ ಮೊದಲಾದ ಯೋಜನೆಗಳಿಗೆ ಕೇಂದ್ರ ಸರ್ಕಾರ ಕೊಟ್ಟ ಹಣದ ಬಹುಪಾಲನ್ನು ಕಾಂಗ್ರೆಸಿಗರು ನುಂಗಿದ್ದಾರೆ ಎಂದು ಅವರು ಇದೇ ಸಂದರ್ಭದಲ್ಲಿ ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಅವರ ವಾಚ್ ಹಗರಣದ ನೆನಪು ಮಾಡಿದ ಅಮಿತ್ ಶಾ ಅವರು, ಸಿದ್ದರಾಮಯ್ಯ ಅವರಿಗೆ 70 ಲಕ್ಷ ರೂಪಾಯಿಯ ವಾಚ್ ಉಡುಗೊರೆಯಾಗಿ ಬರುತ್ತದೆ. ಉದ್ಯಮಿಗಳಿಗೆ ಅನುಕೂಲ ಮಾಡಿಕೊಟ್ಟಿರುವ ಕಾರಣದಿಂದಲೇ ಅವರಿಗೆ ಈ ರೀತಿಯ ಭಾರಿ ಬೆಲೆಯ ಉಡುಗೊರೆಗಳು ಸಿಗುತ್ತವೆ ಎಂದು ಶಾ ಲೇವಡಿ ಮಾಡಿದರು.

ಅಮಿತ್ ಷಾ ಮಾಡಿದ ಹಿಂದಿ ಭಾಷಣವನ್ನು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಕನ್ನಡಕ್ಕೆ ಅನುವಾದಿಸಿ ಓದಿದರು.

ಇಂದು ಹೆಚ್ಚು ಓದಿದ ಸುದ್ದಿ
►►ಆರ್‌ಎಸ್‌ಎಸ್, ಬಜರಂಗದಳದವರು ಉಗ್ರಗಾಮಿಗಳು: ಮುಖ್ಯಮಂತ್ರಿ ಸಿದ್ದರಾಮಯ್ಯ:
http://bit.ly/2qQr0bS
►►ಮೂರು ದಿನಗಳ ಕಾಲ ಚಳಿಯಲ್ಲಿ ಬಳಲಿದ ಯುವಕ: ನೆರವಾಯಿತು ‘ನಾಗರಿಕ ವೇದಿಕೆ’: http://bit.ly/2ALkL8W
►►ಹೆಣ ಬಿದ್ದರೆ ರಣಹದ್ದುಗಳಂತೆ ಎಗರಾಡುವ ಬಿಜೆಪಿ: ಫೇಸ್‌ಬುಕ್‌ನಲ್ಲಿ ಅನುಪಮಾ ಶೆಣೈ: http://bit.ly/2CMWJw2
►►ಮುಸ್ಲಿಮರ ಜೊತೆ ಮಾತನಾಡಿದ್ದಕ್ಕೆ ಆಕ್ಷೇಪ: ದಲಿತ ಮಹಿಳೆಯ ಮನೆಗೆ ನುಗ್ಗಿದ ಬಜರಂಗಿಗಳ ಬಂಧನ: http://bit.ly/2CLc2FK
►►ಸರ್ಕಾರಿ ಜಾಗದಲ್ಲಿದ್ದ ಭೂ ಹೀನರ ಮನೆ ತೆರವು. ಹಲವರ ಬಂಧನ. ಸ್ಥಳದಲ್ಲಿ ಉದ್ವಿಗ್ನತೆ: http://bit.ly/2AM2iJA
►►ಹಿಂಜಾವೇ ನಾಯಕನ ಮೇಲೆ ಹಲ್ಲೆಯ ಕಟ್ಟುಕತೆ ಬಯಲು ಮಾಡಿದ ಪೊಲೀಸರು: http://bit.ly/2AJPfYV
►►ವಿದ್ಯಾರ್ಥಿನಿಯ ಫೋಟೊ ಬಳಸಿ ಮಾನಹಾನಿ, ಬೆದರಿಕೆ: ಪೊಲೀಸರಿಗೆ ದೂರು: http://bit.ly/2mhdSYI
►►ಸಂಘ ಪರಿವಾರದ ಧಮ್ಕಿಗೆ ಆತ್ಮಹತ್ಯೆ: ದೇಶಾದ್ಯಂತ ಸುದ್ದಿಯಾಗುತ್ತಿದೆ ಧನ್ಯಾ ಸಾವು: http://bit.ly/2Eq55KC

Related Tags: Amit Shah, Bjp, Parivarthana Rally, Kannada News, Karavalikarnataka News
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ