ತನ್ನದೇ ಕ್ಷೇತ್ರದ ಧನ್ಯಶ್ರೀ ಸಾವಿಗೆ ಜಾಣ ಮೌನ: ಶೋಭಾ ಕರಂದ್ಲಾಜೆ ವಿರುದ್ಧ ವ್ಯಾಪಕ ಆಕ್ರೋಶ
ತೀರ್ಥಹಳ್ಳಿಯ ನಂದಿತಾ ಪ್ರಕರಣ ಮತ್ತು ಹೊನ್ನಾವರದ ಪರೇಶ್ ಮೇಸ್ತ ಸಾವಿನಲ್ಲಿ ಭಾರೀ ರಾಜಕಾರಣ ಮಾಡಿದ್ದ ಶೋಭಾ ಕರಂದ್ಲಾಜೆ

ಕರಾವಳಿ ಕರ್ನಾಟಕ ವರದಿ

ಚಿಕ್ಕಮಗಳೂರು:
ರಾಜ್ಯದಲ್ಲಿ ಎಲ್ಲಿಯೇ ಕೊಲೆ ಆತ್ಮಹತ್ಯೆಗಳು ಸಂಭವಿಸಿದರೆ ಅದು ಜಿಹಾದಿಗಳು ಮಾಡಿದ್ದು ಎಂದು ಹೋರಾಟಕ್ಕೆ ಇಳಿಯುವ ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಇದೀಗ  ತಮ್ಮದೇ ಕ್ಷೇತ್ರದಲ್ಲಿ ನಡೆದ ಧನ್ಯಶ್ರಿ ಆತ್ಮಹತ್ಯೆ ವಿಷಯದಲ್ಲಿ ಮಾತ್ರ ಮೌನ ವಹಿಸಿದ್ದಾರೆ.

ತನ್ನ ಕ್ಷೇತ್ರವಲ್ಲದಿದ್ದರೂ ಹೊನ್ನಾವರದ ಪರೇಶ್ ಮೇಸ್ತ, ತೀರ್ಥಹಳ್ಳಿಯ ನಂದಿತಾ, ಬೆಂಗಳೂರಿನ ರುದ್ರೇಶ್, ಮಂಗಳೂರಿನ ದೀಪಕ್ ರಾವ್ ಹೀಗೆ ಹತ್ತಾರು ಪ್ರಕರಣಗಳಲ್ಲಿ ತಾನೇ ಸ್ವತಃ ಆಯಾ ಕ್ಷೇತ್ರಗಳಿಗೆ ತೆರಳಿ ಹೋರಾಟದ ನೇತೃತ್ವ ವಹಿಸಿ ಎಲ್ಲವನ್ನೂ ಸಿದ್ದರಾಮಯ್ಯ ಸರ್ಕಾರ ಮಾಡಿದೆ, ಕಾಂಗ್ರೆಸ್ ಮಾಡಿದೆ, ಜಿಹಾದಿಗಳು ಮಾಡಿದ್ದಾರೆ, ಪಿಎಫ್‌ಐ ಮಾಡಿದೆ ಎಂದು ಭಾರೀ ಕೂಗಾಡುವ ಶೋಭಾ ಕರಂದ್ಲಾಜೆ ತನ್ನದೇ ಕ್ಷೇತ್ರದಲ್ಲಿ ಬರುವ ಮೂಡಿಗೆರೆಯ ಕಾಲೇಜು ವಿದ್ಯಾರ್ಥಿನಿ ಬೆದರಿಕೆ ಮತ್ತು ಒತ್ತಡಕ್ಕೆ ಮಣಿದು ಆತ್ಮಹತ್ಯೆ ಮಾಡಿಕೊಂಡಿದ್ದರೂ ಶೋಭಾ ಕರಂದ್ಲಾಜೆ ಕನಿಷ್ಟ ಸೋಷಿಯಲ್ ಮೀಡಿಯಾದಲ್ಲಿ ಕೂಡ ಧನ್ಯಶ್ರೀ ಆತ್ಮಹತ್ಯೆಯ ಕುರಿತು ಮಾತನಾಡಿಲ್ಲ.

ಲವ್ ಜಿಹಾದ್‌ಗೆ ಧನ್ಯಶ್ರೀ ಬಲಿಯಾಗುತ್ತಿದ್ದಾಳೆ, ಮುಸ್ಲಿಮ್ ಹುಡುಗರ ಜೊತೆ ಒಡನಾಟವಿದೆ ಎಂದೆಲ್ಲ ಸೋಷಿಯಲ್ ಮೀಡಿಯಾದಲ್ಲಿ ಅಪಪ್ರಚಾರ ಮಾಡಿದ್ದ ಬಿಜೆಪಿ ಯುವಮೋರ್ಚಾ ಮತ್ತು ಬಜರಂಗದಳ ಸದಸ್ಯರು ಆಕೆಯ ಮನೆಗೂ ಹೋಗಿ ಬೆದರಿಕೆ ಒಡ್ಡಿದ ಬಳಿಕ ಧನ್ಯಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದರು.

ಈಗಾಗಲೇ ಈ ಪ್ರಕರಣದಲ್ಲಿ ಮೂಡಿಗೆರೆ ತಾಲೂಕು ಯುವಮೋರ್ಚಾ ಅಧ್ಯಕ್ಷನನ್ನು ಬಂಧಿಸಲಾಗಿದ್ದು ಇತರ ಆರೋಪಿಗಳ ಪತ್ತೆಗಾಗಿ ಶೋಧಕಾರ್ಯ ನಡೆದಿದೆ. ಧನ್ಯಶ್ರೀ ಆತ್ಮಹತ್ಯೆಗೆ ಕಾರಣವಾದವರೆಲ್ಲರೂ ಬಿಜೆಪಿ ಯುವ ಮೋರ್ಚಾ ಮತ್ತು ಬಜರಂಗದಳ ಸದಸ್ಯರೆಂಬುದು ಇಲ್ಲಿ ಗಮನಾರ್ಹವಾಗಿದೆ.

ಈ ಹಿನ್ನೆಲೆಯಲ್ಲಿ ಘಟನೆಗೆ ಸಂಬಂಧಿಸಿದಂತೆ ಶೋಭಾ ಸೇರಿ ಹಲವು ಬಿಜೆಪಿ ಮುಖಂಡರು ಉತ್ತರಿಸಬೇಕೆಂದು ನಾಗರಿಕರು ಹಾಗೂ ಪ್ರತಿಪಕ್ಷಗಳ ಸ್ಥಳೀಯ ಮುಖಂಡರು ಆಗ್ರಹಿಸುತ್ತಿದ್ದಾರೆ. ಆದರೆ ಶೋಭಾ ಮಾತ್ರ ಈ ಘಟನೆಗೂ, ತಮಗೂ ಯಾವುದೇ ಸಂಬಂಧವಿಲ್ಲವೆಂದು ಮೌನಕ್ಕೆ ಶರಣಾಗಿದ್ದಾರೆ.

ತೀರ್ಥಹಳ್ಳಿಯ ನಂದಿತಾ ಪ್ರಕರಣ ಮತ್ತು ಹೊನ್ನಾವರದ ಪರೇಶ್ ಮೇಸ್ತ ಸಾವಿನಲ್ಲಿ ಭಾರೀ ರಾಜಕಾರಣ ಮಾಡಿದ್ದ ಶೋಭಾ ಕರಂದ್ಲಾಜೆ ತನ್ನದೇ ಕ್ಷೇತ್ರದ ವಿದ್ಯಾರ್ಥಿನಿಯ ಸಾವಿಗೆ ಶೋಕವನ್ನೂ ವ್ಯಕ್ತಪಡಿಸಲಾಗದ ಮಟ್ಟದ ರಾಜಕಾರಣವನ್ನು ಮಾಡುತ್ತಿದ್ದಾರೆಯೆ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

ಇದನ್ನೂ ಓದಿ:
►►ಪರೇಶ್ ಸಾವು: ವೈದ್ಯರ ವರದಿ ಸುಳ್ಳೇ ಆದಲ್ಲಿ ಬಿಜೆಪಿ ಈ ಸಲಹೆ ಸ್ವೀಕರಿಸುವುದೆ?
http://bit.ly/2j87yR7
►►ಪರೇಶ್ ಮೇಸ್ತ ಸಾವು: ಸಿಎಂ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ: http://bit.ly/2BNSKyA

ಇಂದು ಹೆಚ್ಚು ಓದಿದ ಸುದ್ದಿ
►►ಭೂಗತ ಲೋಕದ ಸಂಪರ್ಕವಿದೆ ಎಂದು ಬೆದರಿಕೆ: ತಿಂಗಳೆ ವಿರುದ್ಧ ಬಿಜೆಪಿ ನಾಯಕನ ಆರೋಪ:
http://bit.ly/2D0BDOm
►►ಬಶೀರ್ ಹತ್ಯೆ: ಮಾರಕಾಸ್ತೃಗಳಿಗಾಗಿ ನೇತ್ರಾವತಿ ನದಿಯಲ್ಲಿ ಶೋಧ: http://bit.ly/2CZlQ3d
►►ಕೇಂದ್ರದ ಅನುದಾನ ಕಾಂಗ್ರೆಸ್ ದುರುಪಯೋಗ ಮಾಡಿಕೊಂಡಿದೆ: ಅಮಿತ್ ಷಾ ಆರೋಪ: http://bit.ly/2Fo2ZvU
►►ಆರ್‌ಎಸ್‌ಎಸ್, ಬಜರಂಗದಳದವರು ಉಗ್ರಗಾಮಿಗಳು: ಮುಖ್ಯಮಂತ್ರಿ ಸಿದ್ದರಾಮಯ್ಯ: http://bit.ly/2qQr0bS
►►ಮೂರು ದಿನಗಳ ಕಾಲ ಚಳಿಯಲ್ಲಿ ಬಳಲಿದ ಯುವಕ: ನೆರವಾಯಿತು ‘ನಾಗರಿಕ ವೇದಿಕೆ’: http://bit.ly/2ALkL8W
►►ಹೆಣ ಬಿದ್ದರೆ ರಣಹದ್ದುಗಳಂತೆ ಎಗರಾಡುವ ಬಿಜೆಪಿ: ಫೇಸ್‌ಬುಕ್‌ನಲ್ಲಿ ಅನುಪಮಾ ಶೆಣೈ: http://bit.ly/2CMWJw2
►►ಮುಸ್ಲಿಮರ ಜೊತೆ ಮಾತನಾಡಿದ್ದಕ್ಕೆ ಆಕ್ಷೇಪ: ದಲಿತ ಮಹಿಳೆಯ ಮನೆಗೆ ನುಗ್ಗಿದ ಬಜರಂಗಿಗಳ ಬಂಧನ: http://bit.ly/2CLc2FK
►►ಸರ್ಕಾರಿ ಜಾಗದಲ್ಲಿದ್ದ ಭೂ ಹೀನರ ಮನೆ ತೆರವು. ಹಲವರ ಬಂಧನ. ಸ್ಥಳದಲ್ಲಿ ಉದ್ವಿಗ್ನತೆ: http://bit.ly/2AM2iJA
►►ಹಿಂಜಾವೇ ನಾಯಕನ ಮೇಲೆ ಹಲ್ಲೆಯ ಕಟ್ಟುಕತೆ ಬಯಲು ಮಾಡಿದ ಪೊಲೀಸರು: http://bit.ly/2AJPfYV

Related Tags: Shobha Karandlaje''s Silence, Dhanya Suicide, Moodigere, Chikmagalur, BJP Yuva Morcha Moodigere, Anil Varun, Love Jehad, Social Media, Shobha Karandlaje, MP Shobha, Kannada News, Karnataka News, Coastal Karnataka News, Karavali News, Karavali Karnataka, Latest Kannada News, ಕರಾವಳಿ ಸುದ್ದಿ, ಕರಾವಳಿ ಕರ್
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ