ಮಹದಾಯಿ ನೀರು. ಮಾತುಕತೆ ಇಲ್ಲ. ನ್ಯಾಯಾಧಿಕರಣದಲ್ಲೇ ಎಲ್ಲ: ಪರ್ರಿಕರ್ ಘೋಷಣೆ

ಕರಾವಳಿ ಕರ್ನಾಟಕ ವರದಿ

ಪಣಜಿ:
ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ಗೋವಾ ಸರ್ಕಾರವು ಈ ವಿಷಯದಲ್ಲಿ ಯಾವುದೇ ಮಾತುಕತೆ ಸಾಧ್ಯವಿಲ್ಲ ಎಂದು ಪ್ರಮಾಣಪತ್ರ ಸಲ್ಲಿಸಲಿದೆ ಎಂದು ತಿಳಿದುಬಂದಿದೆ.

ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರಿಕರ್ ನ್ಯಾಯಾಧಿಕರಣದಲ್ಲೇ ನಾವು ಹೋರಾಟ ಮುಂದುವರಿಸುತ್ತೇವೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ನದಿ ನೀರು ಹಂಚಿಕೆ ವಿವಾದವು ನ್ಯಾಯಾಧಿಕರಣದ ಮುಂದಿದೆ. ಅಲ್ಲಿಯೇ ನಾವು ಹೋರಾಡುತ್ತೇವೆ ಎಂದು ಪರ್ರಿಕರ್ ಹೇಳಿದ್ದಾರೆ.

ಮಹದಾಯಿ ವಿವಾದದಲ್ಲಿ ಗೋವಾ ಸರ್ಕಾರದ ಪರ ವಾದ ಮಂಡಿಸುತ್ತಿರುವ ಹಿರಿಯ ವಕೀಲ ಆತ್ಮಾರಾಮ ನಾಡಕರ್ಣಿ, ಫೆ.6ರಂದು  ನ್ಯಾಯಾಧಿಕರಣದ ಅಂತಿಮ ವಿಚಾರಣೆಯಲ್ಲಿ, ಮಾತುಕತೆಯ ಮೂಲಕ ವಿವಾದ ಇತ್ಯರ್ಥ ಸಾಧ್ಯವಿಲ್ಲ ಎಂದು ಪ್ರಮಾಣಪತ್ರ ಸಲ್ಲಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.

ಮಹದಾಯಿ ವಿಷಯದಲ್ಲಿ ವಾದ ಮಾಡಲು ಗೋವಾ ವಕೀಲರ 3 ತಂಡಗಳು ಕಾರ್ಯನಿರತವಾಗಿವೆ. ಒಂದು ತಂಡ ಪರಿಸರ ವಿಷಯದಲ್ಲಿ ಇನ್ನೊಂದು ತಂಡ ನೀರಿನ ಸಮತೋಲನ ವಿಷಯದಲ್ಲಿ ಹಾಗೂ 3ನೇ ತಂಡ ನದಿ ನೀರಿನ ಅಂತರ್ ಪಾತ್ರ ವರ್ಗಾವಣೆ ವಿಷಯದಲ್ಲಿ ವಾದ ಮಾಡಬೇಕಾದ ಅಂಶಗಳನ್ನು ಸಿದ್ಧಪಡಿಸುತ್ತಿದೆ.

ಕರ್ನಾಟಕದ ಜತೆಗೆ ನದಿ ನೀರು ಹಂಚಿಕೊಳ್ಳುವ ಮಾತುಕತೆ ನಡೆಸಲು ಉತ್ಸುಕರಾಗಿದ್ದೇವೆ ಎಂದು ಪರ‍್ರೀಕರ್ ಕಳೆದ ಡಿಸೆಂಬರ್‌ನಲ್ಲಿ ಕರ್ನಾಟಕದ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದರು.

ಪ್ರಧಾನಿ ಜೊತೆಗಿನ ಭೇಟಿಯ ವಿವರಗಳನ್ನು ಹಂಚಿಕೊಳ್ಳುವ ಉದ್ದೇಶದಿಂದ ಇಲ್ಲಿ ಪತ್ರಿಕಾಗೋಷ್ಠಿ ಕರೆದಿದ್ದರು. ಪತ್ರಿಕಾಗೋಷ್ಠಿ ಆರಂಭವಾಗುತ್ತಿದ್ದಂತೆಯೇ ಪತ್ರಕರ್ತರು ಮಹದಾಯಿ ವಿವಾದಕ್ಕೆ ಸಂಬಂಧಿಸಿ ಪ್ರಶ್ನೆಗಳನ್ನು ಕೇಳಿದರು. ಆಗ ಸಿಡಿಮಿಡಿಗೊಂಡ ಪರ‍್ರೀಕರ್ ಪತ್ರಕರ್ತರ ಮೇಲೆ ಹರಿಹಾಯ್ದರು.

‘ನಿಮಗೆ ಸುದ್ದಿ ಬೇಕಿತ್ತು. ಹೀಗಾಗಿಯೇ ಮಹಾದಾಯಿ ವಿವಾದವನ್ನು ನೀವೇ ಸೃಷ್ಟಿಸಿದಿರಿ. ನೀರು ಹಂಚಿಕೆ ವಿವಾದ ನ್ಯಾಯಮಂಡಳಿಯ ಅಂಗಳದಲ್ಲಿದೆ. ನಾವು ಅಲ್ಲೇ ಹೋರಾಡುತ್ತೇವೆ ಎಂದು ಹರಿಹಾಯ್ದರು.

ಇಂದು ಹೆಚ್ಚು ಓದಿದ ಸುದ್ದಿ
►►ಧನ್ಯಶ್ರೀ ತಂದೆಯ ದಿಕ್ಕು ತಪ್ಪಿಸಿದ ಸಂಘಟನೆಗಳ ವಿರುದ್ಧ ಕ್ರಮ: ಅಣ್ಣಾಮಲೈ:
http://bit.ly/2EvLrwQ
►►ತನ್ನದೇ ಕ್ಷೇತ್ರದ ಧನ್ಯಶ್ರೀ ಸಾವಿಗೆ ಜಾಣ ಮೌನ: ಶೋಭಾ ಕರಂದ್ಲಾಜೆ ವಿರುದ್ಧ ವ್ಯಾಪಕ ಆಕ್ರೋಶ: http://bit.ly/2CKV9uN
►►ಭೂಗತ ಲೋಕದ ಸಂಪರ್ಕವಿದೆ ಎಂದು ಬೆದರಿಕೆ: ತಿಂಗಳೆ ವಿರುದ್ಧ ಬಿಜೆಪಿ ನಾಯಕನ ಆರೋಪ: http://bit.ly/2D0BDOm
►►ಬಶೀರ್ ಹತ್ಯೆ: ಮಾರಕಾಸ್ತೃಗಳಿಗಾಗಿ ನೇತ್ರಾವತಿ ನದಿಯಲ್ಲಿ ಶೋಧ: http://bit.ly/2CZlQ3d
►►ಕೇಂದ್ರದ ಅನುದಾನ ಕಾಂಗ್ರೆಸ್ ದುರುಪಯೋಗ ಮಾಡಿಕೊಂಡಿದೆ: ಅಮಿತ್ ಷಾ ಆರೋಪ: http://bit.ly/2Fo2ZvU
►►ಆರ್‌ಎಸ್‌ಎಸ್, ಬಜರಂಗದಳದವರು ಉಗ್ರಗಾಮಿಗಳು: ಮುಖ್ಯಮಂತ್ರಿ ಸಿದ್ದರಾಮಯ್ಯ: http://bit.ly/2qQr0bS

Related Tags: Mahadayi Water Dispute, Manohar Parrikar, Siddaramiah, Yadiyurappa, Tribunal
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ