ಮರಕ್ಕೆ ಢಿಕ್ಕಿಯಾದ ಓಮ್ನಿ: ಮಗು ಸಾವು. 6 ಮಂದಿ ಗಂಭೀರ
Jan 10 2018 11:01PM
ಕರಾವಳಿ ಕರ್ನಾಟಕ ವರದಿ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಸಮೀಪದ ಮರಕ್ಕೆ ಗುದ್ದಿದ ಪರಿಣಾಮ ಮಗು ಸಾವನ್ನಪ್ಪಿದ್ದು, ಕುಟುಂಬದ ಆರು ಮಂದಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಖೇದಕರ ಘಟನೆ ಇಲ್ಲಿನ ಮಣಿಹಳ್ಳ ಸಮೀಪದ ಬಡಗುಂಡಿ ಎಂಬಲ್ಲಿ ವರದಿಯಾಗಿದೆ.
ಸ್ಥಳೀಯ ನಿವಾಸಿಗಳಾದ ಜರ್ಮನ್, ರೋಶನ್, ಲವಿಟ, ಸಿಸಿಲಿಯಾ ಬರೆಟ್ಟೋ, ಓಮ್ನಿ ಚಾಲಕ ರೋಬಿನ್, ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ಸಾಗಿಸಲಾಗಿತ್ತು. ಗಾಯಾಳು ಮಕ್ಕಳಲ್ಲಿ ಓರ್ವ ಮಗು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ರೋಶನ್ ವಿದೇಶದಲ್ಲಿ ಉದ್ಯೋಗಲ್ಲಿದ್ದು, ಇತ್ತೀಚೆಗಷ್ಟೆ ಊರಿಗೆ ಬಂದಿದ್ದರು. ಕುಟುಂಬಿಕರೊಂದಿಗೆ ಮಂಗಳೂರು ಬೀಚ್ಗೆ ತೆರಳಿ ವಾಪಾಸು ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಓಮ್ನಿ ಮಣಿಹಳ್ಳ ಸಮೀಪದ ಬಡಗುಂಡಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಢಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದೆ.



ಸ್ಥಳಕ್ಕಾಗಮಿಸಿದ ಬಂಟ್ವಾಳ ಟ್ರಾಫಿಕ್ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಇಂದು ಹೆಚ್ಚು ಓದಿದ ಸುದ್ದಿ
►►ಗೊಮ್ಮಟೇಶ್ವರನಿಗೆ ಬಟ್ಟೆ ಹಾಕುವಂತೆ ಸಿಎಂಗೆ ಪತ್ರಕರ್ತನ ಮನವಿ!: http://bit.ly/2mgzy6w
►►ಮಹದಾಯಿ ನೀರು. ಮಾತುಕತೆ ಇಲ್ಲ. ನ್ಯಾಯಾಧಿಕರಣದಲ್ಲೇ ಎಲ್ಲ: ಪರ್ರಿಕರ್ ಘೋಷಣೆ: http://bit.ly/2qOPCSp
►►ಧನ್ಯಶ್ರೀ ತಂದೆಯ ದಿಕ್ಕು ತಪ್ಪಿಸಿದ ಸಂಘಟನೆಗಳ ವಿರುದ್ಧ ಕ್ರಮ: ಅಣ್ಣಾಮಲೈ: http://bit.ly/2EvLrwQ
►►ತನ್ನದೇ ಕ್ಷೇತ್ರದ ಧನ್ಯಶ್ರೀ ಸಾವಿಗೆ ಜಾಣ ಮೌನ: ಶೋಭಾ ಕರಂದ್ಲಾಜೆ ವಿರುದ್ಧ ವ್ಯಾಪಕ ಆಕ್ರೋಶ: http://bit.ly/2CKV9uN
►►ಭೂಗತ ಲೋಕದ ಸಂಪರ್ಕವಿದೆ ಎಂದು ಬೆದರಿಕೆ: ತಿಂಗಳೆ ವಿರುದ್ಧ ಬಿಜೆಪಿ ನಾಯಕನ ಆರೋಪ: http://bit.ly/2D0BDOm
►►ಬಶೀರ್ ಹತ್ಯೆ: ಮಾರಕಾಸ್ತೃಗಳಿಗಾಗಿ ನೇತ್ರಾವತಿ ನದಿಯಲ್ಲಿ ಶೋಧ: http://bit.ly/2CZlQ3d
►►ಕೇಂದ್ರದ ಅನುದಾನ ಕಾಂಗ್ರೆಸ್ ದುರುಪಯೋಗ ಮಾಡಿಕೊಂಡಿದೆ: ಅಮಿತ್ ಷಾ ಆರೋಪ: http://bit.ly/2Fo2ZvU
►►ಆರ್ಎಸ್ಎಸ್, ಬಜರಂಗದಳದವರು ಉಗ್ರಗಾಮಿಗಳು: ಮುಖ್ಯಮಂತ್ರಿ ಸಿದ್ದರಾಮಯ್ಯ: http://bit.ly/2qQr0bS
Related Tags: Bantwal, Car Hits Tree, Child Dies, Badagundi, Manihalla Accident, Bantwal Traffic Police, Kannada News, Karnataka News, Coastal Karnataka News, Karavali News, Karavali Karnataka, Latest Kannada News, ಕರಾವಳಿ ಸುದ್ದಿ, ಕರಾವಳಿ ಕರ್ನಾಟಕ ಸುದ್ದಿ