ಪೈಲಟ್ ಸಮಯಪ್ರಜ್ಞೆ: ಮಂಗಳೂರಿನಲ್ಲಿ ತಪ್ಪಿದ ವಿಮಾನ ದುರಂತ

ಕರಾವಳಿ ಕರ್ನಾಟಕ ವರದಿ

ಮಂಗಳೂರು:
ಪೈಲಟ್ ಸಮಯ ಪ್ರಜ್ಞೆಯಿಂದಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆಯಲಿದ್ದ ಭಾರೀ ಅವಘಡವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿ ಹೋಗಿದೆ ಎಂದು ಎಎನ್ಐ ವರದಿ ಮಾಡಿದೆ.

ಮಂಗಳೂರು ವಿಮಾನ ನಿಲ್ದಾಣದ ರನ್ ವೇ ಬಳಿ ಇರುವ ಹುಲ್ಲು ತೆಗೆಯಲು ಟ್ರಾಕ್ಟರ್ ಕರೆಸಲಾಗಿದ್ದು, ಟ್ರಾಕ್ಟರನ್ನು ಚಾಲಕ ರನ್ ವೇ ಅಂತ್ಯದಲ್ಲಿ ನಿಲ್ಲಿಸಿದ್ದನು. ಈ ಸಂದರ್ಭದಲ್ಲಿ ಮುಂಬೈಗೆ ಹೊರಡಬೇಕಿದ್ದ ವಿಮಾನ ಟೇಕ್ ಆಫ್ ಆಗುವುದರಲ್ಲಿತ್ತು.

ಆದರೆ ಚಾಲಕನಿಗೆ ಟ್ರಾಕ್ಟರ್ ನಿಂತಿರುವುದು ತಿಳಿದಿರಲಿಲ್ಲ. ಆಗ ಈ ಟ್ರಾಕ್ಟರ್ ರನ್ ವೇ ಯಲ್ಲಿ ಇರುವುದನ್ನು ಏರ್ ಟ್ರಾಫಿಕ್ ಕಂಟ್ರೋಲರ್ ನೋಡಿದ್ದು, ಕೂಡಲೇ ವಿಮಾನದ ಪೈಲಟ್‌ಗೆ ಸಂದೇಶ ರವಾನಿಸಿದ್ದಾರೆ.

ವಿಮಾನ ಒಂದೊಮ್ಮೆ ಟೇಕಾಫ್ ಆಗಲು ಮುಂದುವರಿಯುತ್ತಿದ್ದಲ್ಲಿ ಟ್ರಾಕ್ಟರ್‌ಗೆ ಗುದ್ದಿ ಭಾರೀ ಅವಘಡ ಸಂಭವಿಸಲಿತ್ತು. ಆದರೆ ಅದೃಷ್ಟಾವಶಾತ್ ಅಪಘಾತ ಕೂದಲೆಳೆ ಅಂತರದಲ್ಲಿ ತಪ್ಪಿದೆ. ಇದರಿಂದಾಗಿ ಭಾರೀ ಅನಾಹುತ ತಪ್ಪಿದಂತಾಗಿದೆ ಎಂದು ವರದಿ ವಿವರಿಸಿತ್ತು.

ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ನಿರ್ದೇಶಕರು, ವಿಮಾನ ಟೇಕಾಫ್ ಆಗುವ ವೇಳೆ ರನ್ ವೇ ಯಲ್ಲಿ ಯಾವುದೇ ಟ್ರ್ಯಾಕ್ಟರ್ ಆಗಲಿ ವಸ್ತುವಾಗಲಿ ಇರಲಿಲ್ಲ.

ವಿಮಾನ ಟೇಕ್ ಆಫ್ ಆಗುವ ಮುನ್ನವೇ ರನ್ ವೇ ಗಿಂತ ತುಂಬಾ ದೂರದಲ್ಲಿ ಟ್ರ್ಯಾಕ್ಟರ್ ಇದ್ದಿರುವುದನ್ನು ಏರ್ ಟ್ರಾಫಿಕ್ ಕಂಟ್ರೋಲರ್ ಗಮನಕ್ಕೆ ಬಂದಿತ್ತು, ಕೂಡಲೇ ಟ್ರ್ಯಾಕ್ಟರ್ ಅನ್ನು ತೆಗೆಸಿದ ಬಳಿಕ ವಿಮಾನ ಸುರಕ್ಷಿತವಾಗಿ ಟೇಕಾಫ್ ಆಗಿದೆ ಎಂದು ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಮೇ 22, 2010ರಲ್ಲಿ ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ರನ್ ವೇಯಿಂದ ಪ್ರಪಾತಕ್ಕೆ ಜಾರಿತ್ತು. ಈ ಭೀಕರ ದುರಂತದಲ್ಲಿ 158 ಜನರು ಸಾವನ್ನಪ್ಪಿದ್ದು, 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.

ಇಂದು ಹೆಚ್ಚು ಓದಿದ ಸುದ್ದಿ
►►ರಿಕ್ಷಾ ಢಿಕ್ಕಿ: ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಸಾವು:
http://bit.ly/2ExApHr
►►ಧನ್ಯಶ್ರೀ ಆತ್ಮಹತ್ಯೆ. ಬೆದರಿಕೆ ಹಾಕಿ ಬಜರಂಗದಳಕ್ಕೂ ಮಾಹಿತಿ ನೀಡಿದ್ದ ಆರೋಪಿಯ ಬಂಧನ: http://bit.ly/2Ew2b71
►►ಗೋ ಸಾಗಾಟಗಾರರ ರಕ್ಷಣೆ ನಮ್ಮ ಸರ್ಕಾರದ ಹೊಣೆ: ಮನೋಹರ್ ಪರ್ರಿಕರ್: http://bit.ly/2EvLrwQ
►►ಸಿದ್ದರಾಮಯ್ಯ ಮಹಿಳೆಯ ಮೈ ಮುಟ್ಟಬಹುದೆ? ಬಿಜೆಪಿಯ 'ಲೋ ಲೆವೆಲ್' ಟ್ವೀಟ್‌ಗೆ ಆಕ್ರೋಶ: http://bit.ly/2AR2eIE
►►ಮರಕ್ಕೆ ಢಿಕ್ಕಿಯಾದ ಓಮ್ನಿ: ಮಗು ಸಾವು. 6 ಮಂದಿ ಗಂಭೀರ: http://bit.ly/2COSVum
►►ಗೊಮ್ಮಟೇಶ್ವರನಿಗೆ ಬಟ್ಟೆ ಹಾಕುವಂತೆ ಸಿಎಂಗೆ ಪತ್ರಕರ್ತನ ಮನವಿ!: http://bit.ly/2mgzy6w
►►ಮಹದಾಯಿ ನೀರು. ಮಾತುಕತೆ ಇಲ್ಲ. ನ್ಯಾಯಾಧಿಕರಣದಲ್ಲೇ ಎಲ್ಲ: ಪರ್ರಿಕರ್ ಘೋಷಣೆ: http://bit.ly/2qOPCSp
►►ಧನ್ಯಶ್ರೀ ತಂದೆಯ ದಿಕ್ಕು ತಪ್ಪಿಸಿದ ಸಂಘಟನೆಗಳ ವಿರುದ್ಧ ಕ್ರಮ: ಅಣ್ಣಾಮಲೈ: http://bit.ly/2EvLrwQ

Related Tags: Mangalore International Airport, Tractor on Runway, Flight Take-Off, Airport Director, Kannada News, Karnataka News, Coastal Karnataka News, Karavali News, Karavali Karnataka, Latest Kannada News, ಕರಾವಳಿ ಸುದ್ದಿ, ಕರಾವಳಿ ಕರ್ನಾಟಕ ಸುದ್ದಿ
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ