ಸಿಎಂ ಹೆಸರಿನಲ್ಲಿ ರಾಮನ ಬದಲಾಗಿ ರಾವಣ ಇರಬೇಕಿತ್ತು: ಯಡಿಯೂರಪ್ಪ

ಕರಾವಳಿ ಕರ್ನಾಟಕ ವರದಿ

ತುಮಕೂರು:
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾತೆತ್ತಿದ್ದರೆ ನನ್ನ ಹೆಸರಿನಲ್ಲಿಯೇ ರಾಮ ಇದ್ದಾನೆ ಎಂದು ಹೇಳಿಕೆ ನೀಡುತ್ತಾರೆ. ಇದು ದುರ್ದೈವ. ಅವರ ಹೆಸರಿನಲ್ಲಿ ರಾಮನ ಬದಲಾಗಿ ರಾವಣ ಇರಬೇಕಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಟೀಕಿಸಿದ್ದಾರೆ.

ಶಿರಾದಲ್ಲಿ ಗುರುವಾರ ನಡೆದ ಪರಿವರ್ತನಾ ರ‍್ಯಾಲಿಯಲ್ಲಿ ಮಾತನಾಡಿ ಯಡಿಯೂರಪ್ಪ, ದೇಶದ 19 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ನಡೆಸುತ್ತಿದೆ. ನಾಲ್ಕು ತಿಂಗಳು ಕಳೆದರೆ ರಾಜ್ಯದಲ್ಲೂ ಅಧಿಕಾರ ನಡೆಸಲಿದೆ. ಇಂತಹ ಜನಮೆಚ್ಚಿದ ಪಕ್ಷವನ್ನು ಉಗ್ರಗಾಮಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿರುವುದು ಶೋಭೆ ತರುವಂತಹದ್ದಲ್ಲ ಎಂದಿದ್ದಾರೆ.

ಮಹದಾಯಿ ನದಿ ನೀರು ಹಂಚಿಕೆ ವಿವಾದವನ್ನು ಬಗೆಹರಿಸಿಕೊಂಡು ರಾಜ್ಯಕ್ಕೆ ನೀರು ತರುವ ಪ್ರಯತ್ನದಲ್ಲಿ ಬಿಜೆಪಿ ತೊಡಗಿತ್ತು. ಆದರೆ, ಕಾಂಗ್ರೆಸ್ ಷಡ್ಯಂತ್ರ ನಡೆಸಿ ಸಮಸ್ಯೆ ಬಗೆಹರಿಯಲು ಬಿಡುತ್ತಿಲ್ಲ ಎಂದು ಅವರು ಆರೋಪಿಸಿದರು.

ಪೊಲೀಸರ ವಿರುದ್ಧವೂ ಗುಡುಗಿದ ಯಡಿಯೂರಪ್ಪ, ಕಾಂಗ್ರೆಸ್‌ನ ಕೈಗೊಂಬೆಯಂತೆ ವರ್ತಿಸಿ ನಮ್ಮ ಕಾರ್ಯಕರ್ತರ ಮೇಲೆ ಕಾನೂನು ಬಾಹಿರವಾಗಿ ಕಿರುಕುಳ ನೀಡಿ ರೌಡಿ ಶೀಟರ್‌ ಪ್ರಕರಣ ದಾಖಲಿಸಿ ಭಯದ ವಾತಾವರಣ ಸೃಷ್ಟಿಸಬೇಡಿ.

ಮೂರು ನಾಲ್ಕು ತಿಂಗಳು ಕಳೆದ ಮೇಲೆ ನಾನು ಮುಖ್ಯಮಂತ್ರಿಯಾಗಿ ಇಲ್ಲಿ ನಿಂತಾಗ ನಿಮ್ಮ ಪರಿಸ್ಥಿತಿ ನೆಟ್ಟಗಾಗಲಿಕ್ಕಿಲ್ಲ ಎಂದು ಪೊಲೀಸ್‌ ಅಧಿಕಾರಿಗಳಿಗೆ ಎಚ್ಚರಿಕೆಯನ್ನೂ ನೀಡಿದ್ದಾರೆ.

ಇಂದು ಹೆಚ್ಚು ಓದಿದ ಸುದ್ದಿ
►►ಪೈಲಟ್ ಸಮಯಪ್ರಜ್ಞೆ: ಮಂಗಳೂರಿನಲ್ಲಿ ತಪ್ಪಿದ ವಿಮಾನ ದುರಂತ:
http://bit.ly/2AQk1zk
►►ರಿಕ್ಷಾ ಢಿಕ್ಕಿ: ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಸಾವು: http://bit.ly/2ExApHr
►►ಧನ್ಯಶ್ರೀ ಆತ್ಮಹತ್ಯೆ. ಬೆದರಿಕೆ ಹಾಕಿ ಬಜರಂಗದಳಕ್ಕೂ ಮಾಹಿತಿ ನೀಡಿದ್ದ ಆರೋಪಿಯ ಬಂಧನ: http://bit.ly/2Ew2b71
►►ಗೋ ಸಾಗಾಟಗಾರರ ರಕ್ಷಣೆ ನಮ್ಮ ಸರ್ಕಾರದ ಹೊಣೆ: ಮನೋಹರ್ ಪರ್ರಿಕರ್: http://bit.ly/2EvLrwQ
►►ಸಿದ್ದರಾಮಯ್ಯ ಮಹಿಳೆಯ ಮೈ ಮುಟ್ಟಬಹುದೆ? ಬಿಜೆಪಿಯ 'ಲೋ ಲೆವೆಲ್' ಟ್ವೀಟ್‌ಗೆ ಆಕ್ರೋಶ: http://bit.ly/2AR2eIE
►►ಮರಕ್ಕೆ ಢಿಕ್ಕಿಯಾದ ಓಮ್ನಿ: ಮಗು ಸಾವು. 6 ಮಂದಿ ಗಂಭೀರ: http://bit.ly/2COSVum
►►ಗೊಮ್ಮಟೇಶ್ವರನಿಗೆ ಬಟ್ಟೆ ಹಾಕುವಂತೆ ಸಿಎಂಗೆ ಪತ್ರಕರ್ತನ ಮನವಿ!: http://bit.ly/2mgzy6w
►►ಮಹದಾಯಿ ನೀರು. ಮಾತುಕತೆ ಇಲ್ಲ. ನ್ಯಾಯಾಧಿಕರಣದಲ್ಲೇ ಎಲ್ಲ: ಪರ್ರಿಕರ್ ಘೋಷಣೆ: http://bit.ly/2qOPCSp
►►ಧನ್ಯಶ್ರೀ ತಂದೆಯ ದಿಕ್ಕು ತಪ್ಪಿಸಿದ ಸಂಘಟನೆಗಳ ವಿರುದ್ಧ ಕ್ರಮ: ಅಣ್ಣಾಮಲೈ: http://bit.ly/2EvLrwQ

Related Tags: B S Yeddyurappa, Police Officers, Parivarthan Rally, Tumkur, Kannada News, Karavalikarnataka News
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ