ಶತಕ ಭಾರಿಸಿದ ಇಸ್ರೋ: ನಭಕ್ಕೆ ಚಿಮ್ಮಿದ ಭಾರತದ 100ನೇ ಉಪಗ್ರಹ

ಕರಾವಳಿ ಕರ್ನಾಟಕ ವರದಿ

ನವದೆಹಲಿ:
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ 100ನೇ ಉಪಗ್ರಹವನ್ನು ಇಂದು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದ್ದು, ಈ ಮೂಲಕ ಹೊಸ ಇತಿಹಾಸವನ್ನು ಬರೆದಿದೆ.

ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಬೆಳಿಗ್ಗೆ 9 ಗಂಟೆ 28 ನಿಮಿಷಕ್ಕೆ 31 ಉಪಗ್ರಹಗಳನ್ನು ಹೊತ್ತು 'ಪಿಎಸ್ಎಲ್ ವಿ - ಸಿ40' ಉಡಾವಣಾ ವಾಹಕ ನಭಕ್ಕೆ ಚಿಮ್ಮಿತು.

ಇದರ ಜೊತೆಗೆ ಅಮೆರಿಕ, ಕೆನಡಾ, ಇಂಗ್ಲೆಂಡ್, ಕೊರಿಯಾ, ಫಿನ್‍ಲ್ಯಾಂಡ್ ಹಾಗೂ ಫ್ರಾನ್ಸ್ ಗೆ ಸೇರಿದ 28 ವಿದೇಶಿ ಉಪಗ್ರಹಗಳು ಕಕ್ಷೆ ಸೇರಲಿವೆ. ಕಾರ್ಟೋಸ್ಯಾಟ್-2 ಸ್ಯಾಟ್‍ಲೈಟ್ 710 ಕೆಜಿ ಭಾರವಿದೆ.

ಎರಡು ಕಕ್ಷೆಗಳಿಗೆ ಉಪಗ್ರಹಗಳನ್ನ ಸೇರಿಸುತ್ತಿರುವುದರಿಂದ ಈ ಉಡಾವಣೆ ವಿಶಿಷ್ಟವಾಗಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ. 30 ಉಪಗ್ರಹಗಳನ್ನ ಭೂಮಿಯಿಂದ 550 ಕಿ.ಮೀ ಎತ್ತರದ ಕಕ್ಷೆಗೆ ಉಡಾವಣೆ ಮಾಡಿದ್ದು, ಮತ್ತೊಂದನ್ನು 359 ಕಿ.ಮೀ ಎತ್ತರದ ಕಕ್ಷೆಗೆ ಸೇರಿಸಬೇಕಿದೆ.

ಮಲ್ಟಿಪಲ್ ಬರ್ನ್ ಟೆಕ್ನಾಲಜಿ ಮೂಲಕ ಇದನ್ನು ಮಾಡಲಿದ್ದು, ರಾಕೆಟ್‍ನ ಎತ್ತರವನ್ನ ನಿಯಂತ್ರಿಸಲು ಅದನ್ನು ಸ್ವಿಚ್ ಆಫ್ ಮಾಡಿ ಮತ್ತೆ ಸ್ವಿಚ್ ಆನ್ ಮಾಡಲಾಗುತ್ತದೆ.

ಉಡಾವಣೆ ಮತ್ತು ಉಪಗ್ರಹಗಳನ್ನು ಎರಡು ಕಕ್ಷೆಗೆ ಸೇರಿಸುವ ಈ ಇಡೀ ಪ್ರಕ್ರಿಯೆಗೆ ಸುಮಾರು 2 ಗಂಟೆ 21 ನಿಮಿಷ ಸಮಯ ಹಿಡಿಯುತ್ತದೆ. ಪಿಎಸ್‍ಎಲ್‍ವಿ ಉಡವಣೆಯ ಕೌಂಟ್‍ಡೌನ್ ಗುರುವಾರ ಬೆಳಗ್ಗೆ 5.29ರಿಂದ ಆರಂಭವಾಗಿತ್ತು.

ಕಳೆದ ಬಾರಿ ಪಿಎಸ್ಎಲ್ ವಿ ಉಡಾವಣೆ ವೇಳೆ ಸಮಸ್ಯೆ ಕಾಣಿಸಿಕೊಂಡಿತ್ತು. ಆದರೆ ಇವತ್ತಿನ ಯಶಸ್ವೀ ಉಡಾವಣೆ ಎಲ್ಲಾ ಸಮಸ್ಯೆಗಳನ್ನು ಪತ್ತೆ ಹಚ್ಚಿ , ಬಗೆಹರಿಸಲಾಗಿದೆ ಎಂಬುದನ್ನು ಸಾಬೀತು ಮಾಡಿದೆ. ದೇಶಕ್ಕೆ ಹೊಸ ವರ್ಷದ ಕೊಡುಗೆ ನೀಡಲು ಸಂತಸವಾಗುತ್ತಿದೆ ಎಂದು ಇಸ್ರೋ ಅಧ್ಯಕ್ಷ ಎ.ಎಸ್ ಕಿರಣ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಇಂದು ಹೆಚ್ಚು ಓದಿದ ಸುದ್ದಿ
►►ಸಿಎಂ ಹೆಸರಿನಲ್ಲಿ ರಾಮನ ಬದಲಾಗಿ ರಾವಣ ಇರಬೇಕಿತ್ತು: ಯಡಿಯೂರಪ್ಪ:
http://bit.ly/2D0Vyxd
►►ಪೈಲಟ್ ಸಮಯಪ್ರಜ್ಞೆ: ಮಂಗಳೂರಿನಲ್ಲಿ ತಪ್ಪಿದ ವಿಮಾನ ದುರಂತ: http://bit.ly/2AQk1zk
►►ರಿಕ್ಷಾ ಢಿಕ್ಕಿ: ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಸಾವು: http://bit.ly/2ExApHr
►►ಧನ್ಯಶ್ರೀ ಆತ್ಮಹತ್ಯೆ. ಬೆದರಿಕೆ ಹಾಕಿ ಬಜರಂಗದಳಕ್ಕೂ ಮಾಹಿತಿ ನೀಡಿದ್ದ ಆರೋಪಿಯ ಬಂಧನ: http://bit.ly/2Ew2b71
►►ಗೋ ಸಾಗಾಟಗಾರರ ರಕ್ಷಣೆ ನಮ್ಮ ಸರ್ಕಾರದ ಹೊಣೆ: ಮನೋಹರ್ ಪರ್ರಿಕರ್: http://bit.ly/2EvLrwQ
►►ಸಿದ್ದರಾಮಯ್ಯ ಮಹಿಳೆಯ ಮೈ ಮುಟ್ಟಬಹುದೆ? ಬಿಜೆಪಿಯ 'ಲೋ ಲೆವೆಲ್' ಟ್ವೀಟ್‌ಗೆ ಆಕ್ರೋಶ: http://bit.ly/2AR2eIE

Related Tags: ISRO, 100th Satellite Launch, ISRO Successfully Lifts, PSLV-C40, Kannada News, Karavalikarnataka News
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ