ಸಿದ್ಧರಾಮಯ್ಯ ವಿರುದ್ದ ಬಿಜೆಪಿಯಿಂದ ‘ನಾನೂ ಉಗ್ರ–ನನ್ನನ್ನೂ ಬಂಧಿಸಿ’ ಚಳವಳಿ

ಕರಾವಳಿ ಕರ್ನಾಟಕ ವರದಿ

ಬೆಂಗಳೂರು:
ಆರ್‌ಎಸ್‌ಎಸ್‌, ಬಜರಂಗದಳದವರು ಉಗ್ರಗಾಮಿಗಳು ಎಂದು ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಮುಖ್ಯಮಂತ್ರಿ ಹೇಳಿಕೆಯನ್ನು ಖಂಡಿಸಿ ಬಿಜೆಪಿ  ‘ನಾನೂ ಉಗ್ರ–ನನ್ನನ್ನೂ ಬಂಧಿಸಿ’ ಎಂಬ ಘೋಷಣೆಯಡಿ ರಾಜ್ಯದಾದ್ಯಂತ ಇಂದು ಜೈಲ್‌ ಭರೋ ಚಳವಳಿ ನಡೆಸಲು ನಿರ್ಧರಿಸಿದೆ.

ದೇಶಭಕ್ತ ಸಂಘಟನೆಗಳ ಕಾರ್ಯಕರ್ತರನ್ನು ಉಗ್ರಗಾಮಿಗಳು ಎಂದು ದೂಷಿಸುವುದಾದರೆ ಮೊದಲು ನಮ್ಮನ್ನೆಲ್ಲ ಬಂಧಿಸಲಿ. ಈ ರೀತಿ ಹೇಳಿಕೆ ನೀಡಿದ ಮುಖ್ಯಮಂತ್ರಿ ಹಾಗೂ ದಿನೇಶ್ ಗುಂಡೂರಾವ್ ಬಹಿರಂಗ ಕ್ಷಮೆಯಾಚಿಸಬೇಕು. ದಶಕಗಳಿಂದ ದೇಶಸೇವೆಗೆ ತಮ್ಮನ್ನು ಸಮರ್ಪಿಸಿಕೊಂಡಿರುವ ಆರ್‌ಎಸ್‌ಎಸ್‌ ಅಟಲ್ ಬಿಹಾರಿ ವಾಜಪೇಯಿ ಅವರಂತಹ ಮಹಾನ್ ನಾಯಕರನ್ನು ಬೆಳೆಸಿದೆ. ಈ ಸಂಘಟನೆಗಳನ್ನು ಉಗ್ರವಾದಿಗಳು, ಜಿಹಾದಿಗಳು ಎಂದು ಹೇಳಿರುವುದು ಹೊಣೆಗೇಡಿತನದ ಪರಮಾವಧಿ ಎಂದು ಪತ್ರಿಕಾಗೋಷ್ಟಿಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ಕೆಲ ದಿನಗಳ ಹಿಂದಷ್ಟೆ ಚಾಮರಾಜನಗರದ ನಾಗವಳ್ಳಿಗೆ ಭೇಟಿ ನೀಡಿ ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿಯವರಿಗೆ ನಮ್ಮ ಬಗ್ಗೆ ಮಾತನಾಡುವ ಯಾವುದೇ ನೈತಿಕತೆಯಿಲ್ಲ. ಬಿಜೆಪಿ, ಬಜರಂಗದಳ ಹಾಗೂ ಆರ್‌ಎಸ್‌ಎಸ್ ನಲ್ಲೂ ಉಗ್ರಗಾಮಿಗಳಿದ್ದಾರೆ ಎಂದು ಹೇಳಿಕೆ ನೀಡಿದ್ದರು.

ಆದರೆ ಈ ಕುರಿತು ಗುರುವಾರದಂದು ಸ್ಪಷ್ಟನೆ ನೀಡಿರುವ ಅವರು, ನಾನು, ಎಲ್ಲಿ ಯಾರಿಗೆ ಉಗ್ರಗಾಮಿ ಎಂದಿದ್ದೇನೆ. ಆರ್‌ಎಸ್‌ಎಸ್, ಬಜರಂಗದಳದವರು ಹಿಂದುತ್ವದ ಹೆಸರಲ್ಲಿ ಉಗ್ರಗಾಮಿಗಳಂತೆ ವರ್ತಿಸುತ್ತಿದ್ದಾರೆ ಎಂದು ಹೇಳಿದ್ದೇನೆ. ಅದರಲ್ಲಿ ತಪ್ಪೇನಿದೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದರು.

ಇಂದು ಹೆಚ್ಚು ಓದಿದ ಸುದ್ದಿ
►►ಶತಕ ಭಾರಿಸಿದ ಇಸ್ರೋ: ನಭಕ್ಕೆ ಚಿಮ್ಮಿದ ಭಾರತದ 100ನೇ ಉಪಗ್ರಹ:
http://bit.ly/2mvFYzH
►►ಸಿಎಂ ಹೆಸರಿನಲ್ಲಿ ರಾಮನ ಬದಲಾಗಿ ರಾವಣ ಇರಬೇಕಿತ್ತು: ಯಡಿಯೂರಪ್ಪ: http://bit.ly/2D0Vyxd
►►ಪೈಲಟ್ ಸಮಯಪ್ರಜ್ಞೆ: ಮಂಗಳೂರಿನಲ್ಲಿ ತಪ್ಪಿದ ವಿಮಾನ ದುರಂತ: http://bit.ly/2AQk1zk
►►ರಿಕ್ಷಾ ಢಿಕ್ಕಿ: ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಸಾವು: http://bit.ly/2ExApHr
►►ಧನ್ಯಶ್ರೀ ಆತ್ಮಹತ್ಯೆ. ಬೆದರಿಕೆ ಹಾಕಿ ಬಜರಂಗದಳಕ್ಕೂ ಮಾಹಿತಿ ನೀಡಿದ್ದ ಆರೋಪಿಯ ಬಂಧನ: http://bit.ly/2Ew2b71
►►ಗೋ ಸಾಗಾಟಗಾರರ ರಕ್ಷಣೆ ನಮ್ಮ ಸರ್ಕಾರದ ಹೊಣೆ: ಮನೋಹರ್ ಪರ್ರಿಕರ್: http://bit.ly/2EvLrwQ
►►ಸಿದ್ದರಾಮಯ್ಯ ಮಹಿಳೆಯ ಮೈ ಮುಟ್ಟಬಹುದೆ? ಬಿಜೆಪಿಯ 'ಲೋ ಲೆವೆಲ್' ಟ್ವೀಟ್‌ಗೆ ಆಕ್ರೋಶ: http://bit.ly/2AR2eIE

Related Tags: BJP, Jail Bharo, Protest, Karnataka Bjp, Shobha Karandlaje, Siddaramaiah, Dinesh Gundurao, Kannada News, Karavalikarnataka News
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ