ಧನ್ಯಶ್ರೀ ಪ್ರಕರಣದಲ್ಲಿ ಬಿಜೆಪಿಯ ದ್ವಂದ್ವ ನಿಲುವು ಬಟಾಬಯಲಾಗಿದೆ: ರಾಮಲಿಂಗಾ ರೆಡ್ಡಿ

ಕರಾವಳಿ ಕರ್ನಾಟಕ ವರದಿ

ಮಂಗಳೂರು:
ಮೂಡಿಗೆರೆ ವಿದ್ಯಾರ್ಥಿನಿ ಧನ್ಯಶ್ರೀಯನ್ನು ಬೆದರಿಸಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಯುವಮೋರ್ಚಾ ಅಧ್ಯಕ್ಷನ ವಿರುದ್ದ ಬಿಜೆಪಿ ಪ್ರತಿಭಟಿಸುತ್ತಿಲ್ಲ. ಧನ್ಯಶ್ರೀ ಸಾವನ್ನು ಖಂಡಿಸಿ ಧರಣಿಯೂ ಮಾಡುವುದಿಲ್ಲ. ಇವರ ಕಡೆಯವರು ಆರೋಪಿ ಸ್ಥಾನದಲ್ಲಿದ್ದರೆ ಯಾಕೆ ಮಾತನಾಡುತ್ತಿಲ್ಲ. ಧನ್ಯಶ್ರೀ ಪ್ರಾಣಕ್ಕೂ ಬೆಲೆ ಇದೆಯಲ್ಲವೇ ಎಂದು ರಾಜ್ಯ ಗೃಹ ಸಚಿವ ರಾಮಲಿಂಗಾರೆಡ್ಡಿ ಪ್ರಶ್ನಿಸಿದ್ದಾರೆ.

ಮಂಗಳೂರಿನ ಶಕ್ತಿನಗರದಲ್ಲಿರುವ ಪೊಲೀಸ್ ವಸತಿಗೃಹ ಕಟ್ಟಡಕ್ಕೆ ಶಿಲನ್ಯಾಸ ನೆರವೇರಿಸಿ ಮಾತನಾಡಿದ ಅವರು, ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಅನೈತಿಕ ಪೊಲೀಸ್ ಗಿರಿಗೆ ಹೆಚ್ಚಿನ ಕುಮ್ಮಕ್ಕು ದೊರಕಿತ್ತು. ಆದರೆ ಇದೀಗ ಶೇಕಡಾ 90 ರಷ್ಟು ಕಡಿಮೆಯಾಗಿದೆ.

ಮೂಡಿಗೆರೆಯ ಧನ್ಯಶ್ರೀ ಪ್ರಕರಣದಲ್ಲಿ ಬಿಜೆಪಿಯವರ ದ್ವಂದ್ವ ನಿಲುವು ಬಟಾಬಯಲಾಗಿದೆ. ಪರೇಶ್ ಮೇಸ್ತ ಪ್ರಕರಣದಲ್ಲಿ ನಮ್ಮ ಕಾರ್ಯಕರ್ತನ ಕೊಲೆ ಆಗಿದೆ ಎಂದು ಬೊಬ್ಬಿರಿದವರು, ಅವರದ್ದೆ ಪಕ್ಷದ ಮುಖಂಡ‌ ಮಾಡಿರುವ ಅಪರಾಧವನ್ನು ಖಂಡಿಸುವುದಕ್ಕೂ ಹೋಗಿಲ್ಲ ಎಂದು‌ ಅವರು ಟೀಕಿಸಿದರು.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಇರದೇ ಇರುವ ಕೋಮು ಸಂಘರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಇದೆ. ಇದಕ್ಕೆ ಕೋಮುವಾದಿ ಸಂಘಟನೆಗಳೇ ಕಾರಣ. ಜನರಿಗೆ ಇದಾವುದೂ ಬೇಕಾಗಿಲ್ಲ.

ಸಂಘಟನೆಗಳು ಜನರಿಗೆ ನೆಮ್ಮದಿಯಾಗಿ ಬದುಕಲು ಬಿಟ್ಟರೆ ಸಾಕು. ಇಂತಹ ಸಂಘಟನೆಗಳಿಗೆ ಜನರೇ ಮುಂದೊಂದು ದಿನ ರೊಚ್ಚಿಗೆದ್ದು ಬುದ್ದಿ ಕಲಿಸಲಿದ್ದಾರೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.ನಿಷೇಧ ಮಾಡುವುದಾದರೆ, ಎರಡೂ ಕಡೆಗಳ ಸಂಘಟನೆಗಳ ಮೇಲೆ ಕ್ರಮ ಕೈಗೊಳ್ಳಬೇಕಾಗುತ್ತದೆ. ಪಿಎಫ್ಐ, ಎಸ್ಡಿಪಿಐ ಒಂದೆಡೆಯಾದರೆ ಬಲಪಂಥೀಯ ಸಂಘಟನೆಗಳ ಕಾರ್ಯಕರ್ತರೂ 9 ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ.

ಮುಖ್ಯಮಂತ್ರಿ ಪ್ರವಾಸದಲ್ಲಿದ್ದು, ಅವರು ಮರಳಿದ ನಂತರ ಈ ಕುರಿತು‌ ವಿಸ್ತೃತ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.

ಇಂದು ಹೆಚ್ಚು ಓದಿದ ಸುದ್ದಿ
►►ಜೈಲಿಗೆ ಹೋಗಿದ್ದ ಅಮಿತ್ ಶಾ ಹೇಳಿಕೆಯಿಂದ ಸಾಮರಸ್ಯಕ್ಕೆ ಧಕ್ಕೆ: ಐವನ್ ಡಿಸೋಜಾ:
http://bit.ly/2mmgTWN
►►ನಾಪತ್ತೆಯಾಗಿದ್ದ ಜೆಎನ್‌ಯು ಸಂಶೋಧನಾ ವಿದ್ಯಾರ್ಥಿ ಪತ್ತೆ: http://bit.ly/2D1pA3j
►►ಸಿದ್ಧರಾಮಯ್ಯ ವಿರುದ್ದ ಬಿಜೆಪಿಯಿಂದ ‘ನಾನೂ ಉಗ್ರ–ನನ್ನನ್ನೂ ಬಂಧಿಸಿ’ ಚಳವಳಿ: http://bit.ly/2munE9W
►►ಶತಕ ಭಾರಿಸಿದ ಇಸ್ರೋ: ನಭಕ್ಕೆ ಚಿಮ್ಮಿದ ಭಾರತದ 100ನೇ ಉಪಗ್ರಹ: http://bit.ly/2mvFYzH
►►ಸಿಎಂ ಹೆಸರಿನಲ್ಲಿ ರಾಮನ ಬದಲಾಗಿ ರಾವಣ ಇರಬೇಕಿತ್ತು: ಯಡಿಯೂರಪ್ಪ: http://bit.ly/2D0Vyxd
►►ಪೈಲಟ್ ಸಮಯಪ್ರಜ್ಞೆ: ಮಂಗಳೂರಿನಲ್ಲಿ ತಪ್ಪಿದ ವಿಮಾನ ದುರಂತ: http://bit.ly/2AQk1zk
►►ರಿಕ್ಷಾ ಢಿಕ್ಕಿ: ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಸಾವು: http://bit.ly/2ExApHr
►►ಧನ್ಯಶ್ರೀ ಆತ್ಮಹತ್ಯೆ. ಬೆದರಿಕೆ ಹಾಕಿ ಬಜರಂಗದಳಕ್ಕೂ ಮಾಹಿತಿ ನೀಡಿದ್ದ ಆರೋಪಿಯ ಬಂಧನ: http://bit.ly/2Ew2b71
►►ಗೋ ಸಾಗಾಟಗಾರರ ರಕ್ಷಣೆ ನಮ್ಮ ಸರ್ಕಾರದ ಹೊಣೆ: ಮನೋಹರ್ ಪರ್ರಿಕರ್: http://bit.ly/2EvLrwQ
►►ಸಿದ್ದರಾಮಯ್ಯ ಮಹಿಳೆಯ ಮೈ ಮುಟ್ಟಬಹುದೆ? ಬಿಜೆಪಿಯ 'ಲೋ ಲೆವೆಲ್' ಟ್ವೀಟ್‌ಗೆ ಆಕ್ರೋಶ: http://bit.ly/2AR2eIE

Related Tags: Mangaluru, Home Minister, Ramalinga Reddy, Lays Foundation Stone for Police Quarters, Kannada News, Karnataka News, Coastal Karnataka News, Karavali News, Karavali Karnataka, Latest Kannada News, ಕರಾವಳಿ ಸುದ್ದಿ, ಕರಾವಳಿ ಕರ್ನಾಟಕ ಸುದ್ದಿ
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ