ಕರಾವಳಿಯತ್ತ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಐರಾವತ ಪಲ್ಟಿ: 8 ಮಂದಿ ಸಾವು

ಕರಾವಳಿ ಕರ್ನಾಟಕ ವರದಿ

ಹಾಸನ:
  ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, 10 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಶಾಂತಿಗ್ರಾಮ ಬಳಿ ನಡೆದಿದೆ.

ಚಾಲಕ ಲಕ್ಷ್ಮಣ್(38), ಕಂಡಕ್ಟರ್ ಶಿವಪ್ಪ ಛಲವಾದಿ(36), ವೈದ್ಯಕೀಯ ವಿದ್ಯಾರ್ಥಿನಿ ಡಯಾನ(20), ಬೆಂಗಳೂರು ನಿವಾಸಿ ಗಂಗಾಧರ್(58) ಸೇರಿದಂತೆ ಇಬ್ಬರು ಮಹಿಳೆಯರು ಮತ್ತು 4 ಪುರುಷರು ಮೃತ ದುರ್ದೈವಿಗಳು. ಇಂದು ಮುಂಜಾನೆ 3:30ರ ವೇಳೆಯಲ್ಲಿ ರಾಷ್ಟ್ರೀಯ ಹೆದ್ದಾರಿ 75 ದಲ್ಲಿರುವ ಕೃಷಿ ಕಾಲೇಜು ಬಳಿ ಈ ಭೀಕರ ಅಪಘಾತ ಸಂಭವಿಸಿದೆ.

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬಸ್‌ನಲ್ಲಿ  ಸುಮಾರು 40 ಮಂದಿ ಪ್ರಯಾಣಿಕರಿದ್ದರು. ಹಾಸನದ ಕೃಷಿ ಕಾಲೇಜು ಬಳಿ ವೇಗವಾಗಿ ಬಂದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಎಡ ಬದಿಯ ಡಿವೈಡರ್‌ಗೆ ಡಿಕ್ಕಿ ಹೊಡೆದು ನಂತರ ಪಲ್ಟಿಯಾಗಿದೆ.

ದುರಂತಕ್ಕೆ ಅತಿವೇಗ ಹಾಗೂ ಚಾಲಕನ ನಿರ್ಲಕ್ಷ್ಯ ಕಾರಣ ಎನ್ನಲಾಗಿದೆ. ಮೃತದೇಹಗಳನ್ನು ಜಿಲ್ಲಾಸ್ಪತ್ರೆ ಶವಾಗಾರಕ್ಕೆ ಸಾಗಿಸಲಾಗಿದೆ. ಗಾಯಾಳುಗಳಿಗೆ ಜಿಲ್ಲಾಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳನ್ನು ಆಂಬುಲೆನ್ಸ್ ಮೂಲಕ ಹಾಸನ ಜಿಲ್ಲಾಸ್ಪತ್ರೆಗೆ ಮತ್ತು ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲಾಸ್ಪತ್ರೆಗೆ ಎಸ್‍ಪಿ ರಾಹುಲ್ ಕುಮಾರ್ ಭೇಟಿ ನೀಡಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಶಾಂತಿಗ್ರಾಮ ಪೊಲೀಸರು ಭೇಟಿ ನೀಡಿದ್ದು, ಕಮರಿಗೆ ಉರುಳಿ ಬಿದ್ದಿದ್ದ ಬಸ್ಸನ್ನು ಕ್ರೇನ್ ಮೂಲಕ ಪೊಲೀಸರು ಮೇಲಕ್ಕೆತ್ತಿಸಿದ್ದಾರೆ. ಈ ಸಂಬಂಧ ಶಾಂತಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಂತಿಗ್ರಾಮದ ಬಳಿ ಸಾರಿಗೆ ಬಸ್ ಅಪಘಾತಕ್ಕೆ ಸಾರಿಗೆ ಸಚಿವ ಎಚ್.ಎಂ.ರೇವಣ್ಣ ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ ರೂ 3 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.

ಗಾಯಾಳುಗಳ ಸಂಪೂರ್ಣ ವೈದ್ಯಕೀಯ ವೆಚ್ಚವನ್ನು ನಿಗಮದಿಂದ ಭರಿಸಲಾಗುವುದು, ಸ್ಥಳಕ್ಕೆ ತೆರಳಲು ಹಿರಿಯ ಅಧಿಕಾರಿಗಳ ತಂಡ ನಿಯೋಜಿಸಲಾಗಿದೆ ಎಂದು ಹೇಳಿದ್ದಾರೆ.ಇಂದು ಹೆಚ್ಚು ಓದಿದ ಸುದ್ದಿ
►►ಮುಸ್ಲಿಮರ ಬೈಕ್‌ಗೆ ದಿನ ರಾತ್ರಿ ಸರಣಿ ಬೆಂಕಿ: ಕೊನೆಗೂ ಆರೋಪಿಯ ಸೆರೆ
http://bit.ly/2D8sFQ0
►►ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ 'ಅಲ್ಲಾಡ್ಸು': ಜನ ಸೇರಿಸಲಿಕ್ಕಾಗಿ ವೇದಿಕೆಯಲ್ಲಿ ಮಾದಕ ನೃತ್ಯ: http://bit.ly/2D7Rx9s
►►ಉದಯವಾಣಿ ಕಾಲಂ ಹಠಾತ್ ಸ್ಥಗಿತ. ಪ್ರಜಾವಾಣಿಗೆ ಬರೆಯಲಿದ್ದಾರೆ ಪ್ರಕಾಶ್ ರೈ: http://bit.ly/2FuWrM8
►►ಸಿಸಿಬಿ ಅಧಿಕಾರಿಗಳಿಂದ ಕೈದಿಗಳ ಜಾತಿ ನಿಂದನೆ, ಹಲ್ಲೆ: ಆರೋಪ: http://bit.ly/2ASR8Tr
►►ಮಂಗಳೂರು: ಭಿನ್ನ ಕೋಮಿನ ಜೋಡಿ ಬಜರಂಗಿ ಕೈಗೆ: http://bit.ly/2mukjYC
►►ಮುಖ್ಯ ನ್ಯಾಯಮೂರ್ತಿ ವಿರುದ್ಧ 4 ನ್ಯಾಯಮೂರ್ತಿಗಳ ಸುದ್ದಿಗೋಷ್ಠಿ: ಇತಿಹಾಸದಲ್ಲಿ ಮೊದಲು: http://bit.ly/2D7jFuo
►►ಧನ್ಯಶ್ರೀ ಪ್ರಕರಣದಲ್ಲಿ ಬಿಜೆಪಿಯ ದ್ವಂದ್ವ ನಿಲುವು ಬಟಾಬಯಲಾಗಿದೆ: ರಾಮಲಿಂಗಾ ರೆಡ್ಡಿ: http://bit.ly/2qVf4pf
►►ಜೈಲಿಗೆ ಹೋಗಿದ್ದ ಅಮಿತ್ ಶಾ ಹೇಳಿಕೆಯಿಂದ ಸಾಮರಸ್ಯಕ್ಕೆ ಧಕ್ಕೆ: ಐವನ್ ಡಿಸೋಜಾ: http://bit.ly/2mmgTWN

Related Tags: Hasan KSRTC Accident, Shantigrama, 8 Dead, Diana, Medical Student
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ