ಸರ್ವಜ್ಞ ಪೀಠಾಹೋರಣ ಮಾಡಿದ ವಿದ್ಯಾಧೀಶ ಸ್ವಾಮೀಜಿ: ಪಲಿಮಾರು ಪರ್ಯಾಯ ಆರಂಭ

ಕರಾವಳಿ ಕರ್ನಾಟಕ ವರದಿ

ಉಡುಪಿ:
ವಿದ್ಯಾಧೀಶ ತೀರ್ಥ ಸ್ವಾಮೀಜಿ ಕೃಷ್ಣ ಮಠದ ಸರ್ವಜ್ಞ ಪೀಠಾರೋಹಣ ಮಾಡುವುದರೊಂದಿಗೆ ಪಲಿಮಾರು ಪರ್ಯಾಯ ವಿದ್ಯುಕ್ತವಾಗಿ ಆರಂಭವಾಯಿತು. 

ಸಂಪ್ರದಾಯದಂತೆ ಕಾಪುವಿನ ದಂಡತೀರ್ಥದಲ್ಲಿ ಪವಿತ್ರ ಸ್ನಾನ ಮಾಡಿ‌ ಇಲ್ಲಿನ ಜೋಡುಕಟ್ಟೆಗೆ ಬಂದ ಪಲಿಮಾರು ಮಠಾಧೀಶರಿಗೆ ಭವ್ಯ ಸ್ವಾಗತ ಕೋರಲಾಯಿತು. ಪಟ್ಟದ ದೇವರಿಗೆ ಪೂಜೆ ಸಲ್ಲಿಸಿದ ಅವರನ್ನು ವೈಭವದ ಮೆರವಣಿಗೆಯಲ್ಲಿ ರಥಬೀದಿಗೆ ಕರೆದೊಯ್ಯಲಾಯಿತು. 

ಕನಕನ ಕಿಂಡಿಯಲ್ಲಿ ಶ್ರೀಕೃಷ್ಣನ ದರ್ಶನ ಮಾಡಿದ ಅವರು ಅನಂತೇಶ್ವರ ಮತ್ತು ಚಂದ್ರಮೌಳೇಶ್ವರ ದೇವಾಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಕೃಷ್ಣ ಮಠ ಪ್ರವೇಶಿಸಿದ ಅವರು ಅಕ್ಷಯ ಪಾತ್ರೆಯನ್ನು ಸ್ವೀಕರಿಸಿ ಸರ್ವಜ್ಞ ಪೀಠವನ್ನು ಏರಿದರು. ಈ ಮೂಲಕ ದ್ವಿತೀಯ ಪರ್ಯಾಯ ಆರಂಭವಾಯಿತು. ಇನ್ನು ಎರಡು ವರ್ಷಗಳ ಕಾಲ  ಕೃಷ್ಣನ ಪೂಜಾ ಕೈಂಕರ್ಯವನ್ನು ಸ್ವಾಮೀಜಿ ನಿಭಾಯಿಸಲಿದ್ದಾರೆ.

 
ಈ ಬಾರಿಯ ಪರ್ಯಾಯ ಕಾರ್ಯಕ್ರಮ ಹಿಂದೆಂದಿಗಿಂತಲೂ ವೈಭವದಿಂದ ನಡೆಯಿತು. ಸ್ವಾಮೀಜಿ ಅವರ ಮೆರವಣಿಗೆ ಸಾಗುವ ಹಾದಿಯುದ್ದಕ್ಕೂ ವಿದ್ಯುತ್ ದೀಪದ ಸರದಿಂದ ಅಲಂಕರಿಸಲಾಗಿತ್ತು.

60ಕ್ಕೂ ಹೆಚ್ಚು ತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು. ವೇದಘೋಷ, ಭಜನಾ ತಂಡ, ಚೆಂಡೆ, ಬ್ಯಾಂಡ್‌ಸೆಟ್‌, ಕುಂಭಾಶಿ ಡೋಲು. ಪಂಚವಾದ್ಯ ಹಾಗೂ ವಿವಿಧ ಬ್ಯಾಂಡ್‌ಸೆಟ್‌ ತಂಡಗಳು ಹೊಮ್ಮಿಸಿದ ನಾದ ಕಿವಿಗಡಚಿಕ್ಕುವಂತಿತ್ತು. ವಿವಿಧ ಬಿರುದಾವಳಿ, ತಟ್ಟೀರಾಯ, ಹೋಳಿ ಕುಣಿತ, ಡೊಳ್ಳು ಕುಣಿತ. ವೀರಗಾಸೆ ಕರಗ ಕೋಲಾಟ, ಸೋಮನ ಕುಣಿತ ತಂಡಗಳು ಮೆರವಣಿಗೆಯ ಕಳೆಯನ್ನು ಹೆಚ್ಚಿಸಿದವು. ತಾಲೀಮು ತಂಡಗಳ ಕಸರತ್ತು ಹುಬ್ಬೇರುವಂತೆ ಮಾಡಿತು. ಹತ್ತಾರು ಸಂಘ ಸಂಸ್ಥೆಗಳು ನಗರದ ಪ್ರಮುಖ ಬೀದಿಗಳಲ್ಲಿ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ವೀಕ್ಷಿಸಲು ಭಾರಿ ಸಂಖ್ಯೆಯಲ್ಲಿ ಜನರು ಸೇರಿದ್ದರು.
ನಗರದ ಜೋಡುಕಟ್ಟೆಯಲ್ಲಿ 3.15 ರ ಸುಮಾರಿಗೆ ಅಷ್ಟಮಠಾಧೀಶರ ಸಂಗಮವಾಯಿತು. ಪಲಿಮಾರು ಸ್ವಾಮಿಗಳ ಎರಡನೇ ಪರ್ಯಾಯ ಮಹೋತ್ಸವ ಆರಂಭಕ್ಕೆ ಮುನ್ನ ಜೋಡುಕಟ್ಟೆಯಲ್ಲಿ ಪಟ್ಟದ ದೇವರಿಗೆ ಪೂಜೆ ಸಲ್ಲಿಕೆ ಮಾಡಲಾಯ್ತು.

ಪಲಿಮಾರು, ಕೃಷ್ಣಾಪುರ, ಶಿರೂರು, ಕಾಣಿಯೂರು, ಸೋದೆ, ಅದಮಾರುಕಿರಿಯ ಸ್ವಾಮೀಜಿ ಪರ್ಯಾಯ ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. ರಾಷ್ಟ್ರದ ವಿವಿಧೆಡೆಯಿಂದ ಬಂದ ಸಾಂಸ್ಕೃತಿಕ ತಂಡಗಳು ಮೆರವಣಿಗೆಯ ಮೆರುಗು ಹೆಚ್ಚಿಸಿದವು. ಜೋಡುಕಟ್ಟೆಯಲ್ಲಿ ಕುಳಿತು ಅಷ್ಟಮಠಾಧೀಶರು ಮೆರವಣಿಗೆ ವೀಕ್ಷಣೆ ಮಾಡಿದರು. ಜೋಡು ಕಟ್ಟೆಯಿಂದ ರಾಜ ಮಾರ್ಗದಲ್ಲಿ ಮೆರವಣಿಗೆ ಸಾಗಿತು. ರಸ್ತೆಯ ಇಕ್ಕೆಲಗಳಲ್ಲಿ ಲಕ್ಷಾಂತರ ಮಂದಿ ವೀಕ್ಷಣೆ ಮಾಡಿದರು. 

ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ಇಂದು ಹೆಚ್ಚು ಓದಿದ ಸುದ್ದಿ
►►ತಾಯಿಯ ಸಾವಿನ ಸುದ್ದಿ: ಮಗ ಆತ್ಮಹತ್ಯೆ:
http://bit.ly/2EK6dsw
►►ನಾನೆಲ್ಲಿಗೆ ಹೋದರೂ ಶುದ್ಧಮಾಡುತ್ತೀರಾ? ಪ್ರಕಾಶ್ ರೈ ಲೇವಡಿ: http://bit.ly/2mJl9AS
►►ಬೈಕ್‌ಗೆ ಬೆಂಕಿ ಪ್ರಕರಣ. ಬಂಧಿತ ಆರೋಪಿ ಅಮಾಯಕನೆಂದು ಬಿಜೆಪಿ ವಾದ: http://bit.ly/2mCzEp2
►►ಹಜ್ ಯಾತ್ರೆ ಸಹಾಯಧನ ರದ್ದು: ಮುಕ್ತಾರ್ ಅಬ್ಬಾಸ್ ನಖ್ವಿ: http://bit.ly/2DjEnX3
►►ನನ್ನನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲು ಸಂಚು: ತೊಗಾಡಿಯಾ ಆರೋಪ: http://bit.ly/2B4o9fr
►►ಇವ ‘ನಮ್ಮವ’, ‘ಮೊಹಮ್ಮದ್’ ಎಂದು ಗುರುತಿಸಿಕೊಂಡಿದ್ದ ದೀಪಕ್: http://bit.ly/2EKHd4w
►►ಅಪಘಾತದ ಸ್ಥಳಕ್ಕೆ ನೆರವಿಗೆ ಧಾವಿಸಿದ್ದ ಕಾಲೇಜು ವಿದ್ಯಾರ್ಥಿಯೇ ಅಪಘಾತಕ್ಕೆ ಬಲಿ: http://bit.ly/2D8LFtu
►►ಬೈಂದೂರು: ಬಸ್ ಅಪಘಾತಕ್ಕೆ ಫಾದರ್ ಅಬ್ರಹಾಂ ಬಲಿ: http://bit.ly/2DhSBsj
►►ಪ್ರಕಾಶ್ ರೈ ಮಾತಾಡಿದ ಸ್ಥಳದಲ್ಲಿ ಗೋಮೂತ್ರ ಸಿಂಪಡಿಸಿದ ಬಿಜೆಪಿ: http://bit.ly/2EJPy8x
►►‘ಅಚ್ಛೇ ದಿನ್’: ಗಗನಕ್ಕೇರಿದ ಪೆಟ್ರೋಲ್, ಡೀಸೆಲ್ ದರ: http://bit.ly/2DChax1

Related Tags: Paryaya Pejavara Swamiji, Phalimaru Mutt, Vidhyadeesha Swamiji, Udupi Paryaya Mahotsava
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ