ಪರಿವರ್ತನಾ ರ‍್ಯಾಲಿ ಸಮಾರೋಪಕ್ಕೆ ಪ್ರಧಾನಿ ಮೋದಿ: ಬಿಗಿ ಬಂದೋಬಸ್ತ್

ಕರಾವಳಿ ಕರ್ನಾಟಕ ವರದಿ

ಬೆಂಗಳೂರು:
ನಗರದ ಅರಮನೆ ಮೈದಾನದಲ್ಲಿ ನಡೆಯಲಿರುವ ಬಿಜೆಪಿ ಪರಿವರ್ತನಾ ರ‍್ಯಾಲಿ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ನಗರಕ್ಕೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಪರಾಹ್ನ ಅರಮನೆ ಮೈದಾನದಲ್ಲಿ ಬೃಹತ್ ರ‍್ಯಾಲಿ ಉದ್ದೇಶಿಸಿ ಮಾತನಾಡಲಿದ್ದು, ಕಾರ್ಯಕ್ರಮಕ್ಕೆ ವೇದಿಕೆ ಸಜ್ಜುಗೊಂಡಿದೆ. ಇಂದು ಮುಂಜಾನೆಯಿಂದಲೇ ಅರಮನೆ ಮೈದಾನ ರಸ್ತೆ ಉದ್ದಕ್ಕೂ ಪೊಲೀಸ್ ಸಿಬ್ಬಂದಿಗಳು ನಿಯೋಜನೆಗೊಂಡಿದ್ದಾರೆ.

ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದ್ದು, ಅರಮನೆ ಮೈದಾನ ಮಾರ್ಗವಾಗಿ ಸಂಚರಿಸುವ ಸಾರ್ವಜನಿಕರು ಪ್ರತ್ಯೇಕ ಮಾರ್ಗದಲ್ಲಿ ಸಂಚರಿಸುವ ಮೂಲಕ ಸಹಕರಿಸಬೇಕೆಂದು ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

ಸಮಾವೇಶದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಸುಮಾರು ಮೂರೂವರೆ ಲಕ್ಷ ಜನ ಭಾಗಿಯಾಗುವ ನಿರೀಕ್ಷೆ ಇದೆ. ಈಗಾಗಲೇ ಹಲವು ಕಡೆಗಳಿಂದ ಕಾರ್ಯಕರ್ತರು ಬಸ್ಸು, ಜೀಪುಗಳಲ್ಲಿ ಬಂದು ನಗರದಲ್ಲಿ ಜಮಾಯಿಸಿದ್ದಾರೆ.

ಪ್ರಧಾನಿ ಮೋದಿಯವರು ಮಧ್ಯಾಹ್ನ 1 ಗಂಟೆಗೆ ದೆಹಲಿಯಿಂದ ಹೊರಟು 3.30ರ ವೇಳೆಗೆ ಎಚ್‍ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಅಲ್ಲಿಂದ ನೇರವಾಗಿ ವಿಶೇಷ ಹೆಲಿಕಾಪ್ಟರ್ ಮೂಲಕ 3.50ಕ್ಕೆ ಜೆಸಿನಗರದ ಹೆಲಿಪ್ಯಾಡ್‍ಗೆ ಬಂದಿಳಿಯಲಿದ್ದು, ಅಲ್ಲಿಂದ 3.55ಕ್ಕೆ ಸಮಾವೇಶಕ್ಕೆ ಆಗಮಿಸಿ, 1 ಗಂಟೆಗಳ ಕಾಲ ಭಾಷಣ ಮಾಡಲಿದ್ದಾರೆ.

ರಾಜ್ಯಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿರುವ ಮಹದಾಯಿ ವಿವಾದ ಕುರಿತು ಸಮಾವೇಶದಲ್ಲಿ ಮೋದಿ ಅವರು ಪ್ರಸ್ತಾಪಿಸಿ ಪರಿಹಾರದ ಭರವಸೆ ನೀಡಬಹುದು ಎಂಬ ನಿರೀಕ್ಷೆ ಇತ್ತು. ಆದರೆ, ಮೋದಿ ಅವರು ಮಹದಾಯಿ ವಿಚಾರ ಪ್ರಸ್ತಾಪಿಸುವ ಸಾಧ್ಯತೆ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಈಗಾಗಲೇ ಪರೋಕ್ಷವಾಗಿ ಹೇಳಿದ್ದಾರೆ. ಆದರೂ ಪ್ರಧಾನಿ ಈ ಬಗ್ಗೆ ಪ್ರಸ್ತಾಪಿಸುತ್ತಾರೆ ಎಂಬ ನಿರೀಕ್ಷೆಯಲ್ಲಿ ಜನರಿದ್ದಾರೆ.

ಮಹದಾಯಿ ವಿವಾದದಲ್ಲಿ ಪ್ರಧಾನಿ ಅವರು ಮಧ್ಯಸ್ಥಿಕೆ ವಹಿಸಬೇಕೆಂದು ಕನ್ನಡ ಪರ ಸಂಘಟನೆಗಳು ಒತ್ತಾಯಿಸುತ್ತಿದ್ದು, ಮೋದಿ ಅವರ ಗಮನ ಸೆಳೆಯಲು ಪ್ರತಿಭಟನೆ ಹಮ್ಮಿಕೊಂಡಿವೆ ಆ ಕಾರಣದಿಂದ ಪೊಲೀಸರು ಬಂದೋಬಸ್ತ್ ಹೆಚ್ಚಿಸಿದ್ದಾರೆ.

ಪ್ರತಿಭಟನಾಕಾರರನ್ನು ಯಾವುದೇ ಕಾರಣಕ್ಕೆ ಸಮಾವೇಶ ನಡೆಯುತ್ತಿರುವ ಅರಮನೆ ಮೈದಾನವನ್ನು ಪ್ರವೇಶಕ್ಕೆ ಬಿಡುವುದಿಲ್ಲ ಎಂದು ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಈಗಾಗಲೇ ಎಚ್ಚರಿಕೆ ಸಹ ನೀಡಿದ್ದಾರೆ.

ಸಮಾವೇಶ ಭದ್ರತೆಗೆ 11 ಡಿಸಿಪಿ, 30 ಎಸಿಪಿ, 200 ಪಿಎಸ್‌ಐಗಳು, 3000 ಕ್ಕೂ ಹೆಚ್ಚು ಪೊಲೀಸ್ ಕಾನ್ಸ್‌ಟೇಬಲ್‌ಗಳು 50 ಕೆಎಸ್‌ಆರ್‌ಪಿ ತುಕಡಿ, 30 ಸಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಇಂದು ಓದಿದ ಹೆಚ್ಚು ಸುದ್ದಿಗಳು:
►►ಸುರತ್ಕಲ್ ಇಂದಿರಾ ಗಾಂಧಿ ಚಿತ್ರಕ್ಕೆ ಮಸಿ: ಡಿವೈಎಫ್ಐ ಖಂಡನೆ:
http://bit.ly/2E0waZi
►►ಉಡುಪಿ ಕೃಷ್ಣನಿಗೆ 1 ಗ್ರಾಂ. ಚಿನ್ನದ ತುಳಸಿ ಕೊಡಿ: ಪಲಿಮಾರು ಮಠಾಧೀಶ: http://bit.ly/2EA27ob
►►ಬಿಜೆಪಿ ಸೇರಿದ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಖಾಸ್‌ಬಾತ್…: http://bit.ly/2GHpPzo
►►ಕುಂದಾಪುರ: ಕಾಂಗ್ರೆಸ್ ಗತವೈಭವ ಮರುಸ್ಥಾಪಿಸುವರೆ ರಾಕೇಶ್ ಮಲ್ಲಿ?: http://bit.ly/2ED2bmU
►►ಶೌಚಾಲಯದೊಳಗೆ ಶಾಲಾ ಬಾಲಕನ ಹತ್ಯೆ: ಮೂವರು ಸಹಪಾಠಿಗಳ ಸೆರೆ: http://bit.ly/2DXXlE4

Related Tags: Karnataka BJP Parivartan Rally, PM Mod, Bengaluru, February 4, Kannada News, Karavalikarnataka News
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ