ರಾಘವೇಶ್ವರ ಶ್ರೀ ಬ್ಲ್ಯಾಕ್‌ಮೇಲ್ ಪ್ರಕರಣ: ಏಳು ಮಂದಿಗೆ ಸಮನ್ಸ್

ರವಿತೇಜ ಕಾರವಾರ/ಕರಾವಳಿ ಕರ್ನಾಟಕ ವರದಿ

ಕಾರವಾರ:
ರಾಮಚಂದ್ರಾಪುರ ಮಠ ಹಾಗೂ ರಾಘವೇಶ್ವರ ಶ್ರೀಗಳ ವಿರುದ್ಧ ಮಾಡಲಾಗಿದ್ದ ಬ್ಲ್ಯಾಕ್‌ಮೇಲ್ ಪ್ರಕರಣಕ್ಕೆ ಸಂಬಂಧಿಸಿ ಪ್ರೇಮಲತಾ ದಿವಾಕರ್ ದಂಪತಿ ಮತ್ತು ಚ. ಮೂ ಕೃಷ್ಣಶಾಸ್ತ್ರಿ ಸೇರಿದಂತೆ 7 ಜನರ ವಿರುದ್ಧ ದೂರು ದಾಖಲಿಸಿ, ಸಮನ್ಸ್ ಜಾರಿಗೊಳಿಸುವಂತೆ ನ್ಯಾಯಾಲಯ ಆದೇಶಿಸಿದೆ.

ಜನವರಿ 29ರಂದು ಸಿಐಡಿ ಸಲ್ಲಿಸಿದ್ದ ಬಿ'ರಿಪೋರ್ಟ್ ತಿರಸ್ಕರಿಸಿದ್ದ ನ್ಯಾಯಾಲಯ, ಇದೀಗ ಪ್ರೇಮಲತಾ, ದಿವಾಕರ್ ಶಾಸ್ತ್ರಿ, ಚ.ಮೂ ಕೃಷ್ಣಶಾಸ್ತ್ರಿ, ಸಿ.ಎಂ.ಎನ್ ಶಾಸ್ತ್ರಿ, ಗಂಗಾಧರ ಶಾಸ್ತ್ರಿ, ಸರಕಾರಿ ಅಭಿಯೋಜಕ ಬಿ.ಟಿ ವೆಂಕಟೇಶ್, ಬಿ ಪದ್ಮನಾಭ ಶರ್ಮ ಎಂಬುವರ ವಿರುದ್ಧ ಐಪಿಸಿ 384, 389, 504, 506, 511, 120(ಬಿ) ಅನ್ವಯ ಕ್ರಿಮಿನಲ್ ಕೇಸ್ ದಾಖಲಿಸುವಂತೆ ನ್ಯಾಯಾಲಯ ಆದೇಶಿಸಿದೆ.

ಜೊತೆಗೆ ಎಲ್ಲಾ ಏಳು ಆರೋಪಿಗಳಿಗೂ ಸಮನ್ಸ್ ಜಾರಿಗೊಳಿಸಿ ಮುಂದಿನ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ರಾಮಚಂದ್ರಾಪುರ ಮಠದ ಭಕ್ತರು ದಾಖಲಿಸಿದ್ದ ದೂರಿನನ್ವಯ ಸಿಐಡಿ ಸಲ್ಲಿಸಿದ್ದ 'ಬಿ' ರಿಪೋರ್ಟ್ ತಿರಸ್ಕರಿಸಿ; ವಿಚಾರಣೆ ಆರಂಭಿಸಿರುವ ಹೊನ್ನಾವರದ ನ್ಯಾಯಾಲಯ ಪೂರಕ ದಾಖಲೆಗಳು ಲಭ್ಯವಾಗಿರುವುದರಿಂದ ಈ ಕ್ರಮ ಕೈಗೊಂಡಿದೆ.

ಬ್ಲ್ಯಾಕ್‌ಮೇಲ್ ಕೇಸಿಗೆ ಸಂಬಂಧಿಸಿ ಬಂಧಿತರಾಗಿದ್ದ ಪ್ರೇಮಲತಾ ದಂಪತಿಗಳು, ಪಂಚನಾಮೆಯಲ್ಲಿ ತಾವು ರಾಮಚಂದ್ರಾಪುರ ಮಠವನ್ನು ಬ್ಲ್ಯಾಕ್‍ಮೇಲ್ ಮಾಡಿರುವುದಾಗಿ ಹಾಗೂ ರಾಘವೇಶ್ವರ ಶ್ರೀಗಳ ವಿರುದ್ಧ ಸುಳ್ಳು ಅತ್ಯಾಚಾರ ಆರೋಪ ದಾಖಲಿಸುವ ಪ್ರಯತ್ನ ಮಾಡಿರುವುದಾಗಿ ಒಪ್ಪಿಕೊಂಡಿದ್ದರು.

ಆದರೆ ಬಲವಾದ ಸಾಕ್ಷಗಳ ಹೊರತಾಗಿಯೂ 'ಬಿ' ರಿಪೋರ್ಟ್ ಸಲ್ಲಿಸಿ ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ನಡೆದಿತ್ತು. ಇದೀಗ ನ್ಯಾಯಾಲಯ ವಿಚಾರಣೆ ಆರಂಭಿಸಿದ್ದು, ಆರೋಪಿಗಳಾದ ಪ್ರೇಮಲತಾ ದಂಪತಿ, ಚ ಮೂ ಕೃಷ್ಣಶಾಸ್ತ್ರಿ ಹಾಗೂ ಮತ್ತಿತರ ವಿರುದ್ಧ ಕ್ರಮಕ್ಕೆ ನ್ಯಾಯಾಲಯ ಮುಂದಾಗಿದೆ.

ಇಂದು ಓದಿದ ಹೆಚ್ಚು ಸುದ್ದಿಗಳು
►►ಗುಂಡೂರಾವ್ ಅಯೋಗ್ಯ ಎನ್ನುವುದು ಸಾಬೀತು: ಬಿಎಸ್ ಯಡಿಯೂರಪ್ಪ:
http://bit.ly/2EgPkpG
►►ಸೇನಾ ಕ್ಯಾಂಪ್ ಮೇಲೆ ಉಗ್ರರ ದಾಳಿ: ಮೂವರಿಗೆ ಗಾಯ: http://bit.ly/2BkL7CI
►►ಅರೆಬೆಂದ ಶವದ ಗುರುತು ಪತ್ತೆ: ಗುರುತು ಹಿಡಿಯಲು ನೆರವಾದ ಮುರಿದ ಹಲ್ಲು: http://bit.ly/2Egio4Q
►►ದುಬೈ ನಗರಿಯನ್ನು ಮಂತ್ರಮುಗ್ದಗೊಳಿಸಿದ ಎಚ್‌ಎಮ್‌ಸಿ ಯುನೈಟೆಡ್ ಪೀಸ್ ಅವಾರ್ಡ್ಸ್: http://bit.ly/2EdzDU7
►►ಆತ್ಮಚರಿತ್ರೆಯಲ್ಲ. ಅದು ಪೂಜಾರಿಯ ಪಾಪದ ಕೊಡ: ಶಾಸಕ ಮಧು ಬಂಗಾರಪ್ಪ: http://bit.ly/2EwB8wc
►►ಟಾರ್ಗೆಟ್ ಇಲ್ಯಾಸ್ ಹತ್ಯೆ: ಇಬ್ಬರು ಶಂಕಿತ ಆರೋಪಿಗಳ ಬಂಧನ: http://bit.ly/2BNVmjT
►►ಪತ್ನಿಯ ಕೊಲೆ: ಆರೋಪಿಗೆ ಜೀವಾವಧಿ ಶಿಕ್ಷೆ. 1.25 ಲಕ್ಷ ರೂ. ದಂಡ: http://bit.ly/2EfLhtW

Related Tags: Raghaveshwara Swamiji, Rape Case, Premalatha, Kannada News, Karavalikarnataka News
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ