ಅವಲಕ್ಕಿ ಗಂಟಲಲ್ಲಿ ಸಿಲುಕಿ 3 ವರ್ಷದ ಮಗು ಮೃತ್ಯು

ಅಝೀಝ್ ಕಿರುಗುಂದ/ಕರಾವಳಿ ಕರ್ನಾಟಕ ವರದಿ

ಚಿಕ್ಕಮಗಳೂರು:
ಗಂಟಲಲ್ಲಿ ತೆಂಗಿನಕಾಯಿ ಸಿಲುಕಿ ಶಿಕ್ಷಕಿಯೊಬ್ಬರು ಮೃತಪಟ್ಟ ಘಟನೆ ನೆನಪು ಹಸಿರಾಗಿರುವಾಗಲೇ ಅವಲಕ್ಕಿ ಗಂಟಲಲ್ಲಿ ಸಿಲುಕಿ 3 ವರ್ಷದ ಮಗುವೊಂದು ಸಾವನ್ನಪ್ಪಿದ ಖೇದಕರ ಘಟನೆ ವರದಿಯಾಗಿದೆ.

ತಾಲೂಕಿನ ಮೂಗ್ತಿಹಳ್ಳಿ ಸಮೀಪದ ಶಿರಗುಂದ ನಿವಾಸಿ ದುರ್ಗಾಪ್ರಸಾದ್ ಅವರ ಪುತ್ರ ಅನೀಶ್ (3) ಮೃತಪಟ್ಟ ಬಾಲಕ.

ಅವಲಕ್ಕಿ ತಿನ್ನುವಾಗ ಗಂಟಲಲ್ಲಿ ಸಿಲುಕಿದ್ದರಿಂದ ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು. ಅಲ್ಲಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಉಸಿರುಗಟ್ಟಿದ್ದ ಮಗುವಿಗೆ ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಆಸ್ಪತ್ರೆಗೆ ಕರೆದುಕೊಂಡು ಹೋಗಲು ವೈದ್ಯರು ಸಲಹೆ ನೀಡಿದ್ದರು. ಆದರೆ ಮಾರ್ಗ ಮಧ್ಯದಲ್ಲೇ ಮಗು ಕೊನೆಯುಸಿರೆಳೆದಿದೆ.

ತಿಂಗಳ ಹಿಂದಷ್ಟೇ ತಾಲೂಕಿನ ಆಲ್ದೂರಿನಲ್ಲಿ ಮಗುವೊಂದು ಮೊಬೈಲ್ ಚಾರ್ಜರನ್ನು ಬಾಯಲ್ಲಿ ಅಗಿದು ವಿದ್ಯುತ್ ಶಾಕ್ ನಿಂದ ಮೃತಪಟ್ಟಿತ್ತು.

ಇಂದು ಓದಿದ ಹೆಚ್ಚು ಸುದ್ದಿಗಳು
►►ಮಗನನ್ನು ಚೂರಿಯಿಂದ ಇರಿದು ಕೊಲೆಗೈದ ತಂದೆ ಪೊಲೀಸ್ ಬಲೆಗೆ:
http://bit.ly/2nZOaYB
►►ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಚಂದ್ರಶೇಖರ್​ ಕಂಬಾರ: http://bit.ly/2BTKgKa
►►ಕಂಬಳ ತಡೆಗೆ ಸುಪ್ರೀಂ ನಕಾರ: ಪೇಟಾ ಸಲ್ಲಿಸಿದ್ದ ಅರ್ಜಿ ವಜಾ: http://bit.ly/2BT47JA
►►ಮಂಗಳೂರು ಅನೈತಿಕ ಗೂಂಡಾಗಿರಿ: ಸಂತ್ರಸ್ತರ ವಿರುದ್ದವೇ ದೂರು ದಾಖಲು: http://bit.ly/2EYB9Xw

Related Tags: Chikkamagalur, Aneesh Death, Three Years Old Baby Died, Kannada News, Karnataka News, Coastal Karnataka News, Karavali News, Karavali Karnataka, Latest Kannada News, ಕರಾವಳಿ ಸುದ್ದಿ, ಕರಾವಳಿ ಕರ್ನಾಟಕ ಸುದ್ದಿ
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ